ಮತ್ತೊಬ್ಬ ಸ್ಟಾರ್ ನಟನಿಗೆ ಸಿನಿಮಾ ಮಾಡಲಿರುವ ‘ಅನಿಮಲ್’ ನಿರ್ದೇಶಕ
Jr NTR: ‘ಅರ್ಜುನ್ ರೆಡ್ಡಿ‘, ‘ಅನಿಮಲ್’ ಅಂಥಹಾ ಸಿನಿಮಾಗಳನ್ನು ಮಾಡಿ ಜನಪ್ರಿಯತೆಗಳಿಸಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ಈಗ ಪ್ರಭಾಸ್ ಅದಾದ ಬಳಿಕ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಲಿದ್ದಾರೆ. ಅದಾದ ಬಳಿಕ ಜೂ ಎನ್ಟಿಆರ್ಗಾಗಿ ಹೊಸ ಸಿನಿಮಾ ನಿರ್ದೇಶಿಸಲಿದ್ದಾರೆ.
ಸಂದೀಪ್ ರೆಡ್ಡಿ ವಂಗಾ, ಅಭಿಮಾನಿಗಳು, ವಿರೋಧಿಗಳು ಸಮಾನ ಸಂಖ್ಯೆಯಲ್ಲಿರುವ ನಿರ್ದೇಶನ. ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಎರಡೇ ಸಿನಿಮಾಗಳನ್ನು ನಿರ್ದೇಶಿಸಿದ್ದರಾದರೂ ದೊಡ್ಡ ಯಶಸ್ಸನ್ನೇ ಈ ಸಿನಿಮಾಗಳಿಂದ ಪಡೆದುಕೊಂಡಿದ್ದಾರೆ. ಎರಡು ಸಿನಿಮಾಗಳ ಬಳಿಕ ಸಾಲು ಸಾಲು ಸ್ಟಾರ್ ನಟರೊಟ್ಟಿಗೆ ಸಂದೀಪ್ ರೆಡ್ಡಿ ವಂಗಾ ಕೆಲಸ ಮಾಡಲು ಸಜ್ಜಾಗಿದ್ದಾರೆ. ‘ಅನಿಮಲ್’ ಸಿನಿಮಾದ ಮುಂದಿನ ಭಾಗ ‘ಅನಿಮಲ್ ಪಾರ್ಕ್’ ಸಿನಿಮಾ ನಿರ್ದೇಶನ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿರುವ ಸಂದೀಪ್, ಅದಕ್ಕೂ ಮುನ್ನ ಇಬ್ಬರು ಸ್ಟಾರ್ ನಟರೊಟ್ಟಿಗೆ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಈ ಪಟ್ಟಿಗೆ ಮತ್ತೊಬ್ಬ ಸ್ಟಾರ್ ನಟ ಸೇರಿಕೊಂಡಿದ್ದು ಅದುವೇ ಜೂ ಎನ್ಟಿಆರ್.
ಸಂದೀಪ್ ರೆಡ್ಡಿ ವಂಗಾ, ಪ್ರಭಾಸ್ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಸ್ಪಿರಿಟ್’ ಎಂದು ಹೆಸರಿಡಲಾಗಿದೆ. ಪ್ರಸ್ತುತ ‘ರಾಜಾ ಡಿಲಕ್ಸ್’ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್ ಬ್ಯುಸಿಯಾಗಿದ್ದು, ಆ ಸಿನಿಮಾದ ಚಿತ್ರೀಕರಣದ ಬಳಿಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾ ಪ್ರಾರಂಭಿಸಲಿದ್ದಾರೆ. ಅದಾದ ಬಳಿಕ ಅಲ್ಲು ಅರ್ಜುನ್ಗಾಗಿ ಸಂದೀಪ್ ಹೊಸ ಸಿನಿಮಾ ಒಂದನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಅವರೇ ಆ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ.
ಇದನ್ನೂ ಓದಿ:ಅಮೆರಿದಲ್ಲಿ ದೂಳೆಬ್ಬಿಸುತ್ತಿದೆ ಜೂ ಎನ್ಟಿಆರ್ ‘ದೇವರ’
ಇದರ ಜೊತೆಗೆ ಇತ್ತೀಚೆಗೆ ಹೊರಬಿದ್ದಿರುವ ಹೊಸ ಸುದ್ದಿಯೆಂದರೆ ಜೂ ಎನ್ಟಿಆರ್ ಗಾಗಿ ಹೊಸ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸಂದೀಪ್ ರೆಡ್ಡಿ ವಂಗಾ, ಈಗಾಗಲೇ ಜೂ ಎನ್ಟಿಆರ್ಗೆ ಕತೆ ಹೇಳಿದ್ದು, ಕತೆಯನ್ನು ಒಪ್ಪಿಕೊಂಡಿದ್ದಾರೆ ಜೂ ಎನ್ಟಿಆರ್. ಸದ್ಯಕ್ಕೆ ಜೂ ಎನ್ಟಿಆರ್ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ತೆಲುಗಿನ ‘ದೇವರ’ ಇದೇ ತಿಂಗಳು ಬಿಡುಗಡೆ ಆಗಲಿದೆ. ಅದಾದ ಬಳಿಕ ಜೂ ಎನ್ಟಿಆರ್ ನಟಿಸಿರುವ ಮೊದಲ ಹಿಂದಿ ಸಿನಿಮಾ ‘ವಾರ್ 2’ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ಅವರು ಹೃತಿಕ್ ರೋಷನ್ ಜೊತೆಗೆ ನಟಿಸಿದ್ದಾರೆ. ಆ ಸಿನಿಮಾ ಸಹ ಶೀಘ್ರವೇ ಬಿಡುಗಡೆ ಆಗಲಿದೆ.
ಎರಡು ಸಿನಿಮಾಗಳ ಬಿಡುಗಡೆ ಬಳಿಕ ಜೂ ಎನ್ಟಿಆರ್, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಡಲಾಗಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಪ್ರಾರಂಭವಾಗಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭವಾಗಲಿದೆ. ಈ ಸಿನಿಮಾವು 70ರ ದಶಕದ ಕತೆಯನ್ನು ಒಳಗೊಂಡಿರಲಿದೆ. ಸಿನಿಮಾದಲ್ಲಿ ಯುದ್ಧದ ಸನ್ನಿವೇಶಗಳು ಸಹ ಇರಲಿವೆಯಂತೆ.
ಸಂದೀಪ್ ರೆಡ್ಡಿ ವಂಗಾ, ತಮ್ಮ ಅತಿಯಾದ ವೈಯಲೆಂಟ್ ಕಂಟೆಂಟ್ನಿಂದ ಕುಖ್ಯಾತರು. ಆದರೆ ಜೂ ಎನ್ಟಿಆರ್, ಕೌಟುಂಬಿಕ ಪ್ರೇಕ್ಷಕರು ಇಷ್ಟಪಡುವ ನಟ, ಪ್ರಭಾಸ್ ಸಹ ಮಹಿಳಾ ಅಭಿಮಾನಿಗಳು ಹೆಚ್ಚಿಗಿರುವ ನಟ. ಆದರೆ ಸಂದೀಪ್ ರೆಡ್ಡಿ ವಂಗಾ, ಇಂಥಹಾ ನಟರಿಗೆ ಎಂಥಹಾ ಕತೆ ಮಾಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ