Sarath Babu Passes Away: ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ, ಫಲಿಸದ ಪ್ರಾರ್ಥನೆ

Sarath Babu Death: ಕನ್ನಡದ ಅಮೃತವರ್ಷಿಣಿ (Amruthavarshini) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು (Sarath Babu) ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ.

Sarath Babu Passes Away: ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ, ಫಲಿಸದ ಪ್ರಾರ್ಥನೆ
ಶರತ್ ಬಾಬು
Follow us
ಮಂಜುನಾಥ ಸಿ.
|

Updated on:May 22, 2023 | 2:53 PM

ಕನ್ನಡದ ಅಮೃತವರ್ಷಿಣಿ (Amruthavarshini) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು (Sharath Babu) ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ. (Source)

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.

ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು, ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ. ಕನ್ನಡದ ಪ್ರೀತಿಗಾಗಿ ಧಾರಾವಾಹಿಯಲ್ಲಿಯೂ ಶರತ್ ಬಾಬು ನಟಿಸಿದ್ದಾರೆ. ತೆಲುಗು, ತಮಿಳಿನಲ್ಲಿ ಚಿರಂಜೀವಿ, ಕಮಲ್ ಹಾಸನ್ ಇನ್ನೂ ಹಲವು ಮೇರು ಕಲಾವಿದರೊಟ್ಟಿಗೆ ಶರತ್ ಬಾಬು ನಟಿಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದಿಂದ ತುಸು ಅಂತರ ಕಾಯ್ದುಕೊಂಡಿದ್ದ ಶರತ್ ಬಾಬು, ಕೊನೆಯದಾಗಿ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಸಿನಿಮಾದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಪತ್ರಕರ್ತೆಯೊಬ್ಬರನ್ನು ಅವರು ವಿವಾಹವಾಗಿದ್ದರು ಎಂಬ ಸುದ್ದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Mon, 22 May 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ