ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ಶಾರುಖ್ ಖಾನ್, ವಿಕ್ರಾಂತ್ ಮಾಸಿ; ಅತ್ಯುತ್ತಮ ನಟಿ ರಾಣಿ ಮುಖರ್ಜಿ

71st National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳು ಪ್ರಕಟ ಆಗಿವೆ. ಈ ಬಾರಿ ಪ್ರಮುಖ ಪ್ರಶಸ್ತಿಗಳು ಶಾರುಖ್ ಖಾನ್, ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿ ಅವರಿಗೆ ಒಲಿದಿವೆ. 2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು (ಆಗಸ್ಟ್ 1) ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಯನ್ನು ಶಾರುಖ್ ಖಾನ್ ಮತ್ತು ವಿಕ್ರಾಂತ್ ಮಾಸಿ ಅವರು ಹಂಚಿಕೊಂಡಿದ್ದಾರೆ.

ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ಶಾರುಖ್ ಖಾನ್, ವಿಕ್ರಾಂತ್ ಮಾಸಿ; ಅತ್ಯುತ್ತಮ ನಟಿ ರಾಣಿ ಮುಖರ್ಜಿ
Shah Rukh Khan, Vikrant Massey

Updated on: Aug 01, 2025 | 7:29 PM

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಇಂದು (ಆಗಸ್ಟ್ 1) ಪ್ರಕಟ ಮಾಡಲಾಗಿದೆ. ‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ (Shah Rukh Khan) ಅವರು ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿ ಕೂಡ ಅತ್ಯುತ್ತಮ ನಟ (Best Actor National Film Award) ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಾರುಖ್ ಖಾನ್, ವಿಕ್ರಾಂತ್ ಮಾಸಿ (Vikrant Massey), ರಾಣಿ ಮುಖರ್ಜಿ ಮುಂತಾದವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಶಾರುಖ್ ಖಾನ್ ಅವರು ಕಳೆದ 33 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಆದರೆ ಅವರಿಗೆ ಈವರೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ಅತ್ಯುತ್ತಮ ನಟ ನ್ಯಾಷನಲ್ ಅವಾರ್ಡ್ ಪ್ರಡೆದುಕೊಂಡಿದ್ದಾರೆ. ‘ಜವಾನ್’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಬಾಕ್ಸ್ ಆಫೀಸ್​​ನಲ್ಲಿ ಕೂಡ ಈ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗಿತ್ತು.

2023ನೇ ಸಾಲಿನ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಶಾರುಖ್ ಖಾನ್ ಮತ್ತು ವಿಕ್ರಾಂತ್ ಮಾಸಿ ಅವರು ಹಂಚಿಕೊಂಡಿದ್ದಾರೆ. ‘12th ಫೇಲ್’ ಚಿತ್ರದಲ್ಲಿನ ಅಭಿನಯಕ್ಕಾಗಿ ವಿಕ್ರಾಂತ್ ಮಾಸಿ ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಗಿದೆ. ನೈಜ ಘಟನೆ ಆಧಾರಿತ ಕಥೆಯನ್ನು ‘12th ಫೇಲ್’ ಸಿನಿಮಾ ಹೊಂದಿದೆ. ಈ ಚಿತ್ರದಲ್ಲಿ ಐಪಿಎಸ್​ ಅಧಿಕಾರಿ ಮನೋಜ್ ಕುಮಾರ್ ಶರ್ಮಾ ಅವರ ಪಾತ್ರವನ್ನು ವಿಕ್ರಾಂತ್ ಮಾಸಿ ಮಾಡಿದ್ದಾರೆ.

ರಾಣಿ ಮುಖರ್ಜಿ ಅವರು ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಚಿತ್ರದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ’ ಪಡೆದಿದ್ದಾರೆ. ಈ ಸಿನಿಮಾ ಕೂಡ ನೈಜ ಘಟನೆಗಳನ್ನು ಆಧರಿಸಿ ತಯಾರಾಗಿದೆ. ಮಹಿಳಾ ಪ್ರಧಾನ ಕಥೆ ಹೊಂದಿರುವ ಈ ಸಿನಿಮಾ 2023ರ ಮಾರ್ಚ್​ 17ರಂದು ಬಿಡುಗಡೆ ಆಗಿತ್ತು.

ಇದನ್ನೂ ಓದಿ: ಶಾರುಖ್​ ಖಾನ್​ಗೆ ಪೆಟ್ಟಾಗಿದ್ದು ಸುಳ್ಳಾ? ಶೂಟಿಂಗ್ ಬಿಟ್ಟು ಅಮೆರಿಕಕ್ಕೆ ಹೋಗಿದ್ದು ಯಾಕೆ?

ಅತ್ಯುತ್ತಮ ಕಥಾಚಿತ್ರ ಪ್ರಶಸ್ತಿಯು ‘12th ಫೇಲ್’ ಸಿನಿಮಾಗೆ ಸಿಕ್ಕಿದೆ. ಅತ್ಯುತ್ತಮ ಮನರಂಜನಾ ಸಿನಿಮಾ ಪ್ರಶಸ್ತಿಯು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕೆ ಸಿಕ್ಕಿದೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾಗಳ ಕನ್ನಡ ವಿಭಾಗದಲ್ಲಿ ‘ಕಂದೀಲು’ ಚಿತ್ರಕ್ಕೆ ಪ್ರಶಸ್ತಿ ಬಂದಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದ ನಿರ್ದೇಶನಕ್ಕಾಗಿ ಸುದೀಪ್ರೋ ಸೇನ್ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:49 pm, Fri, 1 August 25