AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ

ಸೌತ್​ ಸಿನಿಮಾ ಮಂದಿಗೆ ಸಂಜಯ್​ ದತ್​ ಅವರು ಈಗ ಫೇವರಿಟ್​ ನಟನಾಗಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅಧೀರನ ಪಾತ್ರವನ್ನು ಮಾಡಿದ ಬಳಿಕ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಂಜಯ್​ ದತ್​ ಅವರ ಬೇಡಿಕೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾದಲ್ಲೂ ಸಂಜಯ್​ ದತ್​ ನಟಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ
ಸಂಜಯ್​ ದತ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 07, 2024 | 8:54 PM

Share

ದಿನ ಕಳೆದಂತೆಲ್ಲ ‘ಪುಷ್ಪ 2’ (Pushpa 2) ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಲೇ ಇದೆ. ‘ಪುಷ್ಪ’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದರಿಂದ ಈಗ ಸೀಕ್ವೆಲ್​ ಮೇಲೆ ಹೈಪ್​ ಹೆಚ್ಚಾಗಿದೆ. ಹೇಗಾದರೂ ಮಾಡಿ ಈ ಸಿನಿಮಾದ ಕಲೆಕ್ಷನ್​ ಅನ್ನು ಸಾವಿರ ಕೋಟಿ ರೂಪಾಯಿ ಮುಟ್ಟಿಸಬೇಕು ಎಂಬ ಗುರಿ ಚಿತ್ರತಂಡಕ್ಕೆ ಇದ್ದಂತಿದೆ. ಯಾಕೆಂದರೆ, 1000 ಕೋಟಿ ರೂಪಾಯಿ ಎಂಬುದು ಈಗಿನ ಹೊಸ ಮೈಲಿಗಲ್ಲು. ಅಲ್ಲು ಅರ್ಜುನ್ (Allu Arjun)​ ಅಭಿನಯದ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದವರು ನಟಿಸುತ್ತಿದ್ದಾರೆ. ‘ಪುಷ್ಪ 2’ ಬಳಗಕ್ಕೆ ಹೊಸ ಪಾತ್ರಗಳು ಎಂಟ್ರಿ ಆಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ಸಂಜಯ್​ ದತ್​ (Sanjay Dutt) ಕೂಡ ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗುವ ನಿರೀಕ್ಷೆ ಇದೆ.

ಮೊದಲಿನಿಂದಲೂ ‘ಪುಷ್ಪ’ ಮತ್ತು ‘ಕೆಜಿಎಫ್​’ ತಂಡದ ನಡುವೆ ಹೋಲಿಕೆ ಮತ್ತು ಸಾಮ್ಯತೆ ಕಾಣಿಸುತ್ತಿದೆ. ‘ಕೆಜಿಎಫ್​’ ಗೆದ್ದ ಬಳಿಕ ‘ಕೆಜಿಎಫ್​ 2’ ಸಿನಿಮಾಗೆ ಬಾಲಿವುಡ್​​ನ ಕಲಾವಿದರನ್ನು ಸೇರಿಸಿಕೊಳ್ಳಲಾಗಿತ್ತು. ರವೀನಾ ಟಂಡನ್​, ಸಂಜಯ್ ದತ್​ ಅವರ ಆಗಮನದಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಮೆರುಗು ಹೆಚ್ಚಿತು. ಈಗ ‘ಪುಷ್ಪ 2’ ಚಿತ್ರತಂಡ ಕೂಡ ಅದೇ ಸೂತ್ರವನ್ನು ಅನುಸರಿಸಲಿದೆಯಾ ಎಂಬ ಅನುಮಾನ ಮೂಡಿದೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​ ನಟಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕಂತೂ ಇದು ಕೇವಲ ಅಂತೆ ಕಂತೆಯ ಹಂತದಲ್ಲೇ ಇದೆ. ಒಂದು ವೇಳೆ ಸಂಜಯ್​ ದತ್​ ಅವರು ‘ಪುಷ್ಪ 2’ ಸಿನಿಮಾದ ಪಾತ್ರವರ್ಗಕ್ಕೆ ಸೇರಿಕೊಂಡರೆ ಈ ಚಿತ್ರತಂಡದವರು ‘ಕೆಜಿಎಫ್​ 2’ ಸೂತ್ರವನ್ನು ಫಾಲೋ ಮಾಡುತ್ತಿರುವುದು ಖಚಿತ ಆಗಲಿದೆ.

ಇದನ್ನೂ ಓದಿ: ಆಗಸ್ಟ್​ 15ರ ಅಖಾಡದಲ್ಲಿ ‘ಪುಷ್ಪ 2’ ಎದುರು ಘಟಾನುಘಟಿ ನಟರ ಪೈಪೋಟಿ?

ಖ್ಯಾತ ಡೈರೆಕ್ಟರ್​ ಸುಕುಮಾರ್​ ಅವರ ನಿರ್ದೇಶನದಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಹುನಿರೀಕ್ಷಿತ ಸಿನಿಮಾ ಆದ್ದರಿಂದ ಹತ್ತು ಹಲವು ಬಗೆಯ ಗಾಸಿಪ್​ಗಳು ಹುಟ್ಟಿಕೊಳ್ಳುತ್ತಿವೆ. ಯಾವುದನ್ನು ನಂಬುವುದು, ಯಾವುದನ್ನು ಬಿಡುವುದು ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ದೇವಿ ಶ್ರೀ ಪ್ರಸಾದ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ‘ಪುಷ್ಪ 2’ ನಿರ್ಮಾಪಕರು

ಸಂಜಯ್​ ದತ್​ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್​ ಬೇಡಿಕೆ ಸೃಷ್ಟಿ ಆಗಿದೆ. ಕನ್ನಡದಲ್ಲಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲೂ ಸಂಜಯ್​ ದತ್​ ಅವರಿಗೆ ಒಂದು ಪ್ರಮುಖ ಪಾತ್ರ ಇದೆ. ಪ್ರೇಮ್​ ನಿರ್ದೇಶನ ಮಾಡುತ್ತಿರುವ ಆ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು