AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಕೇಸ್ ಆರೋಪಿ ನಟನಿಂದಲೇ ಮಾದಕ ದ್ರವ್ಯ ವಿರೋಧಿ ಸಿನಿಮಾ; ಇದಕ್ಕಿದೆ ಬೆಂಗಳೂರು ನಂಟು

ಅಂದು ಡ್ರಗ್ಸ್ ಸೇವನೆ ಆರೋಪಿ, ಆದರೆ ಇಂದು ಡ್ರಗ್ಸ್ ವಿರೋಧಿ ಸಂದೇಶ ಇರುವ ಸಿನಿಮಾದಲ್ಲಿ ಹೀರೋ! ಮಾಲಿವುಡ್ ಖ್ಯಾತ ನಟ ಶೈನ್ ಟಾಮ್ ಚಾಕೋ ಅವರ ಕುರಿತು ಈ ಅಚ್ಚರಿಯ ಸುದ್ದಿ ಹೊರಬಿದ್ದಿದೆ. ಅವರು ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಕಥೆ ಇರಲಿದೆ.

ಡ್ರಗ್ಸ್ ಕೇಸ್ ಆರೋಪಿ ನಟನಿಂದಲೇ ಮಾದಕ ದ್ರವ್ಯ ವಿರೋಧಿ ಸಿನಿಮಾ; ಇದಕ್ಕಿದೆ ಬೆಂಗಳೂರು ನಂಟು
Shine Tom Chacko
ಮದನ್​ ಕುಮಾರ್​
|

Updated on: Jul 22, 2025 | 9:25 PM

Share

ಇದೊಂದು ಅಚ್ಚರಿಯ ಪ್ರಸಂಗವೇ ಸರಿ. ಕೆಲವು ದಿನಗಳ ಹಿಂದೆ ಮಲಯಾಳಂ ನಟ ಶೈನ್ ಟಾಮ್ ಚಾಕೋ (Shine Tom Chacko) ಮೇಲೆ ಸಾಕಷ್ಟು ಆರೋಪಗಳು ಎದುರಾಗಿದ್ದವು. ಡ್ರಗ್ಸ್ (Drugs) ಸೇವನೆ ಮಾಡುತ್ತಾರೆ ಎಂಬ ಆರೋಪ ಅವರ ಮೇಲೆ ಕೇಳಿಬಂದಿತ್ತು. ಆದರೆ ಈಗ ಅದೇ ಶೈನ್ ಟಾಮ್ ಚಾಕೋ ಅವರು ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುವ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ! ಅಂದಹಾಗೆ, ಈ ಸಿನಿಮಾಗೆ ಬೆಂಗಳೂರಿನ ನಂಟು ಕೂಡ ಇದೆ. ಇತ್ತೀಚೆಗಷ್ಟೇ ಈ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ ‘ಬೆಂಗಳೂರು ಹೈ’ (Bangalore High) ಎಂದು ಹೆಸರು ಇಡಲಾಗಿದೆ.

ಜುಲೈ 21ರಂದು ಬೆಂಗಳೂರಿನಲ್ಲೇ ‘ಬೆಂಗಳೂರು ಹೈ’ ಸಿನಿಮಾ ಲಾಂಚ್ ಮಾಡಲಾಗಿದೆ. ಕಾನ್ಫಿಡೆಂಟ್ ಗ್ರೂಪ್​ನ ಡಾ. ರಾಯ್ ಸಿಜೆ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡದಿಂದ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ಮಲಯಾಳಂ ಚಿತ್ರರಂಗದಲ್ಲಿ ಡ್ರಗ್ಸ್ ವಾಸನೆ ಜೋರಾಗಿ ಹರಡಿತ್ತು. ಶೈನ್ ಟಾಮ್ ಚಾಕೋ ಅವರು ಉಳಿದುಕೊಂಡಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಆಗ ಶೈನ್ ಟಾಮ್ ಚಾಕೋ ಅವರು ತಪ್ಪಿಸಿಕೊಂಡು ಹೋಗಿದ್ದರು. ಬಳಿಕ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಕೆಲವು ನಟಿಯರು ಕೂಡ ಈ ನಟನ ವಿರುದ್ಧ ಆರೋಪ ಮಾಡಿದ್ದರು.

ಇದನ್ನೂ ಓದಿ
Image
ಮಲಯಾಳಂ ನಟ ಶೈಮ್ ಟಾಮ್ ಚಾಕೊಗೆ ಕೊನೆ ಎಚ್ಚರಿಕೆ
Image
‘ನಾನು ಮಾತ್ರ ಅಲ್ಲಾರೀ’; ಸ್ಟಾರ್ ಕಲಾವಿದರ ಡ್ರಗ್ಸ್ ಪುರಾಣ ಬಿಚ್ಚಿಟ್ಟ ಶೈನ್
Image
ಡ್ರಗ್ಸ್ ಬಳಕೆ, ನಟಿಗೆ ಕಿರುಕುಳ ಖ್ಯಾತ ನಟನ ಮೇಲೆ ನಿಷೇಧ ಸಾಧ್ಯತೆ
Image
ನಟಿಗೆ ಕಿರುಕುಳ, ಡ್ರಗ್ಸ್ ಬಳಕೆ, ಪೊಲೀಸರ ದಾಳಿ ವೇಳೆ ಪರಾರಿಯಾದ ಜನಪ್ರಿಯ ನಟ

ಕೊಚ್ಚಿ ನಗರ ಪೊಲೀಸರು ಶೈನ್ ಟಾಮ್ ಚಾಕೋ ಅವರನ್ನು ವಶಕ್ಕೆ ಪಡೆದಿದ್ದರು. ಮಾದಕ ವಸ್ತು ಬಳಕೆ ಮತ್ತು ಅಪರಾಧ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿತ್ತು. ಹೋಟೆಲ್​ನಿಂದ ಪರಾರಿಯಾಗಿದ್ದರ ಕುರಿತು ಪೊಲೀಸರು ದೀರ್ಘವಾಗಿ ವಿಚಾರಣೆ ನಡೆಸಿದ್ದರು. ಶೈನ್ ಟಾಮ್ ಚಾಕೋ ಉಳಿದುಕೊಂಡಿದ್ದ ಹೋಟೆಲ್​ನಲ್ಲಿ ಮಾದಕ ವಸ್ತು ಪತ್ತೆ ಆಗಿಲ್ಲ ಎಂಬ ಕಾರಣದಿಂದ ಅವರನ್ನು ವಿಚಾರಣೆ ಬಳಿಕ ಬಿಟ್ಟು ಕಳಿಸಲಾಯಿತು.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ

ಇಷ್ಟೆಲ್ಲ ವಿವಾದ ಮಾಡಿಕೊಂಡ ಶೈನ್ ಟಾಮ್ ಚಾಕೋ ಅವರು ಈಗ ಡ್ರಗ್ಸ್ ವಿರೋಧಿ ಸಂದೇಶ ಇರುವ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್​ನಲ್ಲಿ ‘ಸೇ ನೋ ಟು ಡ್ರಗ್ಸ್’ ಎಂದು ಅವರು ಸಂದೇಶ ನೀಡಿದ್ದಾರೆ. ಶೈನ್ ಟಾಮ್ ಚಾಕೋ ಅವರಿಗೆ ಪ್ರಾಯಶ್ಚಿತ್ತ ಆಗಿದ್ದು, ಆ ಕಾರಣದಿಂದಲೇ ಅವರು ‘ಬೆಂಗಳೂರು ಹೈ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ