AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳನ್ನು ಪಡೆದ ಬೆನ್ನಲ್ಲೇ ಶಾರುಖ್​ ಜೊತೆ ರಾಜಸ್ಥಾನಕ್ಕೆ ಹೊರಡಲು ಸಜ್ಜಾದ ನಯನತಾರಾ

Shah Rukh Khan | Jawan: ಶಾರುಖ್​ ಖಾನ್​ ಜತೆ ನಯನತಾರಾ ಅವರು ರಾಜಸ್ಥಾನಕ್ಕೆ ತೆರಳಿ ಚಿತ್ರೀಕರಣದಲ್ಲಿ ಭಾಗಿ ಆಗಬೇಕಿದೆ. ಇತ್ತೀಚೆಗಷ್ಟೇ ಅವರು ಮಕ್ಕಳನ್ನು ಪಡೆದಿರುವ ಕಾರಣ ಡೇಟ್ಸ್​ ನೀಡಲು ಕಷ್ಟ ಆಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

Nayanthara: ಅವಳಿ ಮಕ್ಕಳನ್ನು ಪಡೆದ ಬೆನ್ನಲ್ಲೇ ಶಾರುಖ್​ ಜೊತೆ ರಾಜಸ್ಥಾನಕ್ಕೆ ಹೊರಡಲು ಸಜ್ಜಾದ ನಯನತಾರಾ
ಶಾರುಖ್ ಖಾನ್, ನಯನತಾರಾ
TV9 Web
| Edited By: |

Updated on:Oct 13, 2022 | 2:24 PM

Share

ನಟಿ ನಯನತಾರಾ (Nayanthara) ಅವರು ತುಂಬ ಬ್ಯುಸಿ ಆಗಿದ್ದಾರೆ. ಸಂಸಾರ ಮತ್ತು ಸಿನಿಮಾ ಎರಡನ್ನೂ ಅವರು ಬ್ಯಾಲೆನ್ಸ್​ ಮಾಡಿಕೊಂಡು ಸಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಅವಳಿ ಮಕ್ಕಳನ್ನು ಪಡೆದ ಸುದ್ದಿ ಹೊರಬಿತ್ತು. ಅದಕ್ಕಾಗಿ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಖುಷಿಯ ನಡುವೆಯೇ ನಯನತಾರಾ ಈಗ ರಾಜಸ್ಥಾನಕ್ಕೆ ಹೊರಡಲು ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅದು ಕೂಡ ಶಾರುಖ್​ ಖಾನ್​ (Shah Rukh Khan) ಜೊತೆಯಲ್ಲಿ. ಈಗಾಗಲೇ ತಿಳಿದಿರುವಂತೆ ಇವರಿಬ್ಬರು ‘ಜವಾನ್​’ (Jawan) ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಸಲುವಾಗಿ ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಬೇಕಿದೆ ಎಂದು ವರದಿ ಆಗಿದೆ.

ವಿಘ್ನೇಶ್​ ಶಿವನ್​ ಜೊತೆಗೆ ನಯನತಾರಾ ಮದುವೆ ಆಗಿದ್ದಾರೆ. ಮದುವೆ ಬಳಿಕವೂ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಇತ್ತೀಚೆಗೆ ತೆರೆಕಂಡ ‘ಗಾಡ್​ ಫಾದರ್​’ ಸಿನಿಮಾದಲ್ಲಿ ಅವರ ಪಾತ್ರ ಹೈಲೈಟ್​ ಆಗಿದೆ. ಇನ್ನೂ ಹಲವು ಆಫರ್​ಗಳು ಅವರ ಕೈಯಲ್ಲಿವೆ. ಅದರಲ್ಲಿ ‘ಜವಾನ್​’ ಚಿತ್ರ ಪ್ರಮುಖವಾಗಿದೆ. ಶಾರುಖ್​ ಖಾನ್​ ಅವರ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ಈ ಸಿನಿಮಾ ತಯಾರಾಗುತ್ತಿದೆ. ಶಾರುಖ್​ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿರುವುದರಿಂದ ಹೆಚ್ಚು ಕಾಳಜಿ ವಹಿಸಿ ಈ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ.

ಈಗಾಗಲೇ ಒಂದಷ್ಟು ದೃಶ್ಯಗಳನ್ನು ಚೆನ್ನೈನಲ್ಲಿ ಚಿತ್ರೀಕರಿಸಲಾಗಿದೆ. ಅದರಲ್ಲಿ ಶಾರುಖ್​ ಖಾನ್​ ಭಾಗಿ ಆಗಿದ್ದಾರೆ. ಈ ಸಿನಿಮಾದ ಕೊನೆಯ ಹಂತದ ಶೂಟಿಂಗ್​ ರಾಜಸ್ಥಾನದಲ್ಲಿ ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾರುಖ್​ ಜೊತೆ ನಯನತಾರಾ ಕೂಡ ರಾಜಸ್ಥಾನಕ್ಕೆ ತೆರಳಿ ಚಿತ್ರೀಕರಣದಲ್ಲಿ ಭಾಗಿ ಆಗಬೇಕಿದೆ. ಇತ್ತೀಚೆಷ್ಟೇ ಅವರು ಮಕ್ಕಳನ್ನು ಪಡೆದಿರುವ ಕಾರಣ ಡೇಟ್ಸ್​ ನೀಡಲು ಕಷ್ಟ ಆಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ನಯನತಾರಾ ಅವರ ಡೇಟ್ಸ್​ಗೆ ಅನುಗುಣವಾಗಿ ಚಿತ್ರತಂಡದವರು ಶೂಟಿಂಗ್​ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಪ್ರಕಟ ಮಾಡಿವೆ.

ಇದನ್ನೂ ಓದಿ
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

ನಯನತಾರಾ-ವಿಘ್ನೇಶ್​ಗೆ ಕಾನೂನಿನ ಸಂಕಷ್ಟ:

ಈ ವರ್ಷ ಜೂನ್​ ತಿಂಗಳಲ್ಲಿ ಮದುವೆ ಆದ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ಆದರೆ ಸೂಕ್ತ ನಿಯಮಗಳನ್ನು ಅವರು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಅವರ ವಿರುದ್ಧ ತನಿಖೆ ನಡೆಸಲಾಗುವುದು ಎಂಬ ಸುದ್ದಿ ಹರಡಿದೆ. ಈ ಬಗ್ಗೆ ಸೆಲೆಬ್ರಿಟಿ ದಂಪತಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಮಕ್ಕಳ ಮುಖ ತೋರಿಸಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:24 pm, Thu, 13 October 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ