ಶಿವರಾಜ್ ಕುಮಾರ್ ಹೊಸ ತಮಿಳು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Shiva Rajkumar: ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಅತಿಥಿ ಪಾತ್ರ ಯಾವ ಮಟ್ಟಿಗೆ ಮೋಡಿ ಮಾಡಿದೆಯೆಂದರೆ ಶಿವಣ್ಣನಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿಬಿಟ್ಟಿದೆ. ಇದೀಗ ಶಿವಣ್ಣ ನಟಿಸಿರುವ ಮತ್ತೊಂದು ತಮಿಳು ಸಿನಿಮಾದ ಬಿಡುಗಡೆ ದಿನಾಂಕ ಘೊಷಣೆಯಾಗಿದೆ.

ಶಿವರಾಜ್ ಕುಮಾರ್ ಹೊಸ ತಮಿಳು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Follow us
ಮಂಜುನಾಥ ಸಿ.
|

Updated on: Nov 08, 2023 | 10:03 PM

ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ (Shiva Rajkumar) ನಿರ್ವಹಿಸಿದ್ದ ಅತಿಥಿ ಪಾತ್ರ ಯಾವ ಮಟ್ಟಿಗೆ ಮೋಡಿ ಮಾಡಿದೆಯೆಂದರೆ ಶಿವಣ್ಣನಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿಬಿಟ್ಟಿದೆ. ಅದೇ ಸಿನಿಮಾದಲ್ಲಿ ಮೋಹನ್​ಲಾಲ್, ಜಾಕಿ ಶ್ರಾಫ್ ಅವರುಗಳು ಸಹ ಅತಿಥಿ ಪಾತ್ರ ಮಾಡಿದ್ದರಾದರೂ ಶಿವಣ್ಣನ ಅತಿಥಿ ಪಾತ್ರ ದೊಡ್ಡ ಮಟ್ಟದ ಕ್ರೇಜ್ ಹುಟ್ಟು ಹಾಕಿತ್ತು. ಆ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಮತ್ತೊಂದು ತಮಿಳು ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಧನುಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾವು ಪಕ್ಕಾ ಆಕ್ಷನ್ ಕತೆಯುಳ್ಳದ್ದಾಗಿದ್ದು ಸಿನಿಮಾದ ಕೆಲವು ಪೋಸ್ಟರ್​ಗಳು ಮಾತ್ರವೇ ಈ ವರೆಗೆ ಬಿಡುಗಡೆ ಆಗಿದ್ದವು. ಪೋಸ್ಟರ್​ಗಳಲ್ಲಿ ಬಂದೂಕು ಹಿಡಿದು ಖಡಕ್​ ಲುಕ್​ನಲ್ಲಿ ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಇದನ್ನೂ ಓದಿ: ಘೋಸ್ಟ್ ಸಿನಿಮಾ ನೋಡಲು ಕೆಲವು ಸಲಹೆ ಕೊಟ್ಟ ನಟ ಶಿವರಾಜ್ ಕುಮಾರ್

ಈ ಹಿಂದೆ ಹರಿದಾಡಿದ ಕೆಲವು ಸುದ್ದಿಗಳ ಪ್ರಕಾರ, ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಶೂಟಿಂಗ್ ಈಗಾಗಲೇ ಮುಗಿದಿದೆ, ಆದರೆ ಬಿಡುಗಡೆ ದಿನಾಂಕವನ್ನು ಉದ್ದೇಶಪೂರ್ವಕವಾಗಿ ತಡಮಾಡಲಾಗಿದೆ ಎನ್ನಲಾಗುತ್ತಿತ್ತು, ಅದಕ್ಕೆ ಮುಖ್ಯ ಕಾರಣ ಕಾವೇರಿ ವಿವಾದ ಎಂಬ ಸುದ್ದಿಯೂ ಹರಿದಾಡುತ್ತಿತ್ತು. ಆದರೆ ಇದೀಗ ಕೊನೆಗೂ ಅಧಿಕೃತವಾಗಿ ಸಿನಿಮಾ ದಿನಾಂಕ ಘೋಷಣೆ ಮಾಡಲಾಗಿದೆ.

ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗುತ್ತದೆ ಎಂದು ನಿರೀಕ್ಷಿಸಲಾಗಿದ್ದ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು 2024ರ ಸಂಕ್ರಾಂತಿಗೆ ಬಿಡುಗಡೆ ಮಾಡಲಾಗುತ್ತಿದೆ. ಅಂದರೆ ಜನವರಿ 15ಕ್ಕೆ ಅಥವಾ 14 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ನಿರ್ಮಾಣ ಸಂಸ್ಥೆಯಾದ ಸತ್ಯಜ್ಯೋತಿ ಫಿಲಮ್ಸ್​ ಘೋಷಣೆ ಮಾಡಿದೆ. ಸಿನಿಮಾವನ್ನು ಅರುಣ್ ಮತ್ತೇಶ್ವರನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಧನುಶ್, ಶಿವರಾಜ್ ಕುಮಾರ್ ಜೊತೆಗೆ ಪ್ರಿಯಾಂಕಾ ಅರುಲ್ ಮೋಹನ್, ಜಾನ್ ಕೊಕ್ಕೆನ್, ನಾಸರ್ ಇನ್ನೂ ಕೆಲವು ಉತ್ತಮ ನಟರಿದ್ದಾರೆ.

‘ಜೈಲರ್’ ಸಿನಿಮಾದಿಂದ ತಮಿಳಿನಲ್ಲಿ ಅಭಿಮಾನಿ ವರ್ಗ ಸೃಷ್ಟಿಸಿಕೊಂಡಿರುವ ಶಿವಣ್ಣನಿಗೆ, ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಮೂಲಕ ಇನ್ನಷ್ಟು ತಮಿಳು ಅಭಿಮಾನಿಗಳು ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ತಮಿಳಿನ ಕೆಲವು ನಿರ್ಮಾಪಕರು ಹಾಗೂ ನಿರ್ದೇಶಕರು ಶಿವಣ್ಣನನ್ನು ತಮಿಳಿನಲ್ಲಿ ಪೂರ್ಣಪ್ರಮಾಣದ ಸಿನಿಮಾ ಮಾಡಲು ಸಂಪರ್ಕ ಮಾಡಿದ್ದು, ಶಿವಣ್ಣ ಸಹ ಕತೆಗಳನ್ನು ಕೇಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್