AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜ್​ಕುಮಾರ್ ಬರ್ತ್​ಡೇ ದಿನ ಯುವ ಮುಂದಿನ ಸಿನಿಮಾ ಅನೌನ್ಸ್? ಸೂಚನೆ ಕೊಟ್ಟ ನಟ
ಯುವ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:01 AM

Share

ಯುವ ರಾಜ್​ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್​ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್​ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ರಾಜ್​ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.

ಏಪ್ರಿಲ್ 24ರಂದು ರಾಜ್​ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್​ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್​ಕುಮಾರ್.

ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್​ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್​ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ 

‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್