AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು

ನಟ ಝೈದ್ ಖಾನ್ ಅವರ 'ಕಲ್ಟ್' ಸಿನಿಮಾ ಜನವರಿ 23ಕ್ಕೆ ಬಿಡುಗಡೆ ಆಗಲಿದೆ. ಟ್ರೇಲರ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಝೈದ್ ಖಾನ್‌ಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ನಟ, 'ಸತ್ತ ಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ' ಎಂದು ದಿಟ್ಟ ಉತ್ತರ ನೀಡಿದ್ದಾರೆ. ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುತ್ತೇನೆ ಮತ್ತು ನಟನೆಗೂ ನಿಜ ಜೀವನಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು
ಝೈದ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jan 17, 2026 | 10:57 AM

Share

ನಟ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​​​ನಲ್ಲಿ ಝೈದ್ ಖಾನ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಶೇಡ್​​​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಝೈದ್ ಖಾನ್ ಅವರಿಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ.

ಝೈದ್ ಖಾನ್ ಅವರು ಮುಸ್ಲಿಂ ಧರ್ಮದವರು. ಆದರೆ, ಅವರು ಎಲ್ಲಾ ಧರ್ಮಕ್ಕೂ ಸಮಾನ ಆದ್ಯತೆ ನೀಡುತ್ತಾರೆ. ಅವರ ಮೊದಲ ಸಿನಿಮಾ ‘ಬನಾರಸ್’ ಕಾಶಿ ಭಾಗದಲ್ಲಿ ಶೂಟ್ ಆಗಿದೆ. ಇತ್ತೀಚೆಗೆ ‘ಕಲ್ಟ್’ ಸಿನಿಮಾ ಪ್ರಚಾರದ ವೇಳೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ಇದನ್ನು ಅವರ ಧರ್ಮದವರು ಪ್ರಶ್ನೆ ಮಾಡುವುದಿಲ್ಲವೇ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ನಾನು ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುತ್ತೇನೆ’ ಎಂದಿದ್ದಾರೆ.

ಆ ಬಳಿಕ ಝೈದ್ ಖಾನ್ ಅವರಿಗೆ ಹರಾಮ್ ಬಗ್ಗೆ ಪ್ರಶ್ನೆ ಎದುರಾಯಿತು. ‘ಕುರಾನ್ ಅಲ್ಲಿ ಮದ್ಯ ಸೇವನೆ ಮಾಡಬಾರದು, ಹಿಂಸಾಚಾರ ಮಾಡಬಾರದು ಎಂದೆಲ್ಲ ಇದೆ. ಅದೆಲ್ಲ ಹರಾಮ್. ಆದರೆ, ಸಿನಿಮಾದಲ್ಲಿ ಅದನ್ನೇ ತೋರಿಸಿದ್ದೀರಿ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ನಟನೆಯನ್ನು ನಟನೆಯಾಗಿ ಮಾತ್ರ ನೋಡುತ್ತೇನೆ. ಅದಕ್ಕೂ ನಿಜ ಜೀವನಕ್ಕೂ ಕನೆಕ್ಟ್ ಮಾಡಬಾರದು’ ಎಂದರು.

ಇದನ್ನೂ ಓದಿ: ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್ ಆ ಬಳಿಕ ಮತ್ತೆ ಇದೇ ವಿಷಯವಾಗಿ ಪ್ರಶ್ನೆಗಳು ಎದುರಾದವು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ಸತ್ತ ಮೇಲೆ ನಾನು ದೇವರಿಕೆ ಲೆಕ್ಕ ಕೊಟ್ಟುಕೊಳ್ಳುತ್ತೇನೆ’ ಎಂದರು. ಅವರ ಉತ್ತರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಝೈದ್ ಖಾನ್ ಅವರ ಕಲ್ಟ್ ಸಿನಿಮಾ ಜನವರಿ 23ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಝೈದ್ ಜೊತೆ ರಂಗಾಯಣ ರಘು, ಮಲೈಕಾ ವಾಸುಪಾಲ್, ರಚಿತಾ ರಾಮ್, ಅಚ್ಯುತ್ ಕುಮಾರ್ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ