ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ
ಕಂಗನಾ-ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2024 | 7:32 AM

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಮೊದಲಿನಿಂದಲೂ ನೇರ ನುಡಿಗಳ ಮೂಲಕವೇ ಗಮನ ಸೆಳೆಯುತ್ತಿದ್ದ ಅವರು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಚಿತ್ರರಂಗದಲ್ಲಿ ತಮ್ಮ ಸಿನಿಮಾಗಳು ನಿರಂತರವಾಗಿ ಫ್ಲಾಪ್​ ಆಗುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮನ್ನು ತಾವು ಶಾರುಖ್ ಖಾನ್ ಜೊತೆ ಹೋಲಿಕೆ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಶಾರುಖ್ ಅಭಿಮಾನಿಗಳು ಕಂಗನಾ ಅವರನ್ನು ಟೀಕೆ ಮಾಡಿದ್ದಾರೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ. ‘ಶಾರುಖ್ ಖಾನ್ ಕೂಡ 10 ಫ್ಲಾಪ್ ನೀಡಿದ್ದರು’ ಎಂದು ಹೇಳಿದ್ದಾರೆ. ಶಾರುಖ್ ಖಾನ್ ನಟನೆಯ ಹಲವು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಎನಿಸಿಕೊಂಡಿದ್ದವು. ‘ಪಠಾಣ್’ ಚಿತ್ರದಿಂದ ಅವರ ಅದೃಷ್ಟ ಬದಲಾಯಿತು.

‘ಶಾರುಖ್ ಖಾನ್ ಅವರ 10 ಸಿನಿಮಾಗಳು ಚೆನ್ನಾಗಿ ಓಡಿಲ್ಲ. ನಂತರ ಪಠಾಣ್ ಗೆಲುವು ಕಂಡಿತು. ಏಳೆಂಟು ವರ್ಷ ನನ್ನ ಯಾವ ಸಿನಿಮಾಗಳೂ ಉತ್ತಮ ಕಲೆಕ್ಷನ್ ಮಾಡಿರಲಿಲ್ಲ. ಆದರೆ ಕ್ವೀನ್ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಮತ್ತೆ ಮೂರ್ನಾಲ್ಕು ವರ್ಷ ಬಿಟ್ಟು ಮಣಿಕರ್ಣಿಕಾ ಹಿಟ್ ಆಯಿತು. ಈಗ ಎಮರ್ಜೆನ್ಸಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅದ್ಭುತಗಳನ್ನು ಸೃಷ್ಟಿಸಬಹುದು’ ಎಂದು ಭರವಸೆಯ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಕಂಗನಾ ರಣಾವತ್ ತಮ್ಮ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಮೊದಲಿನಿಂದಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತಲೇ ಬರುತ್ತಿದ್ದರು. ಇತ್ತೀಚೆಗೆ ಅವರು ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ‘ನಾನು ರಾಜಕೀಯಕ್ಕೆ ಕಾಲಿಡಲು ಇದು ಸರಿಯಾದ ಸಮಯ’ ಎಂದು ಅವರು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್