Yuva Sridevi Divorce: ಯುವ ರಾಜ್​ಕುಮಾರ್ ವಿಚ್ಛೇದನ: ಕೋರ್ಟ್ ಮೆಟ್ಟಿಲೇರಿದ ರಾಜ್​​ಕುಮಾರ್ ಕುಟುಂಬದ ಕುಡಿ; ಕಾರಣವೇನು?

ಯುವ ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಯುವ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅವರ ಹೊಸ ಸಿನಿಮಾದ ಬಗ್ಗೆ ಮಾತುಕತೆ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

Yuva Sridevi Divorce: ಯುವ ರಾಜ್​ಕುಮಾರ್ ವಿಚ್ಛೇದನ: ಕೋರ್ಟ್ ಮೆಟ್ಟಿಲೇರಿದ ರಾಜ್​​ಕುಮಾರ್ ಕುಟುಂಬದ ಕುಡಿ; ಕಾರಣವೇನು?
Yuva rajkumar
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on:Jun 10, 2024 | 1:46 PM

ಇತ್ತೀಚೆಗಷ್ಟೇ ಸ್ಯಾಂಡಲ್​ವುಡ್ ಜೋಡಿ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್​ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಬೇರೆ ಆಗುತ್ತಾರೆ.

ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗಿ ಆಗಿದ್ದರು. ಇವರದ್ದು ಲವ್​ ಮ್ಯಾರೇಜ್. ಮದುವೆ ಬಳಿಕ ರಾಜ್​ಕುಮಾರ್ ಅಕಾಡೆಮಿಯನ್ನು ಶ್ರೀದೇವಿ ನಡೆಸಿಕೊಂಡು ಹೋಗುತ್ತಿದ್ದರು. ಈಗ ಇವರ ಮಧ್ಯೆ ಮನಸ್ತಾಪ ಉಂಟಾಗಿದ್ದು ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.

ಯುವ ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಯುವ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅವರ ಹೊಸ ಸಿನಿಮಾದ ಬಗ್ಗೆ ಮಾತುಕತೆ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ರಾಜ್​ಕುಮಾರ್ ಕುಟುಂಬದಲ್ಲಿ ನಡೆಯುತ್ತಿರುವ ಮೊದಲ ವಿಚ್ಛೇದನ ಇದು. ಈ ಕಾರಣಕ್ಕೆ ಅಣ್ಣಾವ್ರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಒಟ್ಟಾಗಿ ಬಾಳಿದ್ದರು. ರಾಜ್​ಕುಮಾರ್ ನಟನೆ ಮಾಡಿದರೆ, ಪಾರ್ವತಮ್ಮ ನಿರ್ಮಾಣ ನೋಡಿಕೊಳ್ಳುತ್ತಿದ್ದರು. ಹಾಲು-ಜೇನಿನಂತೆ ಅವರ ಬದುಕು ನಡೆಯುತ್ತಿತ್ತು. ಈಗ ಅವರ ಮೊಮ್ಮಗನ ಸಂಸಾರದಲ್ಲಿ ಬಿರುಗಾಳಿ ಎದ್ದಿರುವುದು ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:33 pm, Mon, 10 June 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್