Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

Puneeth Rajkumar: ಯುವರತ್ನ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ.

Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್
Follow us
ರಾಜೇಶ್ ದುಗ್ಗುಮನೆ
|

Updated on: Mar 09, 2021 | 4:25 PM

ಸದ್ಯ ಸ್ಯಾಂಡಲ್​ವುಡ್​ನಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮದ ಹವಾ ಜೋರಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ದಾವಣಗೆರೆಯಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದಾದ ಬೆನ್ನಲ್ಲೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತಂಡ ಕೂಡ ರಿಲೀಸ್​ಗೂ ಮುನ್ನ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿತ್ತು. ಈಗ ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರ ಕೂಡ ಇದೇ ಹಾದಿ ತುಳಿದಿದೆ. ಯುವರತ್ನ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಹೊಂಬಾಳೆ ಫಿಲ್ಸ್ಮ್​ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ, ಯುವರತ್ನ ಪ್ರೀ ರಿಲೀಸ್​ ಇವೆಂಟ್​ ಬಗ್ಗೆ ಸೂಚನೆ ನೀಡಿದ್ದರು. ಈಗ ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಂತಾಗಿದೆ.

ಸ್ಯಾಂಡಲ್​ವುಡ್​ ಪಾಲಿಗೆ ಪ್ರೀ ರಿಲೀಸ್​ ಇವೆಂಟ್​ ಹೊಸತು ಎಂದೇ ಹೇಳಬಹುದು. ತೆಲುಗಿನಲ್ಲಿ ಸ್ಟಾರ್​ ನಟರ ಚಿತ್ರ ರಿಲೀಸ್​ ಆಗುವುದಕ್ಕೂ ಮುನ್ನ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಪದ್ದತಿ ನಡೆದುಕೊಂಡು ಬಂದಿದೆ. ಈಗ ಈ ಟ್ರೆಂಡ್​ ಕನ್ನಡ ಚಿತ್ರರಂಗದಲ್ಲೂ ಶುರುವಾದಂತಾಗಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Paatashaala Song: ಪಾಠಶಾಲಾ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್