ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಈಗ ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ವದಂತಿಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಇದನ್ನು ಕೇಳಿ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ.

ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​
ಶಾರುಖ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 18, 2021 | 7:43 PM

ಚಿತ್ರರಂಗದಲ್ಲಿ ನಟ-ನಟಿಯರ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಳ್ಳುತ್ತವೆ. ಇದರಲ್ಲಿ ಬಹುತೇಕವು ಫೇಕ್​ ಆದರೆ, ಇನ್ನೂ ಕೆಲವು ನಿಜವಾಗಿರುತ್ತದೆ. ಈಗ ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ವದಂತಿಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಇದನ್ನು ಕೇಳಿ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರ ಬಗ್ಗೆ ಹರಿದಾಡಿದ ವದಂತಿ ಏನು ಎನ್ನುವುದಕ್ಕೆ ಇಲ್ಲಿದೆ ಉತ್ತರ.

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ‘ಶೇರ್​ಷಾ’ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಶಾರುಖ್​ ಪಾತ್ರದ ಬಗ್ಗೆಯೂ ಒಂದಷ್ಟು ವಿಚಾರಗಳು ಹುಟ್ಟಿಕೊಂಡಿದ್ದವು. ಆದರೆ, ಅಸಲಿಗೆ ಶಾರುಖ್​ ಖಾನ್​ ಈ ಸಿನಿಮಾದಲ್ಲಿ ನಟಿಸುತ್ತಲೇ ಇಲ್ಲ. ಈ ವಿಚಾರ ಕೇಳಿದ ಅಭಿಮಾನಿಗಳು ಸಾಕಷ್ಟು ಬೇಸರಗೊಂಡಿದ್ದಾರೆ.

ಕರಣ್​ ಜೋಹರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ಕರಣ್​ ಕಡೆಯಿಂದಲೇ ಈಗ ಸ್ಪಷ್ಟನೆ ಸಿಕ್ಕಿದೆ. ಶಾರುಖ್​ ಖಾನ್ ಈ ಸಿನಿಮಾದಲ್ಲಿ ಯಾವುದೇ ಅತಿಥಿ ಪಾತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಕೊಂಚ ಬೇಸರವಾಗಿದ್ದಂತೂ ನಿಜ.

ಜುಲೈ 16ರಂದು ಸಿನಿಮಾದ ಟ್ರೇಲರ್​ ರಿಲೀಸ್​ ಆಗುತ್ತಿದೆ. ಸ್ವಾತಂತ್ರ್ಯೋತ್ಸವದ ನಿಮಿತ್ತ ಸಿನಿಮಾ ಆಗಸ್ಟ್​ 12ರಂದು ತೆರೆಗೆ ಬರುತ್ತಿದೆ. ಅಂದಹಾಗೆ ಈ ಸಿನಿಮಾ ಸ್ವತಂತ್ರ್ಯ ದಿನಾಚರಣೆ ಪ್ರಯುಕ್ತ ರಿಲೀಸ್​ ಆಗುತ್ತಿರುವುದಕ್ಕೂ ಒಂದು ಕಾರಣವಿದೆ. ಕಾರ್ಗಿಲ್​ ವಾರ್​ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್​ ಬಾತ್ರ ಬಗ್ಗೆ ಈ ಸಿನಿಮಾ ಇದೆ. ವಿಕ್ರಮ್​ ಪಾತ್ರದಲ್ಲಿ ಸಿದ್ಧಾರ್ಥ್​ ನಟಿಸುತ್ತಿದ್ದಾರೆ. ಕಿಯಾರಾ ಅಡ್ವಾಣಿ ಈ ಸಿನಿಮಾದಲ್ಲಿ ಹೀರೋಯಿನ್​ ಆಗಿ ಕಾಣಿಸಿಕೊಂಡಿದ್ದಾರೆ.

ಶಾರುಖ್​ ಖಾನ್​ ಪಠಾಣ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಜೀರೋ’ ಸಿನಿಮಾ ಸೋತ ನಂತರದಲ್ಲಿ ಶಾರುಖ್​ ಕೈಗೆತ್ತಿಕೊಂಡ ಮೊದಲ ಸಿನಿಮಾ ಇದಾಗಿದೆ. ಹೀಗಾಗಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಲ್ಲದೆ, ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಟೈಮ್​ಗೆ​ ಸರಿಯಾಗಿ ಶೂಟಿಂಗ್​ಗೆ ಬರ್ತೀನಿ, ಪ್ಲೀಸ್​ ಚಾನ್ಸ್​ ಕೊಡಿ’; ನಿರ್ಮಾಪಕಿ ಬಳಿ ಶಾರುಖ್​ ಮನವಿ

ಸೆಲೆಬ್ರಿಟಿ ಬಾಡಿಗಾರ್ಡ್​ ಸಂಬಳ ಎಷ್ಟು? ಶಾರುಖ್​, ಸಲ್ಲು, ಕೊಯ್ಲಿ ಕೊಡ್ತಾರೆ ಕೋಟಿ ಕೋಟಿ ಮೊತ್ತ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ