
ಸಂಜಯ್ ದತ್ (Sanjay Dutt) ಅವರು ಬಾಲಿವುಡ್ ಜೊತೆಗೆ ದಕ್ಷಿಣದಲ್ಲೂ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದಲ್ಲಿ ‘ಕೆಡಿ’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಈಗ ಅವರು ಹೊಸ ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ. ಇಂದು (ಜುಲೈ 29) ಸಂಜಯ್ ದತ್ ಅವರ ಜನ್ಮದಿನ. ಆ ಪ್ರಯುಕ್ತ ಅವರ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರ ರಗಡ್ ಅವತಾರ ಎಲ್ಲರ ಗಮನ ಸೆಳೆದಿದೆ.
ರಾಮ್ ಪೋತಿನೇನಿ ಹಾಗೂ ಪುರಿ ಜಗನ್ನಾಥ್ ಅವರ ಕಾಂಬಿನೇಷನ್ನಲ್ಲಿ ಮೂಡಿ ಬಂದಿದ್ದ ‘ಇಸ್ಮಾರ್ಟ್ ಶಂಕರ್’ ಚಿತ್ರ ಹಿಟ್ ಆಗಿತ್ತು. ಈಗ ಈ ಜೋಡಿ ‘ಡಬಲ್ ಇಸ್ಮಾರ್ಟ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್ ಹೈದರಾಬಾದ್ನಲ್ಲಿ ಆರಂಭ ಆಗಿದೆ. ಈ ಚಿತ್ರಕ್ಕಾಗಿ ರಾಮ್ ಅವರು ಭಿನ್ನ ಅವತಾರ ತಾಳಿದ್ದಾರೆ. ‘ಪುರಿ ಕನೆಕ್ಟ್ಸ್’ ಲಾಂಛನದ ಅಡಿಯಲ್ಲಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಸಂಜಯ್ ದತ್ ಎಂಟ್ರಿ ಆಗಿದೆ.
ಸಂಜಯ್ ದತ್ ‘ಕೆಜಿಎಫ್ 2’ ಚಿತ್ರದಲ್ಲಿ ಅಧೀರನಾಗಿ ಕಾಣಿಸಿಕೊಂಡರು. ಆ ಬಳಿಕ ದಕ್ಷಿಣದಿಂದ ಅವರಿಗೆ ಹೆಚ್ಚು ಆಫರ್ಗಳು ಬರುತ್ತಿವೆ. ಒಳ್ಳೆಯ ಪಾತ್ರಗಳು ಸಿಕ್ಕರೆ ಅದನ್ನು ಒಪ್ಪಿ ನಟಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ದಕ್ಷಿಣದ ಸಿನಿಮಾಗಳಲ್ಲಿ ನಟಿಸುತ್ತಿರುವ ಸಂಜಯ್ ದತ್ ‘ಡಬಲ್ ಇಸ್ಮಾರ್ಟ್’ ಚಿತ್ರದ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ರಿಲೀಸ್ ಮಾಡಿ, ಬರ್ತ್ಡೇ ಶುಭ ಕೋರಲಾಗಿದೆ.
ಪೋಸ್ಟರ್ನಲ್ಲಿ ಸಂಜಯ್ ದತ್ ಅವರ ಲುಕ್ ಗಮನ ಸೆಳೆಯುವಂತಿದೆ. ಸ್ಟೈಲಿಶ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಸಿಗಾರ್ ಇದೆ. ಬಿಗ್ ಬುಲ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಸಂಜಯ್ ದತ್ನ ತೋರಿಸಲು ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: 308 ಹುಡುಗಿಯರ ಜೊತೆ ಸಂಜಯ್ ದತ್ ಡೇಟ್; ಬಾಲಿವುಡ್ನ ಈ ನಟಿಯರ ಜೊತೆಯೂ ಸುತ್ತಾಡಿದ್ದ ನಟ
‘ಡಬಲ್ ಇಸ್ಮಾರ್ಟ್’ ಸಿನಿಮಾಗೆ ಹಾಲಿವುಡ್ ಛಾಯಾಗ್ರಾಹಕರು ಬರಲಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ತಯಾರಾಗುತ್ತಿದೆ. 2024ರ ಶಿವರಾತ್ರಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆ ಇದೆ. ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿಬರಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ