AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ಯುವ ಪತ್ನಿ ಶ್ರೀದೇವಿ ಪ್ರಶ್ನೆ

ನಟಿ ರಮ್ಯಾ ಅವರಿಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದನ್ನು ಹಲವರು ಖಂಡಿಸುತ್ತಿದ್ದಾರೆ. ಡಾ. ರಾಜ್​ಕುಮಾರ್ ಕುಟುಂಬದ ಹೀರೋಗಳು ಕೂಡ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ. ಈ ಸಂದರ್ಭದಲ್ಲಿ ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಮಾಡಿರುವ ಒಂದು ಪೋಸ್ಟ್ ವೈರಲ್ ಆಗುತ್ತಿದೆ.

ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ಯುವ ಪತ್ನಿ ಶ್ರೀದೇವಿ ಪ್ರಶ್ನೆ
Sridevi Byrappa, Shivarajkumar, Yuva Rajkumar, Vinay Rajkumar
ಮದನ್​ ಕುಮಾರ್​
|

Updated on: Jul 29, 2025 | 6:15 PM

Share

ನಟ ದರ್ಶನ್ (Darshan) ಅವರ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳನ್ನು ನೋಡಿ ಕನ್ನಡ ಚಿತ್ರರಂಗದ ಅನೇಕರು ಗರಂ ಆಗಿದ್ದಾರೆ. ರಮ್ಯಾ ಅವರಿಗೆ ದರ್ಶನ್ ಫ್ಯಾನ್ಸ್ ಅಸಭ್ಯವಾಗಿ ಮೆಸೇಜ್ ಮಾಡಿದ್ದು, ರಮ್ಯಾ ಪರವಾಗಿ ಹಲವು ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಪ್ರಥಮ್, ಶಿವರಾಜ್​​ಕುಮಾರ್ (Shivarajkumar), ವಿನಯ್ ರಾಜ್​ಕುಮಾರ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ. ಆದರೆ ಅಣ್ಣಾವ್ರ ಕುಟುಂಬದ ಸದಸ್ಯರ ಮಾತಿಗೆ ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೇ ಇದ್ರಲ್ಲ, ಆವಾಗ ನಿದ್ರೆ ಮಾಡ್ತಾ ಇದ್ರಾ ಎಲ್ಲ?’ ಎಂದು ಶ್ರೀದೇವಿ ಭೈರಪ್ಪ ಅವರು ಬರೆದುಕೊಂಡಿದ್ದಾರೆ. ಇದರ ಜೊತೆ ‘ಬೂಟಾಟಿಕೆ ವ್ಯಕ್ತಿಗಳು’ ಮತ್ತು ‘ಡ್ರಾಮಾ’ ಎಂಬ ಹ್ಯಾಶ್​ ಟ್ಯಾಗ್​ಗಳನ್ನು ಶ್ರೀದೇವಿ ಬಳಸಿದ್ದಾರೆ.

ರಮ್ಯಾ ಪರವಾಗಿ ಪೋಸ್ಟ್ ಮಾಡಿದ್ದ ವಿನಯ್ ರಾಜ್​​ಕುಮಾರ್ ಅವರು, ‘ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಮಕ್ಕಳನ್ನು ಕೀಳಾಗಿ ಕಾಣುವ ಪ್ರಪಂಚ, ಬೆಳವಣಿಗೆಗೂ ಮುನ್ನ ನಾಶವಾಗಬೇಕು’ ಎಂದು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದರು. ಬಳಿಕ ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ಕುಮಾರ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಬೆಂಬಲ ನೀಡಿದರು.

ಇದನ್ನೂ ಓದಿ
Image
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
Image
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
Image
ದರ್ಶನ್ ಅಭಿಮಾನಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಮ್ಯಾ
Image
ನಟ ದರ್ಶನ್ ಅಭಿಮಾನಿಗಳ ಕಮೆಂಟ್ ನೋಡಿ ರಮ್ಯಾ ಖಡಕ್ ಪ್ರತಿಕ್ರಿಯೆ

‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖ೦ಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿ೦ದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು’ ಎಂದು ಶಿವರಾಜ್‌ಕುಮಾರ್ ಹಾಗೂ ಗೀತಾ ಶಿವರಾಜ್‌ಕುಮಾರ್ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ

ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಮಾಡಿದ ಪೋಸ್ಟ್ ವೈರಲ್ ಆಗುತ್ತಿದೆ. ದರ್ಶನ್ ಅಭಿಮಾನಿಗಳ ಫ್ಯಾನ್ಸ್ ಪೇಜ್​​ಗಳಲ್ಲಿ ಅದನ್ನು ಶೇರ್ ಮಾಡಿಕೊಳ್ಳಲಾಗಿದೆ. ‘ಶಿವರಾಜ್​ಕುಮಾರ್ ಅವರು ಶ್ರೀದೇವಿಗೆ ಈಗಲಾದರೂ ನ್ಯಾಯ ಕೊಡಿಸುತ್ತಾರಾ? ಮನೆಯಿಂದಲೇ ನ್ಯಾಯ ಶುರುವಾಗಬೇಕು’ ಎಂದು ದರ್ಶನ್ ಫ್ಯಾನ್ಸ್ ತಿವಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ