AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ದೇವರ ಮೊರೆಹೋದ ನಟಿ ಸಮಂತಾ; ಇನ್ನೂ ವಾಸಿ ಆಗಿಲ್ಲವೇ ಅಪರೂಪದ ಕಾಯಿಲೆ?

Samantha Ruth Prabhu | Palani Murugan Temple: ಸಮಂತಾಗೆ ಇರುವ Myositis ಕಾಯಿಲೆ ವಾಸಿಯಾಗಲು ನಿರೀಕ್ಷಿಸಿದ್ದಕಿಂತಲೂ ಹೆಚ್ಚು ಸಮಯ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

Samantha: ದೇವರ ಮೊರೆಹೋದ ನಟಿ ಸಮಂತಾ; ಇನ್ನೂ ವಾಸಿ ಆಗಿಲ್ಲವೇ ಅಪರೂಪದ ಕಾಯಿಲೆ?
ಪಳನಿ ಮುರುಗನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಟಿ ಸಮಂತಾ
ಮದನ್​ ಕುಮಾರ್​
|

Updated on:Feb 14, 2023 | 7:32 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಹಿಂದಿ ವಲಯದಲ್ಲಿ ಡಿಮ್ಯಾಂಡ್​ ಹೆಚ್ಚಾಯಿತು. ‘ಪುಷ್ಪ’ ಸಿನಿಮಾದಲ್ಲಿ ಐಟಂ ಡ್ಯಾನ್ಸ್​ ಮಾಡಿದ ಮೇಲೆ ಅದೇ ರೀತಿಯ ಅನೇಕ ಆಫರ್​ಗಳು ಬರಲು ಆರಂಭಿಸಿದವು. ಎಲ್ಲವನ್ನೂ ಅಳೆದು-ತೂಗಿ ಸಮಂತಾ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ (Samantha Health Problem) ಇರುವುದರಿಂದ ಚಿತ್ರರಂಗದ ಕೆಲಸಗಳು ಕೊಂಚ ವಿಳಂಬ ಆಗುತ್ತಿವೆ. Myositis ಕಾಯಿಲೆಯಿಂದ ಸಮಂತಾ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಈ ನಡುವೆ ಅವರು ದೇವರ ಮೊರೆ ಹೋಗಿದ್ದಾರೆ.

ಸಮಂತಾ ರುತ್​ ಪ್ರಭು ಅವರು ತಮಿಳುನಾಡಿನ ಪಳನಿ ಮುರುಗನ್​ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಾಜು 600 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆದಿದ್ದಾರೆ. ಅವರಿಗೆ ನಿರ್ದೇಶಕ ಸಿ. ಪ್ರೇಮ್​ ಕುಮಾ​ರ್​ ಸಾತ್​ ನೀಡಿದ್ದಾರೆ. ಸಮಂತಾ ಅವರು ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿರುವ ಫೋಟೋಗಳು ವೈರಲ್​ ಆಗಿವೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Shaakuntalam: ಏಪ್ರಿಲ್​ 14ರಂದು ರಿಲೀಸ್​ ಆಗಲಿದೆ ‘ಶಾಕುಂತಲಂ’; ಗೆಲುವಿಗಾಗಿ ಕಾದಿರುವ ನಟಿ ಸಮಂತಾ

Myositis ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಅವರಿಗೆ ಸಾಕಷ್ಟು ತೊಂದರೆ ಆಗಿದೆ. ಇದರಿಂದ ಅವರು ಸರಿಯಾದ ಸಮಯದಲ್ಲಿ ಸಿನಿಮಾದ ಕೆಲಸಗಳನ್ನು ಮುಗಿಸಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಚಾಲೆಂಜಿಂಗ್​ ಆಗಿರುವಂತಹ ಪಾತ್ರಗಳನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ. ಈ ಕಾಯಿಲೆ ವಾಸಿಯಾಗಲು ನಿರೀಕ್ಷಿಸಿದ್ದಕಿಂತಲೂ ಹೆಚ್ಚು ಸಮಯ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Samantha: ಮುಂಬೈನಲ್ಲಿ 3 ಬೆಡ್​ ರೂಂ ಮನೆ ಖರೀದಿಸಿದ ನಟಿ ಸಮಂತಾ; ಇದರ ಬೆಲೆ ಎಷ್ಟು?

ಸಮಂತಾ ನಟಿಸಿರುವ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪೌರಾಣಿಕ ಕಥಾಹಂದರದ ಈ ಚಿತ್ರದಲ್ಲಿ ಅವರು ಶಕುಂತಲೆಯ ಪಾತ್ರ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ಶಾಕುಂತಲಂ’ ರಿಲೀಸ್​ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಳಂಬ ಆಯಿತು. ಏಪ್ರಿಲ್​ 14ರಂದು ಈ ಚಿತ್ರವನ್ನು ತೆರೆಕಾಣಿಸುವುದಾಗಿ ನಿರ್ಮಾಪಕರು ಘೋಷಣೆ ಮಾಡಿದ್ದಾರೆ.

ಒಂದಿಲ್ಲೊಂದು ಕಾರಣಕ್ಕೆ ಸಮಂತಾ ಅವರ ಬಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಅವರ ಬಗ್ಗೆ ಹಬ್ಬಿರುವ ಗಾಸಿಪ್​ಗಳು ಒಂದೆರಡಲ್ಲ. ‘ಪುಷ್ಪ 2’ ಚಿತ್ರದಲ್ಲಿ ಐಟಂ ಡ್ಯಾನ್ಸ್​ ಮಾಡುವ ಆಫರ್​ ಅನ್ನು ಸಮಂತಾ ಒಪ್ಪಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳಿಗಿಂತ ಹಿಂದಿ ಚಿತ್ರಗಳು ಮತ್ತು ವೆಬ್​ ಸಿರೀಸ್​ಗಳ ಕಡೆಗೆ ಅವರು ಹೆಚ್ಚು ಒಲವು ತೋರುತ್ತಿದ್ದಾರೆ ಎಂದೆಲ್ಲ ಗುಸುಗುಸು ಹಬ್ಬಿದೆ. ಆದರೆ ಆ ಬಗ್ಗೆ ಸಮಂತಾ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:32 pm, Tue, 14 February 23

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್