AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ
ಝೈದ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Mar 21, 2024 | 11:20 AM

ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ (Zaid Khan) ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಬನಾರಸ್’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಟೈಮ್ ಟ್ರಾವೆಲ್ ಕಾನ್ಸೆಪ್ಟ್ ಆಧರಿಸಿ ಈ ಸಿನಿಮಾ ಮೂಡಿ ಬಂದಿತ್ತು. ಈಗ ಅವರ ಎರಡನೇ ಸಿನಿಮಾ ಬಗ್ಗೆ ಇತ್ತೀಚೆಗೆ ಅಪ್​ಡೇಟ್ ಸಿಕ್ಕಿತ್ತು. ಈ ಚಿತ್ರದ ಹೊಸ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ZK -02’ ಎಂದು ಶೀರ್ಷಿಕೆ ಇಡಲಾಗಿದೆ.

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ. ಪೋಸ್ಟರ್​ನಲ್ಲಿ ಮದ್ಯದ ಬಾಟಲಿ ಇದೆ. ಬೆಂಚ್ ಹಿಂಭಾಗದಲ್ಲಿ ‘ಬ್ಲಡಿ ಲವ್’ ಎಂದು ಬರೆಯಲಾಗಿದೆ. ಝೈದ್ ಖಾನ್ ಅವರು ಬೆನ್ನು ತೋರಿಸಿ ಕುಳಿತಿದ್ದಾರೆ. ಎದುರು ಭಾಗದಲ್ಲಿ ಹುಡುಗಿಯೊಬ್ಬಳ ಫೋಟೋ ಇದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

View this post on Instagram

A post shared by Zaid Khan (@urszaidkhan)

ಝೈದ್ ಖಾನ್ ಹೀರೋ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಆಶ್ರಿತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಅನಿಲ್ ಕುಮಾರ್ ಅವರು ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜೆ.ಎಸ್ ವಾಲಿ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಝೈದ್ ಖಾನ್​ಗೆ ಆಕ್ಷನ್-ಕಟ್ ಹೇಳಲಿರುವ ‘ಉಪಾಧ್ಯಕ್ಷ’ ನಿರ್ದೇಶಕ

ಝೈದ್ ಖಾನ್ ಅವರ ಮೊದಲ ಸಿನಿಮಾ ‘ಬನಾರಸ್’ಗೆ ಸೋನಲ್ ಮೊಂತೆರೋ ನಾಯಕಿ ಆಗಿದ್ದರು. ಜಯತೀರ್ಥ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ 2022ರ ನವೆಂಬರ್ 4ರಂದು ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ