AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ

Shiva Rajkumar: ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಚಿರಂಜೀವಿ ಅವರನ್ನು ಶಿವರಾಜ್ ಕುಮಾರ್ ಭೇಟಿಯಾಗಿ ಅಭಿನಂದಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ
ಮಂಜುನಾಥ ಸಿ.
|

Updated on: Feb 04, 2024 | 5:36 PM

Share

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರಿಗೂ ಕರ್ನಾಟಕಕ್ಕೂ ಹಳೆಯ ನಂಟಿದೆ. ದೊಡ್ಮನೆ ಮಾತ್ರವೇ ಅಲ್ಲದೆ ಕನ್ನಡದ ಹಲವು ಹಿರಿಯ ನಟರೊಟ್ಟಿಗೆ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಉತ್ತಮ ಬಾಂಧವ್ಯವಿದೆ. ಇತ್ತೀಚೆಗಷ್ಟೆ ಚಿರಂಜೀವಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಸಹ ನಡೆಯಲಿದೆ. ಹಲವು ಗಣ್ಯರು ಚಿರಂಜೀವಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ (Shiva Rajkumar) ಸಹ ಚಿರಂಜೀವಿ ಅವರನ್ನು ಭೇಟಿಯಾಗಿ ಅಭಿನಂದನೆ ಕೋರಿದ್ದಾರೆ.

ಹೈದರಾಬಾದ್​ನ ಮೆಗಾಸ್ಟಾರ್ ಚಿರಂಜೀವಿ ಅವರ ನಿವಾಸಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಚಿರಂಜೀವಿ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಕೆಲವು ಸಮಯವನ್ನು ಇಬ್ಬರೂ ಒಟ್ಟಿಗೆ ಕಳೆದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವರಾಜ್ ಕುಮಾರ್ ಅವರು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ, ‘ನನ್ನ ಪ್ರೀತಿಯ ಶಿವರಾಜ್ ಕುಮಾರ್ ಅವರು ಬೆಂಗಳೂರಿನಿಂದ ಇಲ್ಲಿಗೆ ಆಗಮಿಸಿ ಶುಭ ಕೋರಿದ್ದು ಬಹಳ ಖುಷಿಯಾಯಿತು’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಮುಂದುವರೆದು, ‘ಕೆಲವು ಅತ್ಯುತ್ತಮ ಕ್ಷಣಗಳನ್ನು ನಾವು ಒಟ್ಟಿಗೆ ಕಳೆದವು. ಒಟ್ಟಿಗೆ ಭೋಜ ಮಾಡಿದೆವು. ಎರಡು ಕುಟುಂಬಗಳ ಬಂಧವನ್ನು ನೆನಪು ಮಾಡಿಕೊಂಡೆವು. ದಂತಕತೆ ಡಾ ರಾಜ್​ಕುಮಾರ್ ಅವರೊಟ್ಟಿಗೆ ಹಾಗೂ ಅವರ ಕುಟುಂಬದವರೊಟ್ಟಿಗೆ ಕಳೆದ ಕ್ಷಣಗಳ ನೆನಪುಗಳು ಜೀವನ ಪರ್ಯಂತ ಜೊತೆಗಿರುತ್ತವೆ’ ಎಂದಿದ್ದಾರೆ ಮೆಗಾಸ್ಟಾರ್ ಚಿರಂಜೀವಿ.

ಇದನ್ನೂ ಓದಿ:ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

ಮೆಗಾಸ್ಟಾರ್ ಕುಟುಂಬದಲ್ಲಿ ಆದ ಎಲ್ಲ ಶುಭ ಸಮಾರಂಭಗಳಲ್ಲಿಯೂ ಡಾ ರಾಜ್​ಕುಮಾರ್ ಕುಟುಂಬದವರು ಭಾಗಿಯಾಗಿದ್ದಾರೆ. ಹಾಗೆಯೇ ದೊಡ್ಮನೆಯ ಕಾರ್ಯಕ್ರಮಗಳಿಗೂ ಮೆಗಾಸ್ಟಾರ್ ಕುಟುಂಬದವರು ತಪ್ಪದೇ ಹಾಜರಾಗುತ್ತಾರೆ. ರಾಮ್ ಚರಣ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಅತಿಥಿಯಾಗಿದ್ದರು. ಅಲ್ಲು ಅರ್ಜುನ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಹಾಗೂ ಶಿವರಾಜ್ ಕುಮಾರ್ ಇಬ್ಬರೂ ಹೋಗಿದ್ದರು.

ಇದೀಗ ನಟ ಶಿವರಾಜ್ ಕುಮಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಅವರೊಟ್ಟಿಗೆ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ. ಬುಚ್ಚಿಬಾಬು ಸನಾ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ರಾಮ್ ಚರಣ್ ಹಾಗೂ ಬುಚ್ಚಿಬಾಬು ಸನಾ ಒಟ್ಟಿಗೆ ನಟಿಸುತ್ತಿದ್ದಾರೆ. ತೆಲುಗು ಚಿತ್ರರಂಗ ಶಿವಣ್ಣನಿಗೆ ಹೊಸದೇನೂ ಅಲ್ಲ, ಈಗಾಗಲೇ ಬಾಲಕೃಷ್ಣ ಜೊತೆಗೆ ಗೌತಮಿ ಪುತ್ರ ಶಾತಕರ್ಣಿ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದಾರೆ. ಇದೀಗ ರಾಮ್ ಚರಣ್ ಸಿನಿಮಾದ ಜೊತೆಗೆ ಇನ್ನೆರಡು ತೆಲುಗು ಸಿನಿಮಾಗಳ ಆಫರ್ ಅನ್ನು ಸಹ ಶಿವಣ್ಣ ಪಡೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು