AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೈಲಾರಿ 2’ ಕನ್ಫರ್ಮ್, ‘ಕಬ್ಜ 2’ ಡೌಟ್? ಡಿಫರೆಂಟ್ ಹೇಳಿಕೆ ಕೊಟ್ಟ ಚಂದ್ರು-ಶಿವಣ್ಣ

ನಿರ್ದೇಶಕ ಆರ್. ಚಂದ್ರು 'ಕಬ್ಜ 2' ನೂರಕ್ಕೆ ನೂರರಷ್ಟು ಆಗುತ್ತದೆ ಎಂದಿದ್ದರೆ, ಶಿವಣ್ಣ ಮಾತ್ರ ತಾನಿನ್ನೂ ಆ ಚಿತ್ರಕ್ಕೆ ಕಮಿಟ್ ಆಗಿಲ್ಲ ಎಂದಿದ್ದಾರೆ. ಇದರ ನಡುವೆ ಹ್ಯಾಟ್ರಿಕ್ ಹೀರೋ ಶಿವಣ್ಣ 'ಮೈಲಾರಿ 2' ಸಿನಿಮಾ ಆಗುವುದು ಪಕ್ಕಾ ಎಂದು ತಿಳಿಸುವ ಮೂಲಕ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.

'ಮೈಲಾರಿ 2' ಕನ್ಫರ್ಮ್, 'ಕಬ್ಜ 2' ಡೌಟ್? ಡಿಫರೆಂಟ್ ಹೇಳಿಕೆ ಕೊಟ್ಟ ಚಂದ್ರು-ಶಿವಣ್ಣ
ಚಂದ್ರು-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Sep 08, 2026 | 11:01 AM

Share

ಮುಖ್ಯಾಂಶಗಳು

  • 'ಕಬ್ಜ 2' ಕಮಿಟ್‌ಮೆಂಟ್ ಇಲ್ಲ ಎಂದ ಶಿವಣ್ಣ
  • ಚಂದ್ರು ಮಾತಿಗೂ ನಟನ ಹೇಳಿಕೆಗೂ ಮ್ಯಾಚ್ ಆಗ್ತಿಲ್ಲ
  • ಆರ್. ಚಂದ್ರು ಕಾನ್ಫಿಡೆನ್ಸ್, ಸೆಂಚುರಿ ಸ್ಟಾರ್ ಸಸ್ಪೆನ್ಸ್

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಮುಂಬರುವ ಸಿನಿಮಾಗಳ ಬಗ್ಗೆ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಚರ್ಚೆಯೊಂದು ಶುರುವಾಗಿದೆ. ನಿರ್ದೇಶಕ ಆರ್. ಚಂದ್ರು ಮತ್ತು ಶಿವಣ್ಣ ಅವರ ಹೇಳಿಕೆಗಳು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹಾಗೂ ಗೊಂದಲವನ್ನು ಸೃಷ್ಟಿಸಿವೆ. ಚಂದ್ರು ಅವರು ‘ಕಬ್ಜ 2’ ಬರುತ್ತೆ ಅಂದ್ರೆ, ಶಿವಣ್ಣ ನಾನು ಆ ಚಿತ್ರಕ್ಕೆ ಕಮಿಟ್ ಆಗಿಲ್ಲ ಎಂದಿದ್ದಾರೆ.

‘ಒರಿಜಿನಲ್ ಮಾನ್​ಸ್ಟರ್’ ಸಿನಿಮಾ ಸುದ್ದಿಗೋಷ್ಠಿಯಲ್ಲ ಮಾತನಾಡಿದ ನಿರ್ದೇಶಕ ಆರ್. ಚಂದ್ರು, ‘ಕಬ್ಜ 2 ಸಿನಿಮಾ ನೂರಕ್ಕೆ ನೂರಷ್ಟು ಬರುತ್ತೆ’ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳಿಕೊಂಡರು. ಆದರೆ, ಈ ಬಗ್ಗೆ ಶಿವಣ್ಣ ಅವರ ಬಳಿ ಕೇಳಿದಾಗ, ‘ನಾನು ಕಬ್ಜ 2 ಚಿತ್ರಕ್ಕೆ ಇನ್ನೂ ಯಾವುದೇ ಕಮಿಟ್‌ಮೆಂಟ್ ನೀಡಿಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕಬ್ಜ 2’ ಕಥೆ ಒಂದು ಕಡೆಯಾದರೆ, ಶಿವಣ್ಣ ನೀಡಿರುವ ಮತ್ತೊಂದು ಸೀಕ್ವೆಲ್ ಅಪ್‌ಡೇಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಬ್ಲಾಕ್‌ಬಸ್ಟರ್ ‘ಮೈಲಾರಿ’ ಸಿನಿಮಾದ ಸೀಕ್ವೆಲ್ ‘ಮೈಲಾರಿ 2’ ಖಂಡಿತವಾಗಿಯೂ ಆಗಲಿದೆ ಎಂದು ಶಿವಣ್ಣ ಸೂಪರ್ ನ್ಯೂಸ್ ಕೊಟ್ಟಿದ್ದಾರೆ.

ಒಟ್ಟಿನಲ್ಲಿ ‘ಕಬ್ಜ 2’ ಸೆಟ್ಟೇರುತ್ತದೆಯೋ ಇಲ್ಲವೋ ಎಂಬ ಸಸ್ಪೆನ್ಸ್ ಒಂದೆಡೆಯಿದ್ದರೆ, ‘ಮೈಲಾರಿ 2’ ಬರುವುದು ಪಕ್ಕಾ ಆಗಿದೆ. ಈ ಎರಡು ದೊಡ್ಡ ಸಿನಿಮಾಗಳ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ದೇಶಕ ಆರ್. ಚಂದ್ರು ಮತ್ತು ಶಿವಣ್ಣ ಕಡೆಯಿಂದ ಯಾವ ರೀತಿಯ ಸ್ಪಷ್ಟನೆ ಸಿಗಲಿದೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ

ಶಿವರಾಜ್​ಕುಮಾರ್ ಸದ್ಯ ‘ಒರಿಜಿನಲ್ ಮಾನ್​​ಸ್ಟರ್’ ಸಿನಿಮಾದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ‘ಕಬ್ಜ’ ಬಳಿಕ ಚಂದ್ರು ಹಾಗೂ ಶಿವಣ್ಣ ಮತ್ತೆ ಒಂದಾಗುತ್ತಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರುತ್ತಿದೆ ಎಂಬುದು ವಿಶೇಷ. ಹಿಂದಿಯಲ್ಲೂ ಈ ಸಿನಿಮಾ ಶೂಟ್ ಆಗಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್