ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಈ ನಡುವೆ ‘ಮೆಗಾ ಸ್ಟಾರ್​’ ಚಿರಂಜೀವಿ ಅವರನ್ನು ಸಂದೀಪ್​ ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​
ಶ್ರೀಕಾಂತ್​ ಒಡೆಲ, ಸಂದೀಪ್​ ರೆಡ್ಡಿ ವಂಗ,​ ಚಿರಂಜೀವಿ

Updated on: Jan 28, 2024 | 3:28 PM

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹ್ಯಾಟ್ರಿಕ್​ ಗೆಲುವು ಸಿಕ್ಕಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಹಾಗೂಅನಿಮಲ್​’ (Animal) ಸಿನಿಮಾಗಳು ಯಶಸ್ಸು ಕಂಡಿವೆ. ಅವರ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಈ ನಡುವೆ ಸಂದೀಪ್​ ರೆಡ್ಡಿ ವಂಗ ಅವರು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರನ್ನು ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಈ ಫೋಟೋ ಹಿಂದಿನ ಅಸಲಿ ವಿಷಯ ಬೇರೆಯೇ ಇದೆ.

ಚಿತ್ರರಂಗದಲ್ಲಿ ಚಿರಂಜೀವಿ ಅವರಿಗೆ ಇರುವ ಅನುಭವ ಅಪಾರ. ತೆಲುಗು ಚಿತ್ರರಂಗಕ್ಕೆ ಅವರು ಬಹಳ ಕೊಡುಗೆ ನೀಡಿದ್ದಾರೆ. ಈ ಕಲಾವಿದನಾಗಿ ಅವರು ಸಲ್ಲಿಸಿರುವ ಸೇವೆಗೆ ಭಾರತ ಸರ್ಕಾರದಿಂದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರಿಗೆ ಎಲ್ಲೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು. ಆಪ್ತರು, ಸೆಲೆಬ್ರಿಟಿಗಳು ಮನಸಾರೆ ಹಾರೈಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ‘ಆ ಸೀನ್​ ಇಲ್ಲ’: ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಬೇಸರ

ಚಿರಂಜೀವಿ ಅವರು ಪದ್ಮಭೂಷಣ ಪ್ರಶಸ್ತಿ ಭಾಜನರಾಗಿರುವುದರಿಂದ ಸಂದೀಪ್ ರೆಡ್ಡಿ ವಂಗ ಅವರು ಭೇಟಿ ಮಾಡಿದ್ದಾರೆ. ಅವರಿಗೆ ‘ದಸರ’ ಸಿನಿಮಾದ ನಿರ್ದೇಶಕ ಶ್ರೀಕಾಂತ್​ ಒಡೆಲ ಅವರು ಸಾಥ್​ ನೀಡಿದ್ದಾರೆ. ಹಿರಿಯ ನಟನನ್ನು ಭೇಟಿ ಮಾಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ಚಿರಂಜೀವಿ ಮೇಲೆ ತಾವು ಇಟ್ಟಿರುವ ಅಭಿಮಾನವನ್ನು ಅವರಿಬ್ಬರು ವ್ಯಕ್ತಪಡಿಸಿದ್ದಾರೆ.

‘ವಾವ್​.. ಸಂದೀಪ್​ ರೆಡ್ಡಿ ವಂಗ ಮತ್ತು ಚಿರಂಜೀವಿ ಅವರು ಜೊತೆಯಾಗಿ ಸಿನಿಮಾ ಮಾಡಿದರೆ ಬಹಳ ಚೆನ್ನಾಗಿರುತ್ತದೆ’ ಎಂದು ನೆಟ್ಟಿಗರು ಆಸೆಪಟ್ಟಿದ್ದಾರೆ. ‘ಈಗಾಗಲೇ ಚಿರಂಜೀವಿ ಅವರಿಗೆ ಸಂದೀಪ್​ ಒಂದು ಕಥೆ ಹೇಳಿರಬಹುದು’ ಎಂದು ಕೂಡ ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎಂದು ಹೇಳಲಾಗುತ್ತಿದೆ. ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us