ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​

ಕೀರ್ತಿ ಸುರೇಶ್​ ಅವರು ನಟನೆ ಮತ್ತು ಗ್ಲಾಮರ್​ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇಡೀ ದಕ್ಷಿಣ ಭಾರತದಲ್ಲಿ ಅವರಿಗೆ ಜನಪ್ರಿಯತೆ ಇದೆ.

ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​
ಮಹೇಶ್​ ಬಾಬು, ಕೀರ್ತಿ ಸುರೇಶ್​
Follow us
TV9 Web
| Updated By: ಮದನ್​ ಕುಮಾರ್​

Updated on:Feb 27, 2022 | 9:02 AM

ನಟಿ ಕೀರ್ತಿ ಸುರೇಶ್​ (Keerthy Suresh) ಅವರು ದಕ್ಷಿಣ ಭಾರತದಲ್ಲಿ ಭಾರಿ ಜನಪ್ರಿಯತೆ ಹೊಂದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕೀರ್ತಿ ಸುರೇಶ್​ ಅವರಿಗೆ ನಿರೀಕ್ಷಿತ ಗೆಲುವು ಸಿಗುತ್ತಿಲ್ಲ. ಮಾಡಿದ ಪ್ರಯತ್ನಗಳೆಲ್ಲವೂ ಕೈ ಕೊಡುತ್ತಿವೆ. ಮಹಿಳಾಪ್ರಧಾನ ಕಥೆಗಳನ್ನು ಆಯ್ಕೆ ಮಾಡಿಕೊಂಡು ಅವರು ಕೈ ಸುಟ್ಟುಕೊಳ್ಳುವಂತಾಯಿತು. ಹಾಗಂತ ಕೀರ್ತಿ ಸುರೇಶ್​ ಅವರಿಗೆ ಇದ್ದ ಬೇಡಿಕೆ ಕಡಿಮೆ ಆಗಿಲ್ಲ. 2018ರಲ್ಲಿ ಬಂದ ‘ಮಹಾನಟಿ’ (Mahanati Movie) ಸಿನಿಮಾ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಅವರಿಗೆ ಯಶಸ್ಸು ಸಿಕ್ಕಿಲ್ಲವಾದರೂ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಮುಗಿ ಬೀಳುವುದು ತಪ್ಪಲಿಲ್ಲ. ತಮ್ಮ ಸಿನಿಮಾಗೆ ಇವರೇ ಹೀರೋಯಿನ್​ ಆಗಬೇಕು ಎಂದು ಬಯಸುವ ನಿರ್ದೇಶಕರ ಸಂಖ್ಯೆಯೂ ಕಮ್ಮಿ ಆಗಿಲ್ಲ. ಹಾಗಾದರೆ ಕೀರ್ತಿ ಸುರೇಶ್​ ಅವರಿಗೆ ಇಷ್ಟೊಂದು ಬೇಡಿಕೆ ಯಾಕೆ ಬಂದಿದೆ? ಅವರ ಸಿನಿಮಾಗಳು (Keerthy Suresh Movies) ಸೋತರೂ ಕೂಡ ಫಿಲ್ಮ್​ ಮೇಕರ್​ಗಳು ಅವರ ಕಾಲ್​ಶೀಟ್​ಗಾಗಿ ಮುಗಿಬೀಳುತ್ತಿರುವುದು ಯಾಕೆ? ಈ ಸ್ಟೋರಿಯಲ್ಲಿದೆ ಉತ್ತರ.

ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಸ್ಟಾರ್​ ನಟ ನಾನಿ ಜೊತೆ ಅವರ ಹೊಸ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿದೆ. ‘ಭೋಲಾ ಶಂಕರ್​’ ಸಿನಿಮಾದಲ್ಲಿ ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ತಂಗಿಯಾಗಿ ಕೀರ್ತಿ ಸುರೇಶ್​ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ದೊಡ್ಡ ಸಿನಿಮಾಗಾಗಿ ಕೀರ್ತಿ ಜೊತೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಆ ಪ್ರಾಜೆಕ್ಟ್​ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ. ಹೀಗೆ ಕೀರ್ತಿ ಸುರೇಶ್​ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಹರಿದುಬರುತ್ತಿರುವುದಕ್ಕೆ ಕಾರಣ ಏನು ಎಂಬ ಬಗ್ಗೆ ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

ಕೀರ್ತಿ ಸುರೇಶ್​ ಅವರು ನಟನೆ ಮತ್ತು ಗ್ಲಾಮರ್​ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇಡೀ ದಕ್ಷಿಣ ಭಾರತದಲ್ಲಿ ಅವರಿಗೆ ಜನಪ್ರಿಯತೆ ಇದೆ. ಅದರಲ್ಲೂ ‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಅವರ ಚಾರ್ಮ್​ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್​ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.

ಕೀರ್ತಿ ಸುರೇಶ್​ ಅವರು ಅತ್ಯುತ್ತಮ ನಟಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ‘ಮಹಾನಟಿ’ ಚಿತ್ರಕ್ಕಾಗಿ ಅವರು ‘ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ’ ಪಡೆದುಕೊಂಡು ತಮ್ಮ ಪ್ರತಿಭೆ ಏನೆಂಬುದನ್ನು ಸಾಬೀತು ಪಡಿಸಿದ್ದಾರೆ. ಆದರೆ ಆ ಬಳಿಕ ಅವರು ಆಯ್ಕೆ ಮಾಡಿಕೊಂಡ ಕೆಲವು ಪ್ರಾಜೆಕ್ಟ್​ಗಳು ಕೈ ಹಿಡಿಯಲಿಲ್ಲ ಅಷ್ಟೇ. ಈಗ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

ಇದನ್ನೂ ಓದಿ:

‘ಮಹಾನಟಿ’ ಖ್ಯಾತಿಯ ಕೀರ್ತಿ ಸುರೇಶ್​ಗೆ ಸತತ ಸೋಲು; ಈಗಲಾದರೂ ಸಿಗಲಿದೆಯೇ ಯಶಸ್ಸು?

‘ಮದುವೆ ಆಗಲು ನಾನಿನ್ನೂ ಚಿಕ್ಕವಳು’: ಪ್ರೀತಿ-ಶಾದಿ ಬಗ್ಗೆ ವಿವರವಾಗಿ ಮಾತಾಡಿದ ರಶ್ಮಿಕಾ ಮಂದಣ್ಣ

Published On - 9:02 am, Sun, 27 February 22

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು