AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಹಿರಿಯ ನಟಿಯ ಮಗ ಕೊವಿಡ್​ನಿಂದ ನಿಧನ; ಪತಿ ಆರೋಗ್ಯ ಸ್ಥಿತಿ ಗಂಭೀರ

ಕವಿತಾ ಅವರ ಮಗ ಸಂಜಯ್​ ರೂಪ್​ಗೆ ಕೊವಿಡ್​ ಕಾಣಿಸಿಕೊಂಡಿತ್ತು. ಆದರೆ, ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಇದ್ದರು. ಆದರೆ, ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕನ್ನಡದ ಹಿರಿಯ ನಟಿಯ ಮಗ ಕೊವಿಡ್​ನಿಂದ ನಿಧನ; ಪತಿ ಆರೋಗ್ಯ ಸ್ಥಿತಿ ಗಂಭೀರ
ಕವಿತಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Jun 17, 2021 | 7:42 AM

Share

ಕೊವಿಡ್​ ಸಾಕಷ್ಟು ತೊಂದರೆ ಉಂಟು ಮಾಡಿದೆ. ಕೊರೊನಾ ವೈರಸ್​​ ಎರಡನೇ ಅಲೆ ಸಾಕಷ್ಟು ಜನರನ್ನು ಬಲಿ ಪಡೆದುಕೊಂಡಿದೆ. ನಿಧಾನವಾಗಿ ಕೊವಿಡ್​ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ, ಸಾವಿನ ಸಂಖ್ಯೆಯಲ್ಲಿ  ಕಡಿಮೆ ಆಗುತ್ತಿಲ್ಲ. ಈಗ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರ ಮಗ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಇನ್ನು, ಅವರ ಪತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕವಿತಾ ಅವರ ಮಗ ಸಂಜಯ್​ ರೂಪ್​ಗೆ ಕೊವಿಡ್​ ಕಾಣಿಸಿಕೊಂಡಿತ್ತು. ಆದರೆ, ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಇದ್ದರು.  ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅದಾಗಲೇ ತಡವಾಗಿತ್ತು. ಹೀಗಾಗಿ, ಚಿಕಿತ್ಸೆ ಫಲಕಾರಿಯಾಗದೆ ಸಂಜಯ್​ ಮೃತಪಟ್ಟಿದ್ದಾರೆ.

ಇನ್ನು, ಕವಿತಾ ಅವರ ಪತಿಗೂ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಅವರಿಗೆ ಚಿಕಿತ್ಸೆ ನೀಡುವುದನ್ನು ಮುಂದುವರಿಸಲಾಗಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕವಿತಾ 11ನೇ ವಯಸ್ಸಿಗೆ ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಅವರು ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದರು. 1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲು’ ಸಿನಿಮಾ ಮೂಲಕ ಕವಿತಾ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದಾದ ನಂತರ ‘ಖಿಲಾಡಿ ಕಿಟ್ಟು’ ಸೇರಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದರು. 2009ರಲ್ಲಿ ತೆರೆಕಂಡ ‘ಉಲ್ಲಾಸ ಉತ್ಸಾಹ’ ಅವರ ಕನ್ನಡದ ಕೊನೆಯ ಚಿತ್ರ. ಸದ್ಯ, ಕವಿತಾ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಕೊವಿಡ್​ನಿಂದ ಹಿಂದಿ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಳಾಂ ಚಿತ್ರರಂಗದ ಸಾಕಷ್ಟು ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ಮೃತಪಟ್ಟಿದ್ದಾರೆ. ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಕಡಿಮೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕೊರೊನಾದಿಂದ ಗುಣಮುಖನಾದ ವ್ಯಕ್ತಿಯಲ್ಲಿ ಹಸಿರು ಫಂಗಸ್ ಪತ್ತೆ.. ಶುರುವಾಗಿದೆ ಬಣ್ಣ ಬಣ್ಣದ ಫಂಗಸ್​ಗಳ ಹಾವಳಿ

Published On - 7:34 am, Thu, 17 June 21