ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

ಕನ್ನಡ ಚಿತ್ರರಂಗದ ದೊಡ್ಮನೆ, ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದು ಮೊದಲ ವಿಚ್ಛೇದನ ಪ್ರಕರಣ. ಆ ಕಾರಣದಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ವಿಚ್ಛೇದನ ಪಡೆಯಲು ಕೋರ್ಟ್​ ಮೆಟ್ಟಿಲು ಏರಿದ್ದಾರೆ. ಇಬ್ಬರ ಸಂಸಾರದಲ್ಲಿ ಬಿರುಕು ಮೂಡಲು ಖ್ಯಾತ ನಟಿಯೊಬ್ಬರು ಕಾರಣವಾದ್ರಾ ಎಂಬ ಅನುಮಾನ ವ್ಯಕ್ತವಾಗಿದೆ.

ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?
ಶ್ರೀದೇವಿ, ಯುವ ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Jun 10, 2024 | 2:19 PM

ಡಾ. ರಾಜ್​ಕುಮಾರ್​ ಕುಟುಂಬದ ಅಭಿಮಾನಿಗಳಿಗೆ ಇದು ಶಾಕಿಂಗ್​ ನ್ಯೂಸ್​. ರಾಘವೇಂದ್ರ ರಾಜ್​ಕುಮಾರ್​ ಅವರ ಮಗ ಯುವ ರಾಜ್​ಕುಮಾರ್​ (Yuva Rajkumar) ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಭೈರಪ್ಪ (Sridevi) ಅವರಿಂದ ವಿಚ್ಛೇದನ ಬೇಕು ಎಂದು ಯುವ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ಈ ದಂತಿಯ ನಡುವೆ ಮನಸ್ತಾಪ ಮೂಡಲು ಕಾರಣ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಯುವ ರಾಜ್​ಕುಮಾರ್​ ವಿಚ್ಛೇದನ (Yuva Rajkumar Divorce) ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಗಾಂಧಿನಗರದಲ್ಲಿ ಕೇಳಿಬರುತ್ತಿರುವ ಗಾಸಿಪ್​ ಪ್ರಕಾರ ಪ್ರಸಿದ್ಧ ನಟಿಯ ಜೊತೆ ಯುವ ರಾಜ್​ಕುಮಾರ್​ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ಮದುವೆ ನಡೆದಿತ್ತು. ಇಬ್ಬರೂ ಪ್ರೀತಿಸಿ ವಿವಾಹ ಆಗಿದ್ದರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಅವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಯಿತು. ಸಾರ್ವಜನಿಕವಾಗಿ ಈ ವಿಷಯ ಬಹಿರಂಗ ಆಗದೇ ಇದ್ದರೂ ಕೂಡ ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿತ್ತು. ಕಡೆಗೂ ಸಂಸಾರದ ಬಿರುಕು ಬಹಿರಂಗ ಆಗಿದೆ.

ಮನಸ್ತಾಪ ಹೆಚ್ಚಿದ ಬಳಿಕ ಶ್ರೀದೇವಿ ಅವರು ವಿದೇಶಕ್ಕೆ ತೆರಳಿದರು. ಕಳೆದ ಕೆಲವು ತಿಂಗಳಿಂದ ಅವರು ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಯುವ ರಾಜ್​ಕುಮಾರ್​ ನಟಿಸಿದ ‘ಯುವ’ ಸಿನಿಮಾ ಈ ವರ್ಷ ಬಿಡುಗಡೆ ಆಯಿತು. ಆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಲ್ಲೂ ಪತ್ನಿ ಶ್ರೀದೇವಿ ಕಾಣಿಸಿಕೊಳ್ಳಲೇ ಇಲ್ಲ. ಆಗಲೂ ಕೂಡ ಬಹುತೇಕರಿಗೆ ಅನುಮಾನ ಮೂಡಿತ್ತು.

ಮೂಲಗಳ ಪ್ರಕಾರ, ಯುವ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಜೊತೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಆ ನಟಿಯ ಜೊತೆ ಯುವ ಆಪ್ತತೆ ಹೆಚ್ಚಾಯಿತು. ಆ ಕಾರಣದಿಂದಲೇ ಅವರ ಸಂಸಾರದಲ್ಲಿ ಸಮಸ್ಯೆ ಶುರುವಾಗಿರುವ ಸಾಧ್ಯತೆ ದಟ್ಟವಾಗಿದೆ. ಸದ್ಯಕ್ಕೆ ಶ್ರೀದೇವಿ ಅವರು ವಿಚ್ಛೇದನದ ಕುರಿತಂತೆ ಪ್ರತಿಕ್ರಿಯೆ ನೀಡುವುದು ಬಾಕಿಯಿದೆ. ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

ಅಣ್ಣಾವ್ರ ಕುಟುಂಬದಲ್ಲಿ ಆಗುತ್ತಿರುವ ಮೊದಲ ವಿಚ್ಛೇದನ ಪ್ರಕರಣ ಇದು. ಹಾಗಾಗಿ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ. ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್​​ ಮುಂತಾದವರು ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ