ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಶಾರುಖ್ ಖಾನ್ (Shah Rukh Khan) ಇಬ್ಬರೂ ಯಶಸ್ಸು ಕಂಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಆರ್ಆರ್ಆರ್’ ಚಿತ್ರದಿಂದ (RRR Movie) ರಾಜಮೌಳಿ ಗೆದ್ದು ಬೀಗಿದ್ದಾರೆ. ಈ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಇನ್ನು, ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಜನಮನ್ನಣೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಮೆರಿಕದ ಪ್ರತಿಷ್ಠಿತ ಟೈಮ್ ಮ್ಯಾಗಜಿನ್ 2023ನೇ ಸಾಲಿನ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ರಾಜಮೌಳಿ ಹಾಗೂ ಶಾರುಖ್ ಖಾನ್ ಹೆಸರು ಇದೆ. ಈ ಮೂಲಕ ಭಾರತ ಹೆಮ್ಮೆ ಪಡುವಂತೆ ಆಗಿದೆ.
‘ಆರ್ಆರ್ಆರ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಈ ಸಿನಿಮಾ ದಾಖಲೆ ಮೇಲೆ ದಾಖಲೆ ಬರೆಯಿತು. ಈ ಚಿತ್ರದಿಂದ ರಾಜಮೌಳಿ ಗೆದ್ದು ಬೀಗಿದರು. ಸಿನಿಮಾ ರಿಲೀಸ್ ಆಗಿ ಸುಮಾರು ಒಂದು ವರ್ಷದ ಬಳಿಕ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಸಿಕ್ಕಿತು. ಈ ಮೂಲಕ ರಾಜಮೌಳಿ ಹೆಸರು ವಿಶ್ವಾದ್ಯಂತ ಹಬ್ಬಿತು. ಹಾಲಿವುಡ್ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ಸೇರಿ ಅನೇಕರು ರಾಜಮೌಳಿ ಕೆಲಸವನ್ನು ಹೊಗಳಿದರು. ಈ ಕಾರಣಕ್ಕೆ ರಾಜಮೌಳಿ ಹೆಸರು ಹೆಚ್ಚು ಪ್ರಚಲಿತಗೊಂಡಿತು.
Congratulations to the pride of Indian cinema, @SSRajamouli, the first Indian filmmaker to be named one of @TIME‘s 100 most influential people in the world. ??#SSRajamouli #TIME100 #RRRMovie pic.twitter.com/TOrOJYdi7T
— DVV Entertainment (@DVVMovies) April 13, 2023
ಇನ್ನು, ಶಾರುಖ್ ಖಾನ್ ಅವರ ‘ಪಠಾಣ್’ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸದ್ದು ಮಾಡಿತು. ಸತತ ಸೋಲು ಕಂಡಿದ್ದ ಶಾರುಖ್ ಅವರು ಈ ಚಿತ್ರದಿಂದ ಗೆದ್ದರು. ಶಾರುಖ್ ಖ್ಯಾತಿ ಹೆಚ್ಚಿತು. ಈಗ ಅವರ ಮುಂದಿನ ಚಿತ್ರ ‘ಜವಾನ್’, ‘ಡಂಕಿ’ ಬಗ್ಗೆಯೂ ನಿರೀಕ್ಷೆ ಇದೆ. ಈ ಎಲ್ಲಾ ಕಾರಣದಿಂದ ಪ್ರಭಾವಿಗಳ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಅಮೇಜಾನ್ ಕಾಡುಗಳಲ್ಲಿ ಶೂಟ್ ಆಗಲಿದೆ ರಾಜಮೌಳಿ ಮುಂದಿನ ಸಿನಿಮಾ; ಈ ಕಥೆಗೆ ಸ್ಫೂರ್ತಿ ಏನು?
ಉಳಿದಂತೆ ಕಿಂಗ್ ಚಾರ್ಲ್ಸ್, ಡೋಜಾ ಕ್ಯಾಟ್ ಮೊದಲಾದವರು ಸ್ಥಾನ ಪಡೆದುಕೊಂಡಿದ್ದಾರೆ. ಅಂದಹಾಗೆ, ಈ ಪಟ್ಟಿಯನ್ನು ವಿವಿಧ ವಿಚಾರಗಳನ್ನು ಆಧರಿಸಿ ಸಿದ್ಧಪಡಿಸಲಾಗುತ್ತದೆ. ಸೋಶಿಯಲ್ ಮೀಡಿಯಾ ಖ್ಯಾತಿ, ಚಿತ್ರರಂಗಕ್ಕೆ ಅವರ ಕೊಡುಗೆ, ಅವರ ಟ್ಯಾಲೆಂಟ್, ಕಠಿಣ ಪರಿಶ್ರಮ ಮೊದಲಾದ ವಿಚಾರಗಳನ್ನು ಪರಿಗಣಿಸಲಾಗುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ