AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವ’ ಚಿತ್ರದ ಮೊದಲ ಹಾಡು ಮಾ.2ಕ್ಕೆ ಬಿಡುಗಡೆ; ಚಾಮರಾಜನಗರದಲ್ಲಿ ಅದ್ದೂರಿ ಇವೆಂಟ್​

ಯುವ ರಾಜ್​ಕುಮಾರ್​ ಹಾಗೂ ಸಪ್ತಮಿ ಗೌಡ ಅವರು ಜೋಡಿಯಾಗಿ ನಟಿಸಿರುವ ‘ಯುವ’ ಸಿನಿಮಾಗೆ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಮೊದಲ ಹಾಡಿನ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಸಂತೋಷ್​ ಆನಂದ್​ರಾಮ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಹಾಡಿಗೆ ಬಹಳ ಮಹತ್ವ ನೀಡಲಾಗಿರುತ್ತದೆ.

‘ಯುವ’ ಚಿತ್ರದ ಮೊದಲ ಹಾಡು ಮಾ.2ಕ್ಕೆ ಬಿಡುಗಡೆ; ಚಾಮರಾಜನಗರದಲ್ಲಿ ಅದ್ದೂರಿ ಇವೆಂಟ್​
ಯುವ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Mar 01, 2024 | 12:11 PM

Share

ಡಾ. ರಾಜ್​ಕುಮಾರ್​ ಮೊಮ್ಮಗ ಯುವ ರಾಜ್​ಕುಮಾರ್ (Yuva Rajkumar)​ ಅಭಿನಯದ ‘ಯುವ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ಈಗಾಗಲೇ ಪೋಸ್ಟರ್​ಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ. ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಬಂಡವಾಳ ಹೂಡಿದೆ.‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್​ 1’, ‘ಕೆಜಿಎಫ್​: ಚಾಪ್ಟರ್​ 2’, ‘ಕಾಂತಾರ’ ರೀತಿಯ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಈ ಸಂಸ್ಥೆ ಈಗ ‘ಯುವ’ ಸಿನಿಮಾವನ್ನು ಜನರ ಎದುರು ತರಲು ತಯಾರಿ ಮಾಡಿಕೊಳ್ಳುತ್ತಿದೆ. ಮೊದಲ ಹಾಡಿನ (Yuva Movie First Song) ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಯುವ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯುವ ರಾಜ್​ಕುಮಾರ್ ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ಎಂಬ ಕಾರಣದಿಂದ ಇದರ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಖ್ಯಾತ ನಿರ್ದೇಶಕ ಸಂತೋಷ್ ಆನಂದ್​ರಾಮ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಾಡುಗಳ ಮೂಲಕ ಕ್ರೇಜ್​ ಸೃಷ್ಟಿಸಲು ಚಿತ್ರತಂಡ ರೆಡಿಯಾಗಿದೆ.

ಯುವ ರಾಜ್​ಕುಮಾರ್ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ಯುವ’ಸಿನಿಮಾಗೆ ಬಿ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಮೊದಲ ಸಾಂಗ್​ ಮಾರ್ಚ್ 2ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ಅದ್ದೂರಿಯಾಗಿ ಸಮಾರಂಭ ಮಾಡಲಾಗುವುದು. ಈ ವೇದಿಕೆಯಲ್ಲಿ ‘ಒಬ್ಬನೇ ಶಿವ ಒಬ್ಬನೇ ಯುವ..’ ಸಾಂಗ್​ ಬಿಡುಗಡೆ ಆಗಲಿದೆ. ಈ ಹಾಡಿಗಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ದೊಡ್ಡ ಮೊತ್ತಕ್ಕೆ ಸೇಲ್​ ಆಯ್ತು ‘ಯುವ’ ಆಡಿಯೋ ಹಕ್ಕು; ಮಾ.29ಕ್ಕೆ ಸಿನಿಮಾ ರಿಲೀಸ್​

ಮಾರ್ಚ್ 29ರಂದು ‘ಯುವ’ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರದಲ್ಲಿ ಯುವ ರಾಜಕುಮಾರ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್, ಕಿಶೋರ್, ಸುಧಾರಾಣಿ ಮುಂತಾದ ಕಲಾವಿದರು ಕೂಡ ಈ ಸಿನಿಮಾದಲ್ಲಿದ್ದಾರೆ. ಈ ಚಿತ್ರದ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಸೇಲ್​ ಆಗಿವೆ ಎಂಬ ಸುದ್ದಿಯನ್ನು ಚಿತ್ರತಂಡ ಇತ್ತೀಚೆಗೆ ಬಿಟ್ಟುಕೊಟ್ಟಿತ್ತು. ಪ್ರತಿಷ್ಠಿತ ಆಡಿಯೋ ಸಂಸ್ಥೆಯಾದ ‘ಆನಂದ್ ಆಡಿಯೋ’ ದೊಡ್ಡ ಮೊತ್ತ ನೀಡಿ ‘ಯುವ’ ಚಿತ್ರದ ಹಾಡುಗಳ ಹಕ್ಕನ್ನು ಖರೀದಿಸಿದೆ. ಹಾಡುಗಳು ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಕ್ರೇಜ್​ ಇನ್ನಷ್ಟು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?