Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!

Bigg Boss Kannada Season 8: ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!
ಬಿಗ್​​ಬಾಸ್​​ ಕನ್ನಡ 8
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Mar 30, 2021 | 10:28 AM

ಬಿಗ್​ ಬಾಸ್​ ಐದನೇ ವಾರಕ್ಕೆ ಕಾಲಿಟ್ಟಿದೆ. ವೀಕ್​ ಇರುವ ಸ್ಪರ್ಧಿಗಳು ಈಗಾಗಲೇ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದು, ಪ್ರಮುಖ ಎನಿಸಿರುವ 13 ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ಪೈಕಿ ಐದನೇ ವಾರದ ಎಲಿಮಿನೇಷನ್​ಗೆ 6 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಎಲ್ಲಾ ಸ್ಪರ್ಧಿಗಳು ಪ್ರಮುಖರೇ ಅನ್ನೋದು ವಿಶೇಷ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದಾರೆ. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡ್ತಿದಾರೆ ಅನಿಸುತ್ತದೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ನಾಮಿನೇಷನ್​ಗೆ ಅವರ ಹೆಸರನ್ನು ತೆಗೆದುಕೊಂಡರು.

ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದಾರೆ. ಅವರು ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಸಾಲಿನಲ್ಲಿದ್ದಾರೆ. ಅವರು ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದರು. ಹೀಗಾಗಿ, ಅವರು ಕೂಡ ನಾಮಿನೇಟ್ ಆದರು.

ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ದಿವ್ಯಾ ಸುರೇಶ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದರು. ಆದರೆ, ಮನೆಯ ಕ್ಯಾಪ್ಟನ್​ಗೆ ಒಬ್ಬರನ್ನು ಸೇಫ್​ ಮಾಡಬೇಕು ಎನ್ನುವ ಆಯ್ಕೆಯನ್ನು ಬಿಗ್ ಬಾಸ್​ ನೀಡಿದರು. ಆಗ ಮನೆಯ ಕ್ಯಾಪ್ಟನ್​ ವಿಶ್ವ ಅವರು ದಿವ್ಯಾ ಸುರೇಶ್​ ಅವರನ್ನು ಸೇಫ್​ ಮಾಡಿದರು. ಈ ಬಾರಿ ನಾಮಿನೇಟ್​ ಆಗಿರುವ ಎಲ್ಲಾ ಸ್ಪರ್ಧಿಗಳು ತುಂಬಾನೇ ಸ್ಟ್ರಾಂಗ್​ ಎನ್ನುವ ಮಾತುಗಳನ್ನು ಮನೆ ಮಂದಿ ಹೇಳಿಕೊಂಡರು.

ಇದನ್ನೂ ಓದಿ: BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Published On - 7:13 am, Tue, 30 March 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ