AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಸ್ಟಾರ್ ಜೊತೆ ಶಿವರಾಜ್ ಕುಮಾರ್ ನಟನೆ, ನಿರ್ದೇಶಕ ಯಾರು?

Shiva Rajkumar: ತಮಿಳಿನ ‘ಜೈಲರ್’ ಸಿನಿಮಾದಲ್ಲಿ ನಟಿಸಿ ತಮಿಳು ಪ್ರೇಕ್ಷಕರಿಗೆ ಹತ್ತಿರವಾಗಿರುವ ಶಿವರಾಜ್ ಕುಮಾರ್ ಈಗ ತೆಲುಗಿನಲ್ಲಿ ಸ್ಟಾರ್ ನಟನೊಟ್ಟಿಗೆ ನಟಿಸಲಿದ್ದಾರೆ.

‘ಆರ್​ಆರ್​ಆರ್​’ ಸ್ಟಾರ್ ಜೊತೆ ಶಿವರಾಜ್ ಕುಮಾರ್ ನಟನೆ, ನಿರ್ದೇಶಕ ಯಾರು?
ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on: Jan 05, 2024 | 5:15 PM

Share

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಅತ್ಯಂತ ಬ್ಯುಸಿ ಸ್ಟಾರ್ ನಟ, ಇತ್ತೀಚೆಗೆ ಕನ್ನಡ ಚಿತ್ರರಂಗ ಮಾತ್ರವೇ ಅಲ್ಲದೆ ಪರಭಾಷೆಯ ಸಿನಿಮಾರಂಗಗಳಿಂದಲೂ ಒಂದರ ಹಿಂದೊಂದು ಅವಕಾಶಗಳು ಶಿವಣ್ಣನನ್ನು ಅರಸಿ ಬರುತ್ತಿವೆ. ಪರಭಾಷೆಯ ದೊಡ್ಡ ಸ್ಟಾರ್ ನಟರೇ, ತಮ್ಮ ಸಿನಿಮಾದಲ್ಲಿ ಶಿವಣ್ಣ ಇರಬೇಕೆಂದು, ಪ್ರಮುಖ ಪಾತ್ರದಲ್ಲಿ ನಟಿಸಬೇಕೆಂದು ಬಯಸುತ್ತಿದ್ದಾರೆ. ರಜನೀಕಾಂತ್ ಜೊತೆಗೆ ‘ಜೈಲರ್’ ಸಿನಿಮಾದಲ್ಲಿ ನಟಿಸಿದ್ದ ಶಿವಣ್ಣ, ಧನುಶ್ ಜೊತೆ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ತೆಲುಗಿನ ದೊಡ್ಡ ಸ್ಟಾರ್ ನಟನೊಟ್ಟಿಗೆ ಪರದೆ ಹಂಚಿಕೊಳ್ಳಲಿದ್ದಾರೆ.

‘ಆರ್​ಆರ್​ಆರ್’ ಸಿನಿಮಾದ ಸ್ಟಾರ್ ನಟ ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್ ಹೊಸದೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ಹಲವು ದಿನಗಳಿಂದಲೂ ಸುದ್ದಿ ಹರಿದಾಡುತ್ತಿತ್ತು. ಇದೀಗ ಇದು ಖಾತ್ರಿಗೊಂಡಿದೆ. ಶಿವರಾಜ್ ಕುಮಾರ್ ಹಾಗೂ ರಾಮ್ ಚರಣ್ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಮೇ ತಿಂಗಳಿನಿಂದ ಹೈದರಾಬಾದ್​ನಲ್ಲಿ ಪ್ರಾರಂಭವಾಗಲಿದೆ.

ಕೆಲ ದಿನಗಳ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಿವರಾಜ್ ಕುಮಾರ್, ‘ರಾಮ್ ಚರಣ್ ಜೊತೆಗೆ ಸಿನಿಮಾ ಮಾಡುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಈಗಲೇ ಏನೂ ಹೇಳಲಾಗುವುದಿಲ್ಲ, ಬುಚ್ಚಿ ಬಾಬು ಸನಾ, ಭೇಟಿ ಆಗಬೇಕು ಎಂದು ಹೇಳಿದ್ದಾರೆ. ಬರುವಂತೆ ಹೇಳಿದ್ದೇನೆ. ನೋಡೋಣ ಮುಂದೇನಾಗುತ್ತದೆ’ ಎಂದಷ್ಟೆ ಹೇಳಿದ್ದರು. ಆದರೆ ಇದೀಗ ಹೊರಬಿದ್ದಿರುವ ಸುದ್ದಿಯ ಪ್ರಕಾರ, ರಾಮ್ ಚರಣ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ನಟಿಸುವುದು ಪಕ್ಕಾ ಆಗಿದೆ.

ಇದನ್ನೂ ಓದಿ:ವಿಷ್ಣು ಸ್ಮಾರಕ ವಿವಾದ: ಶಿವರಾಜ್ ಕುಮಾರ್ ಹೇಳಿದ್ದು ಹೀಗೆ…

ಶಿವರಾಜ್ ಕುಮಾರ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನೂ ಅಲ್ಲ. ತೆಲುಗು ಚಿತ್ರರಂಗದಲ್ಲಿ ಹಲವು ಆತ್ಮೀಯ ಗೆಳೆಯರನ್ನು ಶಿವಣ್ಣ ಹೊಂದಿದ್ದಾರೆ. ಮಾತ್ರವಲ್ಲದೆ ಈಗಾಗಲೆ ಒಂದು ತೆಲುಗು ಸಿನಿಮಾದಲ್ಲಿ ನಟನೆ ಸಹ ಮಾಡಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ ‘ಗೌತಮಿ ಪುತ್ರ ಶಾತಕರ್ಣಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದು ಅವರಿಗೆ ಎರಡನೇ ತೆಲುಗು ಸಿನಿಮಾ. ಇದಾದ ಬಳಿಕ ಮತ್ತೊಮ್ಮೆ ನಂದಮೂರಿ ಬಾಲಕೃಷ್ಣ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುವ ಸಾಧ್ಯತೆ ಇದೆ.

ಶಿವರಾಜ್ ಕುಮಾರ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಕನ್ನಡದಲ್ಲಿ ‘ಕರಟಕ ಧಮನಕ’ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ, ‘ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಸಿದ್ದಾರೆ. ಕೆಲವೇ ದಿನಗಳಲ್ಲಿ ದಿನಕರ್ ತೂಗುದೀಪ್ ನಿರ್ದೇಶನದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ. ‘ಘೋಸ್ಟ್ 2’ಗೆ ತಯಾರಿ ಆರಂಭವಾಗಿದೆ. ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಈ ಸಿನಿಮಾದಲ್ಲಿ ಶಿವಣ್ಣನ ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ