AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನೇನು ಸ್ಪೆಷಲ್ ಅಲ್ಲ’: ಆ ಹುಡುಗಿಗೆ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ತಿರುಗೇಟು

ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಸಂಸಾರದ ವಿವಾದವು ಈಗಾಗಲೇ ಪರಸ್ಪರ ಆರೋಪ-ಪ್ರತ್ಯಾರೋಪಗಳು ಮೂಲಕ ಸುದ್ದಿ ಆಗಿತ್ತು. ಈಗ ಆ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಶ್ರೀದೇವಿ ಭೈರಪ್ಪ ಅವರು ಈಗ ಹಂಚಿಕೊಂಡಿರುವ ಹೊಸ ವಿಡಿಯೋಗೆ ಮಾರ್ಮಿಕವಾದ ಕ್ಯಾಪ್ಷನ್ ನೀಡಿದ್ದಾರೆ.

‘ನೀನೇನು ಸ್ಪೆಷಲ್ ಅಲ್ಲ’: ಆ ಹುಡುಗಿಗೆ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ತಿರುಗೇಟು
Sridevi Byrappa, Yuva Rajkumar
ಮದನ್​ ಕುಮಾರ್​
|

Updated on: Oct 08, 2026 | 4:52 PM

Share

ಮುಖ್ಯಾಂಶಗಳು

  • ಶ್ರೀದೇವಿ ಭೈರಪ್ಪ ಬರೆದುಕೊಂಡಿರುವ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ.
  • ‘ನೀನೇನು ಸ್ಪೆಷಲ್ ಅಲ್ಲ’ ಎಂದು ಅವರು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
  • ಸೋಶಿಯಲ್ ಮೀಡಿಯಾದಲ್ಲಿ ಶ್ರೀದೇವಿ ಅವರ ಈ ಪೋಸ್ಟ್ ವೈರಲ್ ಆಗಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟ ಯುವ ರಾಜ್‌ಕುಮಾರ್ ಅವರ ಖಾಸಗಿ ಜೀವನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಆರಂಭ ಆಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ಅವರ ಪತ್ನಿ ಶ್ರೀದೇವಿ ಭೈರಪ್ಪ ಹಂಚಿಕೊಂಡಿರುವ ಒಂದು ಪೋಸ್ಟ್. ಸದ್ಯಕ್ಕೆ ಶ್ರೀದೇವಿ ಭೈರಪ್ಪ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಮೆರಿಕದಲ್ಲಿ ಇರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪೋಸ್ಟ್ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಮಾಡಿರುವ ಒಂದು ಪೋಸ್ಟ್ ಗಮನ ಸೆಳೆದಿದೆ. ಅದಕ್ಕೆ ಅವರು ನೀಡಿರುವ ಕ್ಯಾಪ್ಷನ್ ಬಗ್ಗೆ ಚರ್ಚೆ ಶುರುವಾಗಿದೆ.

ಶ್ರೀದೇವಿ ಭೈರಪ್ಪ ಮತ್ತು ಯುವ ರಾಜ್‌ಕುಮಾರ್ ಅವರ ಸಂಸಾರದ ಬಿರುಕು ಈ ಮೊದಲೇ ನ್ಯಾಯಾಲಯದ ಮೆಟ್ಟಿಲೇರಿತ್ತು. ಸದ್ಯ ವಿದೇಶದಲ್ಲಿದ್ದುಕೊಂಡೇ ಕಾನೂನು ಹೋರಾಟ ಮುಂದುವರಿಸುತ್ತಿರುವ ಶ್ರೀದೇವಿ ಅವರು ತಮ್ಮ ಹಳೆಯ ಫೋಟೋಗಳನ್ನು ಒಳಗೊಂಡ ವಿಶೇಷ ರೀಲ್ಸ್‌ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ಪತಿ ಹಾಗೂ ಅವರ ಜೀವನದಲ್ಲಿ ಇದ್ದಾರೆ ಎನ್ನಲಾದ ಇನ್ನೊಬ್ಬ ಹುಡುಗಿಯನ್ನು ಉದ್ದೇಶಿಸಿ ಬರೆದಿರುವ ಸಾಲುಗಳು ವೈರಲ್ ಆಗುತ್ತಿವೆ.

ಲವ್, ಮದುವೆ, ನಂಬಿಕೆ, ದ್ರೋಹ ಮುಂತಾದ ವಿಷಯಗಳ ಕುರಿತು ಶ್ರೀದೇವಿ ಭೈರಪ್ಪ ಅವರು ಆಗಾಗ ಪೋಸ್ಟ್‌ ಮಾಡುತ್ತಾರೆ. ಈ ಬಾರಿ ಅವರು ಇನ್ನಷ್ಟು ವಿವರವಾಗಿ ಬರೆದುಕೊಂಡಿದ್ದಾರೆ. ಆ ಕಾರಣದಿಂದಲೇ ಈ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಶ್ರೀದೇವಿ ಭೈರಪ್ಪ ಅವರು ಈ ಪೋಸ್ಟ್‌ ಮೂಲಕ ಒಂದು ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಶ್ರೀದೇವಿ ಭೈರಪ್ಪ ಅವರ ಪೋಸ್ಟ್‌:

‘ಅವನ ಫೋನ್‌ನಲ್ಲಿ ನನ್ನ ಇಂತಹ 10 ಸಾವಿರ ಫೋಟೋಗಳಿದ್ದವು. ಅದನ್ನು ನೋಡಿ ಆತನಿಗೆ ನಾನೇ ಸ್ಪೆಷಲ್ ಎಂದು ಭಾವಿಸಿದ್ದೆ. ಆದರೆ, ಒಂದು ದಿನ ಆತನ ಗ್ಯಾಲರಿಯಲ್ಲಿ ಇನ್ನೊಬ್ಬ ಹುಡುಗಿಯದ್ದೂ ಇದೇ ರೀತಿಯ ಪೋಸ್ ಮತ್ತು ಫೋಟೋಗಳನ್ನು ನೋಡಿದ ಮೇಲೆಯೇ ನನಗೆ ನೈಜ ಸತ್ಯದ ಅರಿವಾಗಿದ್ದು’ ಎಂದು ಶ್ರೀದೇವಿ ಅವರು ಕ್ಯಾಪ್ಷನ್ ಆರಂಭಿಸಿದ್ದಾರೆ.

ಇದನ್ನೂ ಓದಿ: ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಂದೇಶ ಕೊಟ್ಟ ಶ್ರೀದೇವಿ ಭೈರಪ್ಪ

‘ನಾನು ಆ ಹುಡುಗಿಗೆ ಒಂದನ್ನಂತೂ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ: ನೀನೇನು ಸ್ಪೆಷಲ್ ಅಲ್ಲ. ಆ ಫೋಟೋಗಳ ಮೇಲೆ ಎಷ್ಟೇ ದೃಷ್ಟಿಬೊಟ್ಟು ಎಮೋಜಿಗಳನ್ನು ಹಾಕಿದರೂ ಯಾವುದೇ ಪ್ರಯೋಜನವಿಲ್ಲ. ಫೋಟೋ ಕ್ರೆಡಿಟ್: ಡಿಯರ್ ಹಸ್ಬೆಂಡ್’ ಎಂದು ಶ್ರೀದೇವಿ ಭೈರಪ್ಪ ಅವರು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ