AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ನ್​ ದಂಧೆ ಆರೋಪ; ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ ಕುಂದ್ರಾ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ

ಕೆಂಡ್ರಿಂಗ್​ ಹೆಸರಿನ ಇಂಗ್ಲೆಂಡ್​ ಮೂಲದ ಕಂಪನಿ ಮೇಲೆ ರಾಜ್​ 10 ಕೋಟಿ ಹೂಡಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಉಮೇಶ್ ಎಂಬಾತನನ್ನು ಬಂಧಿಸಲಾಗಿದೆ. ಕುಂದ್ರಾ ಹಾಗೂ ಉಮೇಶ್​ ನಡುವೆ ಒಪ್ಪಂದ ಇತ್ತು ಎನ್ನಲಾಗಿದೆ.

ಪಾರ್ನ್​ ದಂಧೆ ಆರೋಪ; ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ ಕುಂದ್ರಾ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ
ರಾಜ್​ ಕುಂದ್ರಾ
TV9 Web
| Edited By: |

Updated on: Jul 20, 2021 | 3:45 PM

Share

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ಈಗ ಅವರನ್ನು ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದ್ದು, ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಲಯ ಆದೇಶ ಹೊರಡಿಸಿದೆ.

‘ಫೆಬ್ರವರಿ 2021ರಂದು ಕ್ರೈಮ್​ ಬ್ರ್ಯಾಂಚ್​ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡಿ, ಕೆಲ ಆ್ಯಪ್​ಗಳ ಮೂಲಕ ಇದನ್ನು ಅಪ್​ಲೋಡ್​ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನಮಗೆ ಲಭ್ಯವಾಗಿತ್ತು. ಇಂದು (ಜುಲೈ 19) ನಾವು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದೇವೆ. ಇಡೀ ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದರು.

ಕೆಂಡ್ರಿಂಗ್​ ಹೆಸರಿನ ಇಂಗ್ಲೆಂಡ್​ ಮೂಲದ ಕಂಪನಿ ಮೇಲೆ ರಾಜ್​ 10 ಕೋಟಿ ಹೂಡಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಉಮೇಶ್ ಎಂಬಾತನನ್ನು ಬಂಧಿಸಲಾಗಿದೆ. ಕುಂದ್ರಾ ಹಾಗೂ ಉಮೇಶ್​ ನಡುವೆ ಒಪ್ಪಂದ ಇತ್ತು ಎನ್ನಲಾಗಿದೆ. ಈಗ ಪೊಲೀಸರು ಸೂಕ್ತ ದಾಖಲೆಗಳನ್ನು ನ್ಯಾಯಾಲಯದ ಎದುರು ಒದಗಿಸಿದ್ದಾರೆ. ಹೀಗಾಗಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್​ಕುಂದ್ರಾ 2009ರಲ್ಲಿ ಮದುವೆ ಆದರು. ಇಬ್ಬರೂ ಸುಖ ಸಂಸಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಈ ಸುದ್ದಿ ಬರ ಸಿಡಿಲಿನಂತೆ ಬಂದಪ್ಪಳಿಸಿದ್ದು, ಅಭಿಮಾನಿಗಳು ಹಾಗೂ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಇದು ಶಾಕ್​ ನೀಡಿದೆ.

ಇದನ್ನೂ ಓದಿ: ಖ್ಯಾತ ನಟಿ ಶಿಲ್ಪಾ ಶೆಟ್ಟಿಗೆ ರಾಜ್​ ಕುಂದ್ರಾ ಸಿಕ್ಕಿದ್ದು ಹೇಗೆ? ಆ ಬಗ್ಗೆ ರಾಜ್​ನ ಮೊದಲ ಪತ್ನಿ ಕವಿತಾ ಏನೆಂದಿದ್ದರು?

Raj Kundra: ರಾಜ್​ ಕುಂದ್ರಾ ಬಂಧನ; ಶಿಲ್ಪಾ ಶೆಟ್ಟಿ ಪತಿ ನಡೆಸುತ್ತಿದ್ದರು ಪಾರ್ನ್​ ಸಿನಿಮಾ ಜಾಲ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ