‘ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ’; ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ಕೊಟ್ಟ ಯುವ ಪತ್ನಿ

‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ ಎಂದು ಯುವ ಪರ ವಕೀಲರು ಆರೋಪ ಮಾಡಿದ್ದರು. ಇದಕ್ಕೆ ಶ್ರೀದೇವಿ ಉತ್ತರ ನೀಡಿದ್ದಾರೆ.

‘ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ’; ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ಕೊಟ್ಟ ಯುವ ಪತ್ನಿ
ಯುವ
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 11, 2024 | 7:02 AM

ನಟ ಯುವ ಹಾಗೂ ಶ್ರೀದೇವಿ (Sridevi) ಸಂಸಾರ ವಿಚ್ಛೇದನದವರೆಗೆ ಬಂದು ನಿಂತಿದೆ. ಯುವ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಪತ್ನಿಯಿಂದ ಕಿರುಕುಳ ಮತ್ತಿತ್ಯಾದಿ ಆರೋಪಗಳನ್ನು ಮಾಡಿದ್ದಾರೆ. ಈ ಮಧ್ಯೆ ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಶ್ರೀದೇವಿಗೆ ಅನೈತಿಕ ಸಂಬಂಧವಿದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬಿತ್ಯಾದಿ ಆರೋಪ ಹೊರಿಸಿದ್ದಾರೆ. ಈ ಆರೋಪಗಳಿಗೆ ಶ್ರೀದೇವಿ ತಿರುಗೇಟು ನೀಡಿದ್ದಾರೆ.

ಸೋಮವಾರ (ಜೂನ್ 10) ಸುದ್ದಿಗೋಷ್ಠಿ ನಡೆಸಿದ್ದ ಯುವ ಪರ ವಕೀಲರು, ‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ. ನಿನ್ನನ್ನು ಬೀದಿಗೆ ತರುತ್ತೇನೆ ಎಂದು ಪತಿಗೆ ಬೆದರಿಸಿದ್ದಾರೆ. ಯುವನ ಬಳಿಕ ಅಮೆರಿಕಕ್ಕೆ ಬರುವಂತೆ ಒತ್ತಾಯ ಮಾಡಿದ್ದರು. ಬಾಯ್​ಫ್ರೆಂಡ್ ಮೂಲಕ ಮಗು ಪಡೆಯೋ ಆಲೋಚನೆಯಲ್ಲಿ ಅವರಿದ್ದರು. ರಾಧಯ್ಯ ಅನ್ನೋದು ಶ್ರೀದೇವಿ ಬಾಯ್​ಫ್ರೆಂಡ್ ಹೆಸರು’ ಎಂದು ಆರೋಪಿಸಿದ್ದರು.

ಇದಕ್ಕೆ ಶ್ರೀದೇವಿ ಉತ್ತರಿಸಿದ್ದಾರೆ. ‘ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಂದು ಹೆಣ್ಣಿನ ಚಾರಿತ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ’ ಎಂದು ಫೇಸ್​ಬುಕ್ ಪೋಸ್ಟ್ ಆರಂಭಿಸಿದ್ದಾರೆ.

ಇದನ್ನೂ ಓದಿ: ಯುವ ರಾಜ್​ಕುಮಾರ್​ ವಿಚ್ಛೇದನದ ಬಗ್ಗೆ ಸಂಪೂರ್ಣ ವಿವರ ನೀಡಿದ ಶ್ರೀದೇವಿ ತಂದೆ ಭೈರಪ್ಪ

‘ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಗಳನ್ನು ಗೌರವಿಸದೆ ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ