AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಪ್ರಭಾಸ್ ಸಿನಿಮಾಕ್ಕೆ ‘ಎ’ ಸರ್ಟಿಫಿಕೇಟ್, ಭವಿಷ್ಯ ನುಡಿದ ನಿರ್ದೇಶಕ

Prabhas films: ಪ್ರಭಾಸ್ ಚಿತ್ರರಂಗಕ್ಕೆ ಕಾಲಿರಿಸಿ 20ಕ್ಕೂ ಹೆಚ್ಚು ವರ್ಷಗಳಾಗಿವೆ. ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಈ ವರೆಗೆ ಅವರ ನಟನೆಯ ಯಾವ ಸಿನಿಮಾಕ್ಕೂ ‘ಎ’ ಪ್ರಮಾಣ ಪತ್ರ ದೊರೆತಿದ್ದಿಲ್ಲ. ಆದರೆ ಇದೇ ಮೊದಲ ಬಾರಿಗೆ ಅವರ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರೆಯಲಿದೆ ಎಂದು ಸಿನಿಮಾದ ನಿರ್ದೇಶಕ ಮುಂಚಿತವಾಗಿ ಭವಿಷ್ಯ ನುಡಿದಿದ್ದಾರೆ.

ಮೊದಲ ಬಾರಿಗೆ ಪ್ರಭಾಸ್ ಸಿನಿಮಾಕ್ಕೆ ‘ಎ’ ಸರ್ಟಿಫಿಕೇಟ್, ಭವಿಷ್ಯ ನುಡಿದ ನಿರ್ದೇಶಕ
Spirit Movie
ಮಂಜುನಾಥ ಸಿ.
|

Updated on: Aug 26, 2026 | 8:41 PM

Share

ಪ್ರಭಾಸ್ (Prabhas), ಸ್ಟಾರ್ ಪ್ಯಾನ್ ಇಂಡಿಯಾ ನಟ. ಪ್ರಭಾಸ್​​ಗೆ ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳಾಗಿದ್ದಾರೆ. ಪ್ರಭಾಸ್ ಸಿನಿಮಾಗಳಲ್ಲಿ ಆಕ್ಷನ್, ಸೆಂಟಿಮೆಂಟ್, ಹಾಸ್ಯ ಹೆಚ್ಚಿಗೆ ಇರುತ್ತದೆ ಆದರೆ ರೊಮ್ಯಾಂಟಿಕ್ ದೃಶ್ಯಗಳು ಸಾಧ್ಯವಾದಷ್ಟು ಕಡಿಮೆ ಇರುತ್ತವೆ. ಖುದ್ದು ಬಹಳ ನಾಚಿಕೆ ಸ್ವಭಾವದ ವ್ಯಕ್ತಿ ಆಗಿರುವ ನಟ ಪ್ರಭಾಸ್, ಅತಿಯಾದ ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸುವುದಿಲ್ಲ. ಹಾಗಾಗಿ ಈ ವರೆಗೆ ಅವರ ನಟನೆಯ ಯಾವೊಂದು ಸಿನಿಮಾಕ್ಕೂ ‘ಎ’ ಪ್ರಮಾಣ ಪತ್ರ ಸಿಕ್ಕಿದ್ದೇ ಇಲ್ಲ. ಆದರೆ ಇದೇ ಮೊದಲ ಬಾರಿಗೆ ಅವರ ಸಿನಿಮಾಕ್ಕೆ ಸಿಬಿಎಫ್​​ಸಿ ‘ಎ’ ಪ್ರಮಾಣ ಪತ್ರ ನೀಡಲಿದೆ. ಈ ಬಗ್ಗೆ ಖುದ್ದು ಸಿನಿಮಾದ ನಿರ್ದೇಶಕನೇ ಭವಿಷ್ಯ ನುಡಿದಿದ್ದಾರೆ.

ಪ್ರಭಾಸ್ ಪ್ರಸ್ತುತ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ರಘು ಹನುಪುಡಿಯ ‘ಫೌಜಿ’ ಮತ್ತು ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’. ರಘು ಹನುಪುಡಿ ನವಿರಾದ ಪ್ರೇಮಕಥೆಗಳನ್ನು ಮಾಡುವ ನಿರ್ದೇಶಕ ಹಾಗಾಗಿ ‘ಫೌಜಿ’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರದ ಭಯವಿಲ್ಲ. ಆದರೆ ಸಂದೀಪ್ ರೆಡ್ಡಿ ವಂಗಾ ಸಿನಿಮಾಗಳು ‘ಎ’ ಪ್ರಮಾಣ ಪತ್ರವನ್ನೂ ದಾಟುವ ರೀತಿಯ ವೈಯಲೆನ್ಸ್ ಮತ್ತು ಇಂಟಿಮೇಟ್ ದೃಶ್ಯಗಳನ್ನು ಹೊಂದಿರುತ್ತವೆ. ಪ್ರಭಾಸ್ ಅವರಿಗೂ ಸಹ ಸಂದೀಪ್ ತಮ್ಮ ವರ್ಕ್ ಸ್ಟೈಲ್ ಬದಲಿಸಿಕೊಂಡಿಲ್ಲ.

ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿರುವ ಸಂದೀಪ್ ರೆಡ್ಡಿ ವಂಗಾ, ‘ಸ್ಪಿರಿಟ್’ ಸಿನಿಮಾಕ್ಕೆ ಸಿಬಿಎಫ್​​ಸಿ ‘ಎ’ ಪ್ರಮಾಣ ಪತ್ರ ನೀಡುವುದು ಖಾತ್ರಿ. ನಾನು ಹೇಗೇ ಸಿನಿಮಾ ಮಾಡಲಿ ಸಿಬಿಎಫ್​​ಸಿ, ನನ್ನ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ಕೊಟ್ಟೇ ಕೊಡುತ್ತಾರೆ’ ಎಂದಿದ್ದಾರೆ. ಈ ಹಿಂದೆ ಸಂದೀಪ್ ರೆಡ್ಡಿ ವಂಗಾ, ಇದೇ ಕಾರಣಕ್ಕೆ ಸಿಬಿಎಫ್​​ಸಿ ವಿರುದ್ಧ ಜಗಳವನ್ನೂ ಮಾಡಿದ್ದರು. ಅವರು ಈ ವರೆಗೆ ನಿರ್ದೇಶಿಸಿರುವ ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಹಾಗೂ ‘ಕಬೀರ್ ಸಿಂಗ್’ ಮೂರೂ ಸಿನಿಮಾಗಳಿಗೆ ‘ಎ’ ಪ್ರಮಾಣ ಪತ್ರ ನೀಡಲಾಗಿದೆ.

ಇದನ್ನೂ ಓದಿ:ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ; ವೈದ್ಯರ ಜೊತೆಗಿನ ಫೋಟೋ ವೈರಲ್

‘ನನ್ನ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ಸಿಗುವುದು ಗ್ಯಾರೆಂಟಿ, ಆದರೆ ಕುಟುಂಬ ಪ್ರೇಕ್ಷಕರು ಹೆಚ್ಚಾಗಿ ಸಿನಿಮಾ ನೋಡಲು ಬನ್ನಿ’ ಎಂದು ಸಂದೀಪ್ ರೆಡ್ಡಿ ವಂಗಾ ಹೇಳಿದ್ದಾರೆ. ‘ಸ್ಪಿರಿಟ್’ ಸಿನಿಮಾನಲ್ಲಿ ಪ್ರಭಾಸ್, ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ನಾಯಕಿಯಾಗಿ ತೃಪ್ತಿ ದಿಮ್ರಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಸಿನಿಮಾ ಮುಂದಿನ ವರ್ಷ ಫೆಬ್ರವರಿ ಅಥವಾ ಏಪ್ರಿಲ್ ವೇಳೆಗೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ