AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆದ ಶಾರುಖ್ ಖಾನ್ ಹಾಗೂ ರಾಜಮೌಳಿ

ಅಮೆರಿಕದ ಪ್ರತಿಷ್ಠಿತ ಟೈಮ್​ ಮ್ಯಾಗಜಿನ್ 2023ನೇ ಸಾಲಿನ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ರಾಜಮೌಳಿ ಹಾಗೂ ಶಾರುಖ್ ಖಾನ್ ಹೆಸರು ಇದೆ.

ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆದ ಶಾರುಖ್ ಖಾನ್ ಹಾಗೂ ರಾಜಮೌಳಿ
ಶಾರುಖ್​-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Apr 14, 2023 | 8:13 AM

Share

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಹಾಗೂ ಶಾರುಖ್ ಖಾನ್ (Shah Rukh Khan) ಇಬ್ಬರೂ ಯಶಸ್ಸು ಕಂಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ (RRR Movie) ರಾಜಮೌಳಿ ಗೆದ್ದು ಬೀಗಿದ್ದಾರೆ. ಈ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಇನ್ನು, ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಜನಮನ್ನಣೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಮೆರಿಕದ ಪ್ರತಿಷ್ಠಿತ ಟೈಮ್​ ಮ್ಯಾಗಜಿನ್ 2023ನೇ ಸಾಲಿನ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ರಾಜಮೌಳಿ ಹಾಗೂ ಶಾರುಖ್ ಖಾನ್ ಹೆಸರು ಇದೆ. ಈ ಮೂಲಕ ಭಾರತ ಹೆಮ್ಮೆ ಪಡುವಂತೆ ಆಗಿದೆ.

‘ಆರ್​ಆರ್​ಆರ್​’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಈ ಸಿನಿಮಾ ದಾಖಲೆ ಮೇಲೆ ದಾಖಲೆ ಬರೆಯಿತು. ಈ ಚಿತ್ರದಿಂದ ರಾಜಮೌಳಿ ಗೆದ್ದು ಬೀಗಿದರು. ಸಿನಿಮಾ ರಿಲೀಸ್​ ಆಗಿ ಸುಮಾರು ಒಂದು ವರ್ಷದ ಬಳಿಕ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಸಿಕ್ಕಿತು. ಈ ಮೂಲಕ ರಾಜಮೌಳಿ ಹೆಸರು ವಿಶ್ವಾದ್ಯಂತ ಹಬ್ಬಿತು. ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ಸೇರಿ ಅನೇಕರು ರಾಜಮೌಳಿ ಕೆಲಸವನ್ನು ಹೊಗಳಿದರು. ಈ ಕಾರಣಕ್ಕೆ ರಾಜಮೌಳಿ ಹೆಸರು ಹೆಚ್ಚು ಪ್ರಚಲಿತಗೊಂಡಿತು.

ಇನ್ನು, ಶಾರುಖ್ ಖಾನ್ ಅವರ ‘ಪಠಾಣ್​’ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸದ್ದು ಮಾಡಿತು. ಸತತ ಸೋಲು ಕಂಡಿದ್ದ ಶಾರುಖ್ ಅವರು ಈ ಚಿತ್ರದಿಂದ ಗೆದ್ದರು. ಶಾರುಖ್ ಖ್ಯಾತಿ ಹೆಚ್ಚಿತು. ಈಗ ಅವರ ಮುಂದಿನ ಚಿತ್ರ ‘ಜವಾನ್​’, ‘ಡಂಕಿ’ ಬಗ್ಗೆಯೂ ನಿರೀಕ್ಷೆ ಇದೆ. ಈ ಎಲ್ಲಾ ಕಾರಣದಿಂದ ಪ್ರಭಾವಿಗಳ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಅಮೇಜಾನ್ ಕಾಡುಗಳಲ್ಲಿ ಶೂಟ್ ಆಗಲಿದೆ ರಾಜಮೌಳಿ ಮುಂದಿನ ಸಿನಿಮಾ; ಈ ಕಥೆಗೆ ಸ್ಫೂರ್ತಿ ಏನು?

ಉಳಿದಂತೆ ಕಿಂಗ್ ಚಾರ್ಲ್ಸ್, ಡೋಜಾ ಕ್ಯಾಟ್ ಮೊದಲಾದವರು ಸ್ಥಾನ ಪಡೆದುಕೊಂಡಿದ್ದಾರೆ. ಅಂದಹಾಗೆ, ಈ ಪಟ್ಟಿಯನ್ನು ವಿವಿಧ ವಿಚಾರಗಳನ್ನು ಆಧರಿಸಿ ಸಿದ್ಧಪಡಿಸಲಾಗುತ್ತದೆ. ಸೋಶಿಯಲ್ ಮೀಡಿಯಾ ಖ್ಯಾತಿ, ಚಿತ್ರರಂಗಕ್ಕೆ ಅವರ ಕೊಡುಗೆ, ಅವರ ಟ್ಯಾಲೆಂಟ್, ಕಠಿಣ ಪರಿಶ್ರಮ ಮೊದಲಾದ ವಿಚಾರಗಳನ್ನು ಪರಿಗಣಿಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು