AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಜತೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ; ಮಗನ ಹೆಸರಲ್ಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದ ನಟಿ

ಮಗು ಜನಿಸಿದ ನಂತರದಲ್ಲಿ ಸಂಜನಾ ಅವರು ನಟನೆಯಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಸಂಪೂರ್ಣ ಸಮಯವನ್ನು ಅವರು ಮಗುವಿನ ಆರೈಕೆಗಾಗಿ ಮುಡಿಪಿಟ್ಟಿದ್ದಾರೆ.

ಮಗುವಿನ ಜತೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ; ಮಗನ ಹೆಸರಲ್ಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದ ನಟಿ
ಸಂಜನಾ
TV9 Web
| Edited By: |

Updated on: Jul 21, 2022 | 12:58 PM

Share

ನಟಿ ಸಂಜನಾ ಗಲ್ರಾನಿ (Sanjjanaa Galrani) ಬಾಳಲ್ಲಿ ಸಾಕಷ್ಟು ಒಳ್ಳೆಯ ವಿಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಅವರು ಗಂಡು ಮಗುವಿಗೆ ತಾಯಿ ಆದರು. ಮಗುವಿನ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಳ್ಳುತ್ತಿರುತ್ತಾರೆ. ಈಗ ಸಂಜನಾ ಗಲ್ರಾನಿ ಅವರು ಹೊಸ ರೀಲ್ಸ್​ ಶೇರ್​ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮಗುವನ್ನು ಎತ್ತಾಡಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ತಾಯಿ ಹಾಗೂ ಮಗುವಿನ ಆರೋಗ್ಯವನ್ನು ಫ್ಯಾನ್ಸ್ ವಿಚಾರಿಸುತ್ತಿದ್ದಾರೆ.

ಸಂಜನಾ ಗಲ್ರಾನಿ ಅವರು ಸ್ಯಾಂಡಲ್​ವುಡ್​ನಲ್ಲಿ ಹೆಸರು ಮಾಡಿದ್ದಾರೆ. ಸಾಕಷ್ಟು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಈಗ ಮಗು ಜನಿಸಿದ ನಂತರದಲ್ಲಿ ಅವರು ನಟನೆಯಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಸಂಪೂರ್ಣ ಸಮಯವನ್ನು ಅವರು ಮಗುವಿನ ಆರೈಕೆಗಾಗಿ ಮುಡಿಪಿಟ್ಟಿದ್ದಾರೆ. ಮಗುವಿನ ಜತೆ ಸಮಯ ಕಳೆಯುತ್ತಿರುವ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
ಗಂಡು ಮಗುವಿಗೆ ಜನ್ಮ ನೀಡಿದ ಸಂಜನಾ; ಒಂದೇ ದಿನ ಗಲ್ರಾನಿ ಕುಟುಂಬದಲ್ಲಿ ಎರಡು ಖುಷಿ ಸುದ್ದಿ
Image
ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ
Image
ಹೊಸ ವರ್ಷದ ಸಂಭ್ರಮದ ಜತೆಗೆ ಗುಡ್​ ನ್ಯೂಸ್​ ಹಂಚಿಕೊಂಡ ನಟಿ
Image
ಮೇಕಪ್​ ಇಲ್ಲದೆ ನನ್ನನ್ನು ಯಾರೂ ಗುರುತಿಸಲ್ಲ ಎಂದ ಸಂಜನಾ ಗಲ್ರಾನಿ

‘ತಾಯ್ತನವನ್ನು ಅಳವಡಿಸಿಕೊಳ್ಳುವುದು ನಿಜಕ್ಕೂ ಒಂದು ಸಂತಸದ ಪ್ರಯಾಣ. ನಟಿಯರ ತಲೆಯಲ್ಲಿ ಹಲವು ಸುಳ್ಳುಗಳನ್ನು ತುಂಬಲಾಗುತ್ತದೆ. ತಾಯಿ ಆದರೆ ಕೆಲಸ ಇರುವುದಿಲ್ಲ, ನಿಮ್ಮ ದೇಹದ ತೂಕ ಹೆಚ್ಚುತ್ತದೆ, ಗ್ಲಾಮರ್ ಹೋಗುತ್ತದೆ, ನೀವು ಎಲ್ಲರಿಂದಲೂ ನಿರ್ಲಕ್ಷಿಸಲ್ಪಡುತ್ತೀರಿ, ಕೊನೆಗೆ ನಿಮ್ಮ ವೃತ್ತಿಜೀವನ ಮುಗಿಯುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ನನಗೆ ಆ ರೀತಿ ಇಲ್ಲ. ನಾನು ಹಿಂದೆಂದಿಗಿಂತಲೂ ಹೆಚ್ಚು ಬ್ಯುಸಿ ಆಗಿದ್ದೇನೆ’ ಎಂದಿದ್ದಾರೆ ಸಂಜನಾ.

ಇದನ್ನೂ ಓದಿ: ಸಿಸೇರಿಯನ್ ಹೆರಿಗೆಯ ವಿಡಿಯೋ ಹಂಚಿಕೊಂಡ ನಟಿ ಸಂಜನಾ ಗಲ್ರಾನಿ

ಅನೇಕ ಸೆಲೆಬ್ರಿಟಿಗಳು ಮಗು ಹುಟ್ಟುತ್ತಿದ್ದಂತೆ ಮಕ್ಕಳ ಹೆಸರಲ್ಲಿ ಒಂದು ಇನ್​ಸ್ಟಾಗ್ರಾಮ್ ಖಾತೆ ತೆಗೆಯುತ್ತಾರೆ. ಅನೇಕ ಸೆಲೆಬ್ರಿಟಿಗಳು ಈ ರೀತಿ ಮಾಡಿದ್ದಿದೆ. ಈಗ ಸಂಜನಾ ಕೂಡ ತಮ್ಮ ಮಗನ ಹೆಸರಲ್ಲಿ ಒಂದು ಇನ್​ಸ್ಟಾಗ್ರಾಮ್ ಖಾತೆ ಆರಂಭಿಸಿದ್ದಾರೆ. ಸಂಜನಾ ಮಗುವಿಗೆ ಅಲರಿಕ್  ಎಂದು ಹೆಸರು ಇಡಲಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಇನ್​ಸ್ಟಾಗ್ರಾಮ್ ಖಾತೆಗೆ ‘ಪ್ರಿನ್ಸ್ ಅಲರಿಕ್​’ ಎಂದು ಹೆಸರು ಇಡಲಾಗಿದೆ. ಈ ಖಾತೆಯನ್ನು ಎರಡು ಸಾವಿರಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ. ಈ ಖಾತೆಯನ್ನು ಸಂಜನಾ ಅವರೇ ನೋಡಿಕೊಳ್ಳುತ್ತಿದ್ದಾರೆ.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು