AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಇಲ್ಲದೆ ಕಂಗೆಟ್ಟಿರೋ ಶಾಲಿನಿ ಪಾಂಡೆಗೆ ಎದುರಾಗುತ್ತಿರುವ ತೊಂದರೆ ಒಂದೆರಡಲ್ಲ

'ಅರ್ಜುನ್ ರೆಡ್ಡಿ' ನಟಿ ಶಾಲಿನಿ ಪಾಂಡೆ ತಮ್ಮ ಹೆಸರಿನಲ್ಲಿ ವೈರಲ್ ಆಗುತ್ತಿರುವ ನಕಲಿ ಎಐ ವಿಡಿಯೋ ವಿರುದ್ಧ ಕಿಡಿಕಾರಿದ್ದಾರೆ. ತಂತ್ರಜ್ಞಾನದ ದುರ್ಬಳಕೆ ಕಂಡು ಆತಂಕ ವ್ಯಕ್ತಪಡಿಸಿರುವ ಅವರು, ವಿಡಿಯೋ ಹಂಚಿಕೊಳ್ಳದೆ ತಕ್ಷಣ ರಿಪೋರ್ಟ್ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಸಕ್ಸಸ್ ಇಲ್ಲದೆ ಕಂಗೆಟ್ಟಿರೋ ಶಾಲಿನಿ ಪಾಂಡೆಗೆ ಎದುರಾಗುತ್ತಿರುವ ತೊಂದರೆ ಒಂದೆರಡಲ್ಲ
ಶಾಲಿನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 01, 2026 | 11:19 AM

Share

ಮುಖ್ಯಾಂಶಗಳು

  • ಶಾಲಿನಿ ಪಾಂಡೆ ನಕಲಿ ಎಐ ವಿಡಿಯೋ ರಾದ್ಧಾಂತ
  • ಎಐ ದುರ್ಬಳಕೆ ವಿರುದ್ಧ ನಟಿ ಆಕ್ರೋಶ
  • ಶಾಲಿನಿ ಬೆಂಬಲಕ್ಕೆ ನಿಂತ ಅಭಿಮಾನಿಗಳು

‘ಅರ್ಜುನ್ ರೆಡ್ಡಿ’ ಸಿನಿಮಾ ಖ್ಯಾತಿಯ ನಟಿ ಶಾಲಿನಿ ಪಾಂಡೆಗೆ ಒಂದು ಕಡೆ ಸಕ್ಸಸ್ ಸಿಗುತ್ತಿಲ್ಲ. ಮತ್ತೊಂದು ಕಡೆ ಅವರ ಹೆಸರಿನಲ್ಲಿ ನಕಲಿ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಐ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ಈ ವಿಡಿಯೋ ಕಂಡು ನಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯರನ್ನು ಗುರಿಯಾಗಿಸುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಈ ಕುರಿತು ಶಾಲಿನಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಆ ವಿಡಿಯೋ ಸಂಪೂರ್ಣವಾಗಿ ನಕಲಿ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಶಾಲಿನಿ ಸ್ಪಷ್ಟಪಡಿಸಿದ್ದಾರೆ. ಇಂತಹ ತಂತ್ರಜ್ಞಾನದ ದುರ್ಬಳಕೆಯನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ. ಯಾರೂ ಸಹ ಇಂತಹ ವಿಡಿಯೋಗಳನ್ನು ಶೇರ್ ಮಾಡಬಾರದು. ಯಾರಾದರೂ ಈ ವಿಡಿಯೋ ಕಂಡರೆ ತಕ್ಷಣವೇ ರಿಪೋರ್ಟ್ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಾಲಿನಿ ಪಾಂಡೆ ಡೀಪ್‌ಫೇಕ್ ವಿಡಿಯೋ ವೈರಲ್; ಎಐ ದುರ್ಬಳಕೆ ವಿರುದ್ಧ ಗುಡುಗಿದ ನಟಿ

ನೆಟ್ಟಿಗರು ಕೂಡ ಶಾಲಿನಿ ಬೆಂಬಲಕ್ಕೆ ನಿಂತಿದ್ದಾರೆ. ಎಐ ತಂತ್ರಜ್ಞಾನದ ದುರ್ಬಳಕೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ತೇಜೋವಧೆಗೆ ಇಂತಹ ಹಾದಿ ತುಳಿಯುವುದು ಖಂಡನೀಯ ಎಂದು ಕಾಮೆಂಟ್ ಮಾಡಿದ್ದಾರೆ. ಇಂತಹ ನಕಲಿ ಕಂಟೆಂಟ್ ತಡೆಯಲು ಸರ್ಕಾರ ಕಠಿಣ ನಿಯಮ ತರಬೇಕೆಂದು ಆಗ್ರಹಿಸಿದ್ದಾರೆ. ಶಾಲಿನಿಗೆ ಧೈರ್ಯ ತುಂಬುವ ಕೆಲಸವನ್ನು ಅಭಿಮಾನಿಗಳು ಮಾಡಿದ್ದಾರೆ.

2017ರಲ್ಲಿ ತೆರೆಕಂಡ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಶಾಲಿನಿ ಪ್ರಸಿದ್ದಿ ಪಡೆದರು. ವಿಜಯ್ ದೇವರಕೊಂಡ ಜೋಡಿಯಾಗಿ ನಟಿಸಿದ್ದ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ತದನಂತರ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ‘ಮಹಾನಟಿ’, ‘118’ ಹಾಗೂ ‘ಜಯೇಶ್‌ಭಾಯಿ ಜೋರ್ದಾರ್’ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

View this post on Instagram

A post shared by Shalini Pandey (@shalzp)

ಇತ್ತೀಚೆಗೆ ಶಾಲಿನಿ ‘ರಾಹು ಕೇತು’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುಲ್ಕಿತ್ ಸಾಮ್ರಾಟ್ ಮತ್ತು ವರುಣ್ ಶರ್ಮಾ ಜೊತೆ ಅವರು ಸ್ಕ್ರೀನ್ ಹಂಚಿಕೊಂಡಿದ್ದರು. ತಮ್ಮ ವೃತ್ತಿಜೀವನದಲ್ಲಿ ಬ್ಯುಸಿಯಾಗಿರುವ ನಟಿಗೆ ಎಐ ವಿಡಿಯೋ ಸಂಕಟ ತಂದೊಡ್ಡಿದೆ. ಆದರೂ ಧೈರ್ಯವಾಗಿ ಎದುರಿಸಿ ಸೋಷಿಯಲ್ ಮೀಡಿಯಾದಲ್ಲಿ ಜಾಗೃತಿ ಮೂಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ