Yuva: ಯುವ ರಾಜ್​ಕುಮಾರ್ ಮೊದಲ ಸಿನಿಮಾ ಟೈಟಲ್ ಟೀಸರ್ ಬಿಡುಗಡೆ

Yuva Rajkumar New Movie Title ಯುವ ರಾಜ್​ಕುಮಾರ್ ನಟನೆಯ ಹೊಸ ಸಿನಿಮಾದ ಟೈಟಲ್ ಹಾಗೂ ಟೈಟಲ್ ಟೀಸರ್ ಇಂದು ಬಿಡುಗಡೆ ಆಗಿದೆ. ಯೂಥ್​ಫುಲ್ ಆದ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.

Yuva: ಯುವ ರಾಜ್​ಕುಮಾರ್ ಮೊದಲ ಸಿನಿಮಾ ಟೈಟಲ್ ಟೀಸರ್ ಬಿಡುಗಡೆ
ಯುವ ರಾಜ್​ಕುಮಾರ್ ಸಿನಿಮಾ ಟೈಟಲ್ ಲಾಂಚ್
Follow us
ಮಂಜುನಾಥ ಸಿ.
|

Updated on:Mar 03, 2023 | 7:11 PM

ದೊಡ್ಮನೆಯ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್​ಕುಮಾರ್ (Yuva Rajkumar) ಇಂದು ಅಧಿಕೃತವಾಗಿ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾದ ಟೈಟಲ್ ಇಂದು ಬಿಡುಗಡೆ ಆಗಿದ್ದು, ಯೂಥ್​ಫುಲ್ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.

ಯುವ ರಾಜ್​ಕುಮಾರ್ ಮೊದಲ ಸಿನಿಮಾಕ್ಕೆ ‘ಯುವ’ ಎಂದು ಹೆಸರಿಡಲಾಗಿದೆ. ಸಿನಿಮಾದ ಟೈಟಲ್ ಟೀಸರ್ (Title Teaser) ಬಿಡುಗಡೆ ಕಾರ್ಯಕ್ರಮವು ನಗರದ ಅಶೋಕ ಹೋಟಲ್ ನಲ್ಲಿ ಅದ್ಧೂರಿಯಾಗಿ ನಡೆದಿದೆ. ಜೊತೆಗೆ ಬೆಂಗಳೂರಿನ ಕುರುಬರಹಳ್ಳಿಯ ಅಣ್ಣಾವ್ರ ಪ್ರತಿಮೆ ಬಳಿ ಎಲ್ ಈ ಡಿ ಸ್ಕ್ರಿನ್ ನಲ್ಲಿ ಪ್ರದರ್ಶನ ಮಾಡಿದ ಜೊತೆಗೆ ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಸಹ ಟೈಟಲ್ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ.

ಟೈಟಲ್ ಬಿಡುಗಡೆಗೆ ಮುನ್ನ ಯುವ ರಾಜ್​ಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಶ್ ಆನಂದ್ ರಾಮ್​ ಅವರುಗಳು ಶೇಷಾದ್ರಿ ಪುರಂ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ಅಶೋಕ ಹೋಟೆಲ್​ಗೆ ತೆರಳಿ ಅಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಟೈಟಲ್ ಅನ್ನು ಅನಾವರಣ ಮಾಡಿದರು.

ಸಿನಿಮಾದ ಟೈಟಲ್ ಟೀಸರ್ ಸಹ ಬಿಡುಗಡೆ ಆಗಿದ್ದು, ಸಿನಿಮಾ ಭರ್ಜರಿ ಆಕ್ಷನ್ ಸಿನಿಮಾ ಆಗಿರುವ ಸೂಚನೆ ನೀಡಿದೆ. ಟೈಟಲ್ ಟೀಸರ್​ನಲ್ಲಿಯೇ ಸುತ್ತಿಗೆ, ಬ್ಯಾಟು, ಕತ್ತಿಗಳು ರಾರಾಜಿಸಿವೆ. ಖಡಕ್ ಧ್ವನಿಯನ್ನು ಡೈಲಾಗ್ ಸಹ ಹೊಡೆದಿರುವ ಯುವ ರಾಜ್​ಕುಮಾರ್, ನೀನು ದಾಟಿರುವುದು ಬ್ಲಡ್​ಲೈನ್, ರಕ್ತ ಹರಿದೇ ಹರಿಯುತ್ತೆ ಎಂದು ವಿಲನ್​ಗಳಿಗೆ ಎಚ್ಚರಿಕೆ ಸಹ ನೀಡಿದ್ದಾರೆ. ಈ ಸಿನಿಮಾವು ಗ್ಯಾಂಗ್​ವಾರ್​ಗೆ ಸಂಬಂಧಿಸಿದ ಕತೆ ಹೊಂದಿರುವ ಸುಳಿವೂ ಸಹ ಟೈಟಲ್ ಟೀಸರ್​ನಲ್ಲಿದೆ.

ಸಿನಿಮಾದ ಟೈಟಲ್ ಬಿಡುಗಡೆ ದಿನವೇ ಸಿನಿಮಾ ಬಿಡುಗಡೆ ದಿನಾಂಕವನ್ನೂ ಘೋಷಿಸಲಾಗಿದ್ದು, ಯುವ ರಾಜ್​ಕುಮಾರ್ ಮೊದಲ ಸಿನಿಮಾ ಯುವ, ಇದೇ ವರ್ಷಾಂತ್ಯ ಡಿಸೆಂಬರ್ 22ನೇ ತಾರೀಖು ಬಿಡುಗಡೆ ಆಗಲಿದೆ.

ಅಪ್ಪು ನಿಧನದ ಬಳಿಕ ಅವರ ಸ್ಥಾನವನ್ನು ಯುವ ರಾಜ್​ಕುಮಾರ್ ತುಂಬಬೇಕು ಎಂದು ಹಲವು ದೊಡ್ಮನೆ ಕುಟುಂಬದ ಅಭಿಮಾನಿಗಳು ಒತ್ತಾಯಿಸಿದ್ದರು. ಅಂತೆಯೇ ಅಪ್ಪು ಗಾಗಿ ಮಾಡಿದ್ದ ಕತೆಯನ್ನು ತುಸು ಬದಲಾಯಿಸಿ ನಿರ್ದೇಶಕ ಸಂತೋಶ್ ಆನಂದ್ ರಾಮ್ ಯುವ ರಾಜ್​ಕುಮಾರ್​ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಹೊಂಬಾಳೆ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Fri, 3 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ