AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ

Sharmila Mandre marriage: ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ.

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ
Sharmila Mandre
ಮಂಜುನಾಥ ಸಿ.
|

Updated on: Jun 17, 2026 | 10:20 AM

Share

ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ.

ಶರ್ಮಿಳಾ ಮಾಂಡ್ರೆ ಅವರು ತಮಿಳುನಾಡಿನ ಸೊಸೆಯಾಗಿ ಹೋಗಲಿದ್ದು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆ ಆಗ ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ದ ನಿರ್ಮಾಪಕ ಆಗಿದ್ದಾರೆ. ‘ಮಹಾರಾಜ’ ಮಾತ್ರವಲ್ಲದೆ ಇತ್ತೀಚೆಗೆ ಸೂಪರ್ ಹಿಟ್ ಆದ ತಮಿಳು ಸಿನಿಮಾ ‘ತಾಕ್ ಕಿಳವಿ’ಗೂ ಇವರು ಸಹ ನಿರ್ಮಾಪಕರು. ಕೆಲವೇ ದಿನಗಳಲ್ಲಿ ಇವರ ನಿಶ್ಚಿತಾರ್ಥ ನಡೆಯಲಿದ್ದು, ಮದುವೆ ಸಹ ಇದೇ ವರ್ಷದಲ್ಲಿ ನೆರವೇರಲಿದೆ.

ಸುಧನ್ ಅವರು ಪ್ಯಾಷನ್ ಸ್ಟುಡಿಯೋಸ್ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದು, ಸಿನಿಮಾ ನಿರ್ಮಾಣ ಮತ್ತು ವಿತರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಮಹಾರಾಜ’ ಮಾತ್ರವಲ್ಲದೆ, ತಮಿಳಿನ ‘ಬೆಂಜ್’, ‘ಇರೈವನ್’, ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಇದೀಗ ನಟಿ ಶರ್ಮಿಳಾ ಮಾಂಡ್ರೆ ಅವರನ್ನು ವಿವಾಹವಾಗುತ್ತಿದ್ದಾರೆ.

ಇದನ್ನೂ ಓದಿ:ಲೈವ್ ಮ್ಯೂಸಿಕ್ ಶೋ ಎಂಜಾಯ್ ಮಾಡಿದ ನಟಿ ಶರ್ಮಿಳಾ ಮಾಂಡ್ರೆ

2007 ರಲ್ಲಿ ಬಿಡುಗಡೆ ಆದ ‘ಸಜನಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ಶರ್ಮಿಳಾ ಮಾಂಡ್ರೆ ಹಲವು ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ತಮಿಳಿನ ‘ಅದೃಷ್ಟಶಾಲಿ’ ಮತ್ತು ‘ದಸರಾ’ ಹೆಸರಿನ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ ನಟಿ ಮಾತ್ರವೇ ಅಲ್ಲದೆ ನಿರ್ಮಾಪಕಿಯೂ ಆಗಿದ್ದು ತಮಿಳಿನಲ್ಲಿ ನಾಲ್ಕು ಸಿನಿಮಾ ನಿರ್ಮಿಸಿದ್ದಾರೆ. ಕನ್ನಡದಲ್ಲಿ ‘ದಸರಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ‘ಕಾದಲ್ ಕೊಂಜಂ ತೂಕಲಾ’ ಹೆಸರಿನ ತಮಿಳು ಸಿನಿಮಾವನ್ನೂ ಸಹ ನಿರ್ಮಾಣ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ