ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್; ಇಲ್ಲಿದೆ ಹೊಸ ಸಮಾಚಾರ

ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್; ಇಲ್ಲಿದೆ ಹೊಸ ಸಮಾಚಾರ
ನಿಖಿಲ್ ಕುಮಾರ್ ಹೊಸ ಚಿತ್ರದ ಪೋಸ್ಟರ್

Nikhil Kumar: ಸ್ಯಾಂಡಲ್​ವುಡ್ ನಟ ನಿಖಿಲ್​ ಕುಮಾರ್ ಅವರ ಐದನೇ ಚಿತ್ರದ ಮಾಹಿತಿ ಜನವರಿ 22ರಂದು ಘೋಷಣೆಯಾಗಲಿದೆ. ಈ ಕುರಿತು ವಿಶೇಷ ಘಷಣೆ ಮಾಡಿದೆ ಚಿತ್ರತಂಡ.

TV9kannada Web Team

| Edited By: shivaprasad.hs

Jan 18, 2022 | 1:19 PM

ಚಂದನವನದ ‘ಯುವರಾಜ’ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯುವ ನಿಖಿಲ್ ಕುಮಾರ್​​ಗೆ (Nikhil Kumar) ಜನವರಿ 22ರಂದು ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಚಿತ್ರವನ್ನು ನಿರ್ಮಿಸುತ್ತಿರುವ ಚಿತ್ರತಂಡ ವಿಶೇಷ ಗಿಫ್ಟ್ ನೀಡಲು ಮುಂದಾಗಿದೆ.‘ರೈಡರ್’ (Rider), ‘ಜಾಗ್ವಾರ್’ ಮೊದಲಾದ ಗಮನ ಸೆಳೆಯುವ ಚಿತ್ರಗಳನ್ನು ನೀಡಿರುವ ನಿಖಿಲ್ ಅವರ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಅವರ ಜನ್ಮದಿನದಂದು ರಿಲೀಸ್ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅದ್ದೂರಿಯಾಗಿ ನಿಖಿಲ್ ಐದನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಅದರ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ಸಕಲ ರೀತಿಯಿಂದ ಸಜ್ಜಾಗಿದೆ. ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕಿದ್ದ ಯುವರಾಜನ ಹೊಸ ಸಿನಿಮಾಗೆ ಮಂಜು ಅಥರ್ವ ಆಕ್ಷನ್ ಕಟ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ನಿರ್ದೇಶಕ ಮಂಜು ಅಥರ್ವ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮಿಳಿನ ಕದಿರನ್ ಜತೆ ಕೆಲಸ ಮಾಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ‘ಮಾಸ್ಟರ್‌ಪೀಸ್‌’, ‘ಮಫ್ತಿ’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಮಂಜು ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಿಖಿಲ್ ಹಾಗೂ ಮಂಜು ಅಥರ್ವ ಸಹಯೋಗದಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಈಗಾಗಲೇ ಪ್ರಾರಂಭವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಈ ಬಗ್ಗೆ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. ಕೆವಿಎನ್ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ನಿಖಿಲ್ ಸಿನಿಮಾವನ್ನು ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯಕ್ಕೆ ಚಿತ್ರದ ಎಲ್ಲಾ ಪಾತ್ರಗಳು ಫೈನಲ್ ಆಗಿಲ್ಲ. ಚಿತ್ರಕ್ಕೆ ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದಾರೆ. ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಸಿನಿಮಾಕ್ಕೆ ಇರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಟೈಟಲ್ ಹಾಗೂ ಇತರ ಮಾಹಿತಿ ಜತೆಗೆ ತಾರಾ ಬಳಗದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳಲಿದೆ.

ಇದನ್ನೂ ಓದಿ:

ನಿಖಿಲ್​ ಕುಮಾರ್ ಹೊಸ ಚಿತ್ರಕ್ಕೆ ಸಿಕ್ತು ಚಾಲನೆ; ಯಶ್​ ಚಿತ್ರದಲ್ಲಿ ಕೆಲಸ ಮಾಡಿದವರೇ  ಈಗ ಡೈರೆಕ್ಟರ್​

Sreeja: ಚಿರಂಜೀವಿ ಕಿರಿಯ ಪುತ್ರಿಯ ವೈವಾಹಿಕ ಜೀವನದಲ್ಲಿ ಬಿರುಕು? ವದಂತಿಗೆ ಪುಷ್ಠಿ ನೀಡಿದ ಶ್ರೀಜಾ ನಡೆ

Follow us on

Related Stories

Most Read Stories

Click on your DTH Provider to Add TV9 Kannada