ದೊಡ್ಡ ಮೊತ್ತಕ್ಕೆ ಸೇಲ್​ ಆಯ್ತು ‘ಯುವ’ ಆಡಿಯೋ ಹಕ್ಕು; ಮಾ.29ಕ್ಕೆ ಸಿನಿಮಾ ರಿಲೀಸ್​

ಅಣ್ಣಾವ್ರ ಮೊಮ್ಮಗ ಯುವ ರಾಜ್​ಕುಮಾರ್​ ನಟನೆಯ ಮೊದಲ ಸಿನಿಮಾ ಎಂಬ ಕಾರಣಕ್ಕೆ ‘ಯುವ’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಹಾಡುಗಳ ಪ್ರಸಾರದ ಹಕ್ಕನ್ನು ‘ಆನಂದ್​ ಆಡಿಯೋ’ ಸಂಸ್ಥೆ ಖರೀದಿಸಿದೆ. ಆ ಬಗ್ಗೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’​ ಮಾಹಿತಿ ಹಂಚಿಕೊಂಡಿದೆ.

ದೊಡ್ಡ ಮೊತ್ತಕ್ಕೆ ಸೇಲ್​ ಆಯ್ತು ‘ಯುವ’ ಆಡಿಯೋ ಹಕ್ಕು; ಮಾ.29ಕ್ಕೆ ಸಿನಿಮಾ ರಿಲೀಸ್​
ಯುವ ಸಿನಿಮಾ ತಂಡ
Follow us
ಮದನ್​ ಕುಮಾರ್​
|

Updated on: Feb 22, 2024 | 3:43 PM

‘ಹೊಂಬಾಳೆ ಫಿಲ್ಮ್ಸ್​’ (Hombale Films) ಮೂಲಕ ನಿರ್ಮಾಣ ಆಗುತ್ತಿರುವ, ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡುತ್ತಿರುವ ‘ಯುವ’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಯುವ ರಾಜ್​ಕುಮಾರ್​ (Yuva Rajkumar) ಅವರು ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಮಾರ್ಚ್ 29ಕ್ಕೆ ‘ಯುವ’ ಸಿನಿಮಾ (Yuva Movie) ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಚಿತ್ರತಂಡದಿಂದ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಈ ಸಿನಿಮಾದ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟ ಆಗಿವೆ. ಸಿನಿಮಾ ಮೇಲೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಇದೇ ಸಾಕ್ಷಿ. ಯುವ ರಾಜ್​ಕುಮಾರ್​ ಅಭಿಮಾನಿಗಳು ಈ ಸಿನಿಮಾ ನೋಡಲು ಕಾತರದಿಂದ ಕಾದಿದ್ದಾರೆ.

‘ಯುವ’ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿರುವ ಸುಮಧುರ ಹಾಡುಗಳು ಈ ಸಿನಿಮಾದಲ್ಲಿವೆ. ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ‘ಆನಂದ್ ಆಡಿಯೋ’ ಬಾರಿ ಮೊತ್ತಕ್ಕೆ ‘ಯುವ’ ಸಿನಿಮಾದ ಹಾಡುಗಳ ಹಕ್ಕನ್ನು ಪಡೆದುಕೊಂಡಿದೆ. ಹಾಡುಗಳನ್ನು ಕೇಳಲು ಫ್ಯಾನ್ಸ್​ ಕಾತುರದಿಂದ ಕಾದಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಅದ್ದೂರಿಯಾಗಿ ಆಡಿಯೋ ರಿಲೀಸ್​ ಆಗಲಿದೆ. ಶೀಘ್ರದಲ್ಲೇ ಟೀಸರ್ ಮತ್ತು ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್​ ಮಾಡಲಾಗುತ್ತಿದೆ.

ಯಶ್​ ನಟನೆಯ ‘ಕೆಜಿಎಫ್: ಚಾಪ್ಟರ್​ 2’, ರಿಷಬ್​ ಶೆಟ್ಟಿ ಅಭಿನಯದ ‘ಕಾಂತಾರ’ ಮುಂತಾದ ಬ್ಲಾಕ್​ ಬಸ್ಟರ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆಗೆ ಸಲ್ಲುತ್ತದೆ. ಅಂತಹ ಸಿನಿಮಾಗಳ ಮೂಲಕ ಸ್ಯಾಂಡಲ್​ವುಡ್​ನ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಹಲವು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಆ ಪೈಕಿ ‘ಯುವ’ ಚಿತ್ರ ಕೂಡ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಯುವ ರಾಜ್​ಕುಮಾರ್ ಬಗ್ಗೆ ನಟಿ ಸಪ್ತಮಿ ಗೌಡ ಮಾತು

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೂಲಕ ನಿರ್ಮಾಣ ಆಗುತ್ತಿರುವ ಅದ್ದೂರಿ ಸಿನಿಮಾಗಳ ಪೈಕಿ ‘ಯುವ’ ಕೂಡ ಪ್ರಮುಖವಾಗಿದೆ. ಡಾ. ರಾಜ್​ ಅವರ ಮೊಮ್ಮಗ ಯುವ ರಾಜ್​ಕುಮಾರ್ ಈ ಸಿನಿಮಾದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿರುವುದು ವಿಶೇಷ. ಈಗಾಗಲೇ ಬಹಿರಂಗ ಆಗಿರುವ ಅವರ ಗೆಟಪ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಯುವ ಅವರಿಗೆ ಜೋಡಿಯಾಗಿ ‘ಕಾಂತಾರ’ ಸಿನಿಮಾದ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ. ಸುಧಾರಾಣಿ, ಅಚ್ಯುತ್​ ಕುಮಾರ್, ಕಿಶೋರ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಶ್ರೀಶ ಕುದುವಳ್ಳಿ ಅವರು ‘ಯುವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್​ ಕಿರಗಂದೂರು ಮತ್ತು ಚೆಲುವೆಗೌಡ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ