AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಗೆ ದಾರಿಬಿಟ್ಟ ‘ಯುವ’: ಬಿಡುಗಡೆ ದಿನಾಂಕ ಮುಂದೂಡಿಕೆ

Yuva Movie: ಯುವ ರಾಜ್​ಕುಮಾರ್ ಅವರ 'ಯುವ' ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. 'ಸಲಾರ್' ಸಿನಿಮಾಕ್ಕಾಗಿ 'ಯುವ' ಸಿನಿಮಾದ ಬಿಡುಗಡೆಯನ್ನು ಹೊಂಬಾಳೆ ಫಿಲಮ್ಸ್ ಮುಂದಕ್ಕೆ ಹಾಕಿದೆ.

'ಸಲಾರ್' ಗೆ ದಾರಿಬಿಟ್ಟ 'ಯುವ': ಬಿಡುಗಡೆ ದಿನಾಂಕ ಮುಂದೂಡಿಕೆ
ಯುವ ಸಿನಿಮಾ
ಮಂಜುನಾಥ ಸಿ.
|

Updated on: Oct 26, 2023 | 7:53 PM

Share

ಯುವ ರಾಜ್​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಹೊಂಬಾಳೆ ಫಿಲಮ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಸಂತೋಶ್ ಆನಂದ್​ರಾಮ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದ ಹೊಂಬಾಳೆ, ಮುಹೂರ್ತದ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಶ್ಚರ್ಯ ಮೂಡಿಸಿತ್ತು ಹೊಂಬಾಳೆ ಫಿಲಮ್ಸ್. ‘ಯುವ’ ಸಿನಿಮಾವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದರಂತೆಯೇ ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳು ಸಹ ಚಕ-ಚಕನೆ ನಡೆದಿದ್ದವು. ಸಿನಿಮಾಕ್ಕೆ ನಾಯಕಿ ಆಯ್ಕೆ, ಪಾತ್ರವರ್ಗದ ಆಯ್ಕೆಗಳು ಬೇಗನೆ ನಡೆದು ಚಿತ್ರೀಕರಣವೂ ಶುರುವಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಮಾಹಿತಿಯನ್ನು ಹೊಂಬಾಳೆ ಹಂಚಿಕೊಂಡಿದೆ.

‘ಯುವ’ ಸಿನಿಮಾವು ಡಿಸೆಂಬರ್ 22ಕ್ಕೆ ಬದಲಿಗೆ 2024ರ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಹೊಸ ಪೋಸ್ಟರ್​ ಮೂಲಕ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಡುಗಡೆ ಆಗಬೇಕಿದ್ದ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು, ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಕಾರಣ, ‘ಯುವ’ ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡುವ ನಿರ್ಧಾರವನ್ನು ನಿರ್ಮಾಣ ಸಂಸ್ಥೆ ಮಾಡಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ಆಗಿರಲಿದೆ. ಈ ಮೊದಲು ಬೇರೊಂದು ಸಿನಿಮಾ ಮೂಲಕ ಯುವ ರಾಜ್​ಕುಮಾರ್ ನಟನೆಗೆ ಎಂಟ್ರಿ ನೀಡಬೇಕಿತ್ತು, ಆದರೆ ಅಪ್ಪು ಅಗಲಿಕೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಹೊಂಬಾಳೆ ಸಂಸ್ಥೆಯೇ ಯುವ ರಾಜ್​ಕುಮಾರ್ ಅವರನ್ನು ಲಾಂಚ್ ಮಾಡಲು ಮುಂದಾಗಿದೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇದು ಹೊಂಬಾಳೆ ಜೊತೆಗೆ ಅವರ ಎರಡನೇ ಸಿನಿಮಾ.

ಹೊಂಬಾಳೆ ಫಿಲಮ್ಸ್​ನವರ ಆರು ಸಿನಿಮಾಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಮೊದಲಿಗೆ ‘ಬಘೀರ’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಬಳಿಕ ‘ಸಲಾರ್’ ಆ ಬಳಿಕ ಕ್ರಮವಾಗಿ ಮಲಯಾಳಂ ಸಿನಿಮಾ ‘ಟೈಸನ್’, ತಮಿಳಿನ ‘ರಘು ತಾತ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’ ಸಿನಿಮಾಗಳು ಬಿಡುಗಡೆ ಆಗುವ ಸಾಧ್ಯತೆ ಇವೆ. ‘ಕೆಜಿಎಫ್ 3’ ಸಿನಿಮಾವನ್ನು ಸಹ ಹೊಂಬಾಳೆ ಫಿಲಮ್ಸ್ ಘೋಷಣೆ ಮಾಡಿದ್ದು ಸಿನಿಮಾದ ಚಿತ್ರೀಕರಣ ಚಾಲ್ತಿ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು