ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ.

ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ
ನಾಗಭೂಷಣ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 03, 2023 | 10:35 AM

ಹಾಸ್ಯ ನಟ ನಾಗಭೂಷಣ್ (Naga Bhushan) ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಇತ್ತೀಚೆಗೆ ಅವರ ಕಾರು ಅಪಘಾತಕ್ಕೆ ಒಳಗಾಯಿತು. ಈ ವೇಳೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪ್ರೇಮಾ ಹೆಸರಿನ ಮಹಿಳೆ ಮೃತಪಟ್ಟರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಇದರ ಜೊತೆಗೆ ನಾಗಭೂಷಣ್ ಮೇಲೆ ಮತ್ತೊಂದು ಕೇಸ್ ದಾಖಲು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಬಗ್ಗೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ. ಕಂಬಕ್ಕೆ ಹಾನಿಯಾದ ಬಗ್ಗೆ ಟ್ರಾಫಿಕ್ ಪೊಲೀಸರು ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 3) ನಾಗಭೂಷಣ್ ಮೇಲೆ ಬೆಸ್ಕಾಂ ಅಧಿಕಾರಿಗಳು ದೂರು ನೀಡುವ ಸಾಧ್ಯತೆ ಇದೆ. ದೂರು ಪಡೆದು ನಾಗಭೂಷಣ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲು ಕೆಎಸ್ ಲೇಔಟ್ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ

 ಇಂದು ವಿಚಾರಣೆ ಸಾಧ್ಯತೆ

ನಟ ನಾಗಭೂಷಣ್ ಅವರಿಗೆ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ. ಅವರಿಗೆ ವಿಚಾರಣೆಗೆ ಬರುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ. ಇಂದು ನಾಗಭೂಷಣ್ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಪೊಲೀಸರು ನಾಗಭೂಷಣ್ ಅವರ ಹೇಳಿಕೆ ಪಡೆಯಲಿದ್ದಾರೆ. ಇನ್ನು, ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್​ಟಿಓ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಈ ಮೂಲಕ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ