ಯುವ ರಾಜ್ಕುಮಾರ್ ಅವರು ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಪುನೀತ್ ರಾಜ್ಕುಮಾರ್ ಜೊತೆ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಸಂತೋಷ್ ಆನಂದ್ರಾಮ್ ನಿರ್ದೇಶನದಲ್ಲಿ ‘ಯುವ’ ಸಿನಿಮಾ ಮೂಡಿಬಂದಿತ್ತು. ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ರಾಜ್ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.
ಏಪ್ರಿಲ್ 24ರಂದು ರಾಜ್ಕುಮಾರ್ ಅವರ ಜನ್ಮದಿನ. ಅವರು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಎಲ್ಲರಿಂದಲೂ ಆಗುತ್ತಿದೆ. ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕರು. ‘ರಾಜ್ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್ಕುಮಾರ್.
ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.
ಇದನ್ನೂ ಓದಿ: ‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್ ಬಗ್ಗೆ ಯುವ ರಾಜ್ಕುಮಾರ್ ಭಾವುಕ ನುಡಿ
‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಯುವ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ ಸೇರಿ ಅನೇಕರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಇದಕ್ಕೆ ಬಂಡವಾಳ ಹೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ