‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?

ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಈಗ ಅವರು ಜೂನಿಯರ್ ಎನ್​ಟಿಆರ್ ಜೊತೆ ‘ಡ್ರ್ಯಾಗನ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಬಾಲಿವುಡ್ ಸ್ಟಾರ್ ಕಲಾವಿದರ ಸೇರ್ಪಡೆ ಆಗುತ್ತಿದೆ. ಈ ಬಗ್ಗೆ ಟಾಲಿವುಡ್ ಅಂಗಳದಲ್ಲಿ ಸುದ್ದಿ ಕೇಳಿಬರುತ್ತಿದೆ.

‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?
Jr Ntr, Alia Bhatt, Shahid Kapoor
Image Credit source: PTI

Updated on: Sep 03, 2026 | 6:43 PM

ಜೂನಿಯರ್ ಎನ್‌ಟಿಆರ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಡ್ರ್ಯಾಗನ್’ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿರುವ ಚಿತ್ರಗಳ ಪೈಕಿ ಒಂದಾಗಿದೆ. ಚಿತ್ರದ ಪ್ರತಿಯೊಂದು ಅಪ್‌ಡೇಟ್ ಕೂಡ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸುತ್ತಿದೆ. ಈಗಾಗಲೇ ಬಾಲಿವುಡ್‌ನ ಹಿರಿಯ ನಟ ಅನಿಲ್ ಕಪೂರ್ ಚಿತ್ರತಂಡಕ್ಕೆ ಸೇರ್ಪಡೆಯಾಗಿರುವುದು ‘ಡ್ರ್ಯಾಗನ್’ಗೆ ಮತ್ತಷ್ಟು ತಾರಾ ಮೆರುಗು ತಂದಿದೆ. ಇದರ ಬೆನ್ನಲ್ಲೇ ಬಾಲಿವುಡ್‌ನ ಸ್ಟಾರ್ ನಟರಾದ ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನಿರ್ಮಾಪಕರ ಕಡೆಯಿಂದ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಆದರೆ ಚಿತ್ರರಂಗದ ಮೂಲಗಳ ಪ್ರಕಾರ, ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಇಬ್ಬರೂ ‘ಡ್ರ್ಯಾಗನ್’ ತಂಡವನ್ನು ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಲಿಯಾ ಭಟ್ ಈಗಾಗಲೇ ಬಾಲಿವುಡ್ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟಿ. ಅವರಂತಹ ಜನಪ್ರಿಯ ನಟಿ ಜೂನಿಯರ್ ಎನ್‌ಟಿಆರ್ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ಚಿತ್ರದ ಪ್ಯಾನ್ ಇಂಡಿಯಾ ವ್ಯಾಪ್ತಿಗೆ ಮತ್ತಷ್ಟು ಬಲ ನೀಡುವ ಸಾಧ್ಯತೆಯಿದೆ.

ಇನ್ನು, ಶಾಹಿದ್ ಕಪೂರ್ ಹಾಗೂ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್ ಕೂಡ ಸಿನಿಪ್ರಿಯರಿಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ನಿಜವಾದರೆ, ಇದು ಚಿತ್ರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ. ಬೇರೆ ಬೇರೆ ಸ್ಟಾರ್ ಕಲಾವಿದರ ಸೇರ್ಪಡೆಯ ಕಾರಣದಿಂದ ಈ ಚಿತ್ರದ ಮೇಲಿನ ಹೈಪ್ ಮತ್ತಷ್ಟು ಹೆಚ್ಚಿದೆ.

ಪ್ರಶಾಂತ್ ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಬೃಹತ್ ಆ್ಯಕ್ಷನ್ ಸನ್ನಿವೇಶಗಳು, ಮಾಸ್ ಎಲಿಮೆಂಟ್ಸ್ ಮತ್ತು ದೊಡ್ಡ ಮಟ್ಟದ ಪಾತ್ರಗಳನ್ನು ಕಟ್ಟಿಕೊಡುವುದಕ್ಕೆ ಹೆಸರುವಾಸಿ. ‘ಡ್ರ್ಯಾಗನ್’ನಲ್ಲೂ ಇದೇ ರೀತಿಯ ಅದ್ದೂರಿ ಟ್ರೀಟ್‌ಮೆಂಟ್ ನಿರೀಕ್ಷಿಸಲಾಗುತ್ತಿದೆ. ಸದ್ಯ ಜೂನಿಯರ್ ಎನ್‌ಟಿಆರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಪ್ರಶಾಂತ್ ನೀಲ್ ಇತರ ಕಲಾವಿದರನ್ನು ಒಳಗೊಂಡ ದೃಶ್ಯಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಭುಜದ ಶಸ್ತ್ರಚಿಕಿತ್ಸೆ ಮುಕ್ತಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಜೂನಿಯರ್ ಎನ್‌ಟಿಆರ್

ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಅವರ ಸೇರ್ಪಡೆಯ ಸುದ್ದಿ ಅಧಿಕೃತವಾಗಿ ದೃಢಪಟ್ಟರೆ, ಜೂನಿಯರ್ ಎನ್‌ಟಿಆರ್, ಅನಿಲ್ ಕಪೂರ್, ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಅವರಂತಹ ದೊಡ್ಡ ತಾರೆಯರ ಸಮಾಗಮದಿಂದ ‘ಡ್ರ್ಯಾಗನ್’ ಚಿತ್ರವು ಭಾರತೀಯ ಚಿತ್ರರಂಗದ ಅದ್ದೂರಿ ಸಿನಿಮಾ ಇದಾಗಲಿದೆ. ಚಿತ್ರತಂಡದಿಂದ ಅಧಿಕೃತ ಘೋಷಣೆ ಯಾವಾಗ ಹೊರಬೀಳಲಿದೆ ಎಂಬುದೇ ಸದ್ಯ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us