Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು.

Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ
ಪುನೀತ್​ ರಾಜ್​ಕುಮಾರ್​ - ಯುವರತ್ನ
Follow us
| Updated By: ganapathi bhat

Updated on: Apr 03, 2021 | 5:24 PM

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಮುಂಜಾನೆ 6 ಗಂಟೆಯಿಂದಲೇ ಯುವರತ್ನ ಪ್ರದರ್ಶನ ಕಂಡಿತ್ತು. ಪರಿಣಾಮ ಬಾಕ್ಸ್​ ಆಫೀಸ್​ನಲ್ಲಿ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಹಾಗಿದ್ದರೆ ಬಾಕ್ಸ್​ ಆಫೀಸ್​ನಲ್ಲಿ ಪುನೀತ್​ ಸಿನಿಮಾ ಗಳಿಕೆ ಮಾಡಿದ್ದೆಷ್ಟು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಆಂಗ್ಲ ಮಾಧ್ಯಮವೊಂದು ಮಾಡಿದ ವರದಿ ಪ್ರಕಾರ ಯುವರತ್ನ ಸಿನಿಮಾ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆಯಂತೆ. ಪುನೀತ್​ ಹಿಂದಿನ ಸಿನಿಮಾ ನಟಸಾರ್ವಭೌಮ ಮೊದಲ ದಿನ 6 ಕೋಟಿ ಕಲೆಕ್ಷನ್ ಮಾಡಿತ್ತು. ಈ ಗಳಿಕೆಗೂ ಮೀರಿ ಯುವರತ್ನ ಕಲೆಕ್ಷನ್ ಮಾಡಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ರಿಲೀಸ್​ ಆದ ಪ್ರಮುಖ ಮೂರನೇ ಚಿತ್ರ ಇದಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಮೊದಲ ದಿನ 8.17 ಕೋಟಿ ಕಲೆಕ್ಷನ್​ ಮಾಡಿತ್ತು. ಇನ್ನು, 100 ಕೋಟಿ ಕಲೆಕ್ಷನ್​ ಮಾಡಿರುವ ರಾಬರ್ಟ್​ ಸಿನಿಮಾ ಮೊದಲ ದಿನ ಬರೋಬ್ಬರಿ 17.24 ಕೋಟಿ ಕಲೆಕ್ಷನ್​ ಮಾಡಿತ್ತು.

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು. ಆದರೆ, ಕೊರೊನಾ ಕಾರಣದಿಂದ ಸರ್ಕಾರ ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಇದರಿಂದ ಯುವರತ್ನ ಕಲೆಕ್ಷನ್​ ಕುಸಿಯುವ ಸಾಧ್ಯತೆ ಇದೆ.

ಶೇ.50 ಆಸನ ಭರ್ತಿ ನಿಯಮ ಜಾರಿಯಲ್ಲಿರುವುದರಿಂದ ಚಿತ್ರಮಂದಿರದಲ್ಲಿ ಸೀಟ್​ ಬಿಟ್ಟು ಸೀಟ್​ ಕುಳಿತುಕೊಳ್ಳಬೇಕು. ಹೀಗಾದಾಗ, ಕುಟುಂಬದವರು ಚಿತ್ರಮಂದಿರಕ್ಕೆ ಹೋಗುವವರ ಸಂಖ್ಯೆ ಕುಸಿಯಲಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು, ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ