AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್​ ಬಾಬು ಸಿನಿಮಾ ದಾಖಲೆ

ಮೊದಲಾರ್ಧವನ್ನು ಇಷ್ಟಪಟ್ಟ ಫ್ಯಾನ್ಸ್​ ಸೆಕೆಂಡ್ ಹಾಫ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ.

ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್​ ಬಾಬು ಸಿನಿಮಾ ದಾಖಲೆ
ಮಹೇಶ್ ಬಾಬು
TV9 Web
| Edited By: |

Updated on: May 14, 2022 | 8:19 PM

Share

ಮಹೇಶ್ ಬಾಬು (Mahesh Babu) ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ (Sarkaru Vaari Paata) ಮೇ 12ರಂದು ವಿಶ್ವಾದ್ಯಂತ ತೆರೆಗೆ ಬಂದಿದೆ. ಸದ್ಯ ಪ್ಯಾನ್ ಇಂಡಿಯಾ ಟ್ರೆಂಡ್ ಜೋರಾಗಿದೆ. ಆದರೆ, ಮಹೇಶ್ ಬಾಬು ಸಿನಿಮಾ ತೆಲುಗಿನಲ್ಲಿ ಮಾತ್ರ ತೆರೆಗೆ ಬಂದಿದೆ. ಆದಾಗ್ಯೂ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಮಹೇಶ್ ಬಾಬು ಫ್ಯಾನ್ಸ್ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಹೀಗಾಗಿ ಈ ಚಿತ್ರ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾ ದಾಖಲೆ ಬರೆದಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ದೊಡ್ಡದೊಡ್ಡ ಉದ್ಯಮಿಗಳು ಬ್ಯಾಂಕ್​ಗೆ ಮಾಡಿರುವ ವಂಚನೆ ವಿಚಾರವನ್ನೇ ಇಟ್ಟುಕೊಂಡು ಈ ಸಿನಿಮಾ ಸಿದ್ಧಗೊಂಡಿದೆ. ಮೊದಲಾರ್ಧವನ್ನು ಇಷ್ಟಪಟ್ಟ ಫ್ಯಾನ್ಸ್​ ಸೆಕೆಂಡ್ ಹಾಫ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಕಲೆಕ್ಷನ್ ಬಗ್ಗೆ ಟ್ರೇಡ್​ ಅನಲಿಸ್ಟ್​ ಮನೋಬಲ ವಿಜಯಬಾಲನ್ ಅವರು ವಿವರ ನೀಡಿದ್ದಾರೆ.

ಇದನ್ನೂ ಓದಿ
Image
‘ಸರ್ಕಾರು ವಾರಿ ಪಾಟ’ ಬಾಕ್ಸ್​ ಆಫೀಸ್​ ಕಲೆಕ್ಷನ್​: ಮೊದಲ ದಿನ ಮಹೇಶ್​ ಬಾಬು ಸಿನಿಮಾ ಗಳಿಸಿದ್ದು ಎಷ್ಟು?
Image
‘ಒಮ್ಮೆ ನೋಡಬಹುದು, ಹೆಚ್ಚು ಮನರಂಜನೆ ಇಲ್ಲ’: ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಪ್ರೇಕ್ಷಕರ ಪ್ರಾಮಾಣಿಕ ವಿಮರ್ಶೆ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?

‘ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 75.21 ಕೋಟಿ ರೂಪಾಯಿ ಹಾಗೂ ಎರಡನೇ ದಿನ 27.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 102 ಕೋಟಿ ರೂಪಾಯಿ ಆಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇಂದು (ಮೇ 14) ಹಾಗೂ ನಾಳೆ (ಮೇ 15) ಸಿನಿಮಾ  ದೊಡ್ಡ ಮಟ್ಟದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ವೀಕೆಂಡ್ ಆದ್ದರಿಂದ ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ. ಇದೇ ರೀತಿಯ ಕಲೆಕ್ಷನ್ ಮುಂದುವರಿದರೆ ಈ ಸಿನಿಮಾ ಶೀಘ್ರದಲ್ಲೇ 200 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ಮಹೇಶ್​ ಬಾಬು ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಅವರ ಸಿನಿಮಾಗಳು ದಕ್ಷಿಣದಲ್ಲಿ ಸೂಪರ್​ ಹಿಟ್​ ಆಗುತ್ತವೆ. ಈ ಹಿಂದೆ ಬಿಡುಗಡೆ ಆಗಿದ್ದ ‘ಸರಿಲೇರು ನೀಕೆವ್ವರು’ ಸಿನಿಮಾ ಕೂಡ ಹಿಟ್​ ಆಗಿತ್ತು. ಈಗ ಅವರು ‘ಸರ್ಕಾರು ವಾರಿ ಪಾಟ’ ಚಿತ್ರದ ಮೂಲಕ ಮತ್ತೊಂದು ಗೆಲುವು ಕಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಬಾಲಿವುಡ್​ ಬಗ್ಗೆ ನೀಡಿದ ಹೇಳಿಕೆ ಕೂಡ ಸಖತ್​ ಚರ್ಚೆ ಹುಟ್ಟು ಹಾಕಿದೆ. ‘ಬಾಲಿವುಡ್​ಗೆ ನನ್ನನ್ನು ಭರಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದರು. ಆ ಹೇಳಿಕೆ ಕುರಿತು ಬಾಲಿವುಡ್​ನ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ‘ಮಹೇಶ್ ಬಾಬು ಹೇಳಿದ್ದು ಸರಿ’ ಎಂದು ಕಂಗನಾ ರಣಾವತ್​ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್