‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ‘ಅರ್ಜುನ್​ ರೆಡ್ಡಿ’ ಸಿನಿಮಾ ಮಾಡಬೇಕು ಎಂಬುದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಿರಲಿಲ್ಲ. ನಂತರ ವಿಜಯ್​ ದೇವರಕೊಂಡ ಆಯ್ಕೆ ಆದರು.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..
ಸಂದೀಪ್​ ರೆಡ್ಡಿ ವಂಗಾ, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Jan 22, 2024 | 11:24 AM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಅವರು ನಿರ್ದೇಶಿಸಿದ ಮೂರು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾಗಳು ಗೆದ್ದು ಬೀಗಿವೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ತಮ್ಮ ಮೊದಲ ಸಿನಿಮಾ ‘ಅರ್ಜುನ್ ರೆಡ್ಡಿ’ (Arjun Reddy) ಬಗ್ಗೆ ಮಾತನಾಡಿದ್ದಾರೆ. ಅಚ್ಚರಿ ಏನೆಂದರೆ, ಆ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಬದಲು ಅಲ್ಲು ಅರ್ಜುನ್​ (Allu Arjun) ನಟಿಸಬೇಕು ಎಂಬುದು ನಿರ್ದೇಶಕರ ಆಸೆ ಆಗಿತ್ತು.

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಅದಕ್ಕಾಗಿ 2011ರಲ್ಲೇ ಅವರು ಒಂದು ಕಥೆ ಹೇಳಿದ್ದರು. ಆದರೆ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಚಿತ್ರದ ಕಥೆಯನ್ನು ಅಲ್ಲು ಅರ್ಜುನ್​ಗೆ ಹೇಳಬೇಕು ಎಂದು ಸಂದೀಪ್​ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ.

‘ಅಲ್ಲು ಅರ್ಜುನ್​ ಅವರನ್ನು ಮೀಟ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಸ್ಕ್ರಿಪ್ಟ್​ ಅನೇಕ ನಿರ್ಮಾಪಕರು ಮತ್ತು ನಟರ ಬಳಿ ಹೋಯಿತು. ನಂತರ ನಾನೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಒಬ್ಬ ಸ್ನೇಹಿತನಿಂದ ವಿಜಯ್​ ದೇವರಕೊಂಡ ಪರಿಚಯ ಆಯಿತು. ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭ ಆಯಿತು. ಆದರೆ ನಾನು ನನ್ನ ಮೊದಲ ಸಿನಿಮಾವನ್ನು ಅಲ್ಲು ಅರ್ಜುನ್​ ಜೊತೆ ಮಾಡಲು ಬಯಸಿದ್ದೆ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಸಂದೀಪ್​ ರೆಡ್ಡಿ ವಂಗಾ ಅವರ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಯಾಕೆಂದರೆ, ಅವರ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್​ ಈಗ ಒಪ್ಪಿಕೊಂಡಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಗೆಲುವಿನ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರ ಬೇಡಿಕೆ ಹೆಚ್ಚಾಗಿದೆ. ಪ್ರಬಾಸ್​ ಜೊತೆಗೂ ಅವರೊಂದು ಸಿನಿಮಾ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sun, 7 January 24

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು