AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ಅದಕ್ಕಾಗಿಯೇ..’: ಮನದ ಮಾತು ತಿಳಿಸಿದ ಶಿವಣ್ಣ

ಗೀತಾ ಶಿವರಾಜ್​ಕುಮಾರ್​ ಅವರಿಗೆ ಬೆಂಬಲ ನೀಡಲು ಚಿತ್ರರಂಗದ ಅನೇಕರು ಮುಂದಾಗಿದ್ದಾರೆ. ಈ ಕುರಿತು ಶಿವರಾಜ್​ಕುಮಾರ್​ ಅವರ ಮನೆಯಲ್ಲಿ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೀತಾ ಸ್ಪರ್ಧಿಸುತ್ತಿರುವುದರಿಂದ ರಾಜಕೀಯದ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂದು ಶಿವರಾಜ್​ಕುಮಾರ್​ ತಿಳಿಸಿದ್ದಾರೆ.

‘ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ಅದಕ್ಕಾಗಿಯೇ..’: ಮನದ ಮಾತು ತಿಳಿಸಿದ ಶಿವಣ್ಣ
ಡಾ. ರಾಜ್​ಕುಮಾರ್​, ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Mar 18, 2024 | 9:33 PM

Share

ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಅವರು ಕಣಕ್ಕೆ ಇಳಿಯುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆ. ಅವರ ಪರವಾಗಿ ಕನ್ನಡ ಚಿತ್ರರಂಗದ ಅನೇಕರು ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ಪ್ರದರ್ಶಕರು ಹಾಗು ವಿತರಕರು ಸೇರಿದಂತೆ ಹಲವರು ಇಂದು (ಮಾರ್ಚ್​ 18) ಶಿವರಾಜ್​ಕುಮಾರ್​ (Shivarajkumar) ಮತ್ತು ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ಮಾತನಾಡಿದ ಶಿವರಾಜ್​ಕುಮಾರ್​ ಅವರು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

‘ಇವತ್ತು ಒಂದು ಪರಿಪೂರ್ಣತೆ ಕಾಣಿಸುತ್ತಿದೆ. ಸಿನಿಮಾ ಇಂಡಸ್ಟ್ರಿ ಒಂದು ಕುಟುಂಬ ಅಂತ ಅಪ್ಪಾಜಿ ಹೇಳುತ್ತಾ ಇರುತ್ತಾರೆ. ನಟರು, ನಿರ್ದೇಶಕರು, ನಿರ್ಮಾಪಕರು ಮಾತ್ರವಲ್ಲ. ಚಿತ್ರರಂಗ ಎಂದರೆ ಪ್ರದರ್ಶಕರು, ವಿತರಕರು ಕೂಡ ಬರುತ್ತಾರೆ. ಎಲ್ಲರೂ ಸೇರಿ ಕುಟುಂಬ ಆಗುತ್ತದೆ. ಆ ಇಡೀ ಕುಟುಂಬ ಇವತ್ತು ಗೀತಾ ಪರವಾಗಿ ನಿಂತಿದ್ದಕ್ಕೆ ನಮಗೆ ಹೆಮ್ಮೆ ಆಗುತ್ತದೆ. ಇದಕ್ಕೆ ನಾವು ಧನ್ಯ’ ಎಂದು ಶಿವರಾಜ್​ಕುಮಾರ್ ಮಾತು ಆರಂಭಿಸಿದರು.

‘ಮನಸ್ಸು ಇದ್ದಲ್ಲಿ ಮಾರ್ಗ ಇರುತ್ತದೆ ಅಂತ ನಾನು ಗೀತಾಗೆ ಹೇಳುತ್ತೇನೆ. ಅನುಭವ ಅನ್ನೋದು ಮುಖ್ಯವಲ್ಲ. ಹೊಸತನವೇ ಅನುಭವ. ಹೊಸತನವನ್ನು ಹುಡುಕಿಕೊಂಡು ಹೋದಾಗಲೇ ಹೊಸ ರೂಪ ಸಿಗುತ್ತದೆ. ಈಗಾಗಲೇ ಪಳಗಿದ್ದರೆ ಮಾತ್ರ ಸಾಲದು. ಒಂದು ಭರವಸೆ, ನಂಬಿಕೆ ಬೇಕು. ಇವರು ಕೆಲಸ ಮಾಡುತ್ತಾರೆ ಎಂಬ ಭರವಸೆ ಜನರಿಗೆ ಬಂದರೆ ಅನುಭವ ಎಂಬುದು ಗಣನೆಗೆ ಬರುವುದಿಲ್ಲ. ಒಳ್ಳೆಯ ಹೃದಯದಿಂದ ನಾವು ಕೆಲಸ ಮಾಡುತ್ತೇವೆ ಎಂಬುದನ್ನು ಜನರಿಗೆ ಹೇಳಬೇಕು’ ಎಂದು ಶಿವಣ್ಣ ಹೇಳಿದ್ದಾರೆ.

ಶಿವರಾಜ್​ಕುಮಾರ್ ಮಾತನಾಡಿದ ವಿಡಿಯೋ:

‘ಸಾಕಷ್ಟು ಜನರು ಏನೇನೋ ಕೇಳಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಅಪ್ಪಾಜಿಗೆ ರಾಜಕೀಯ ಆಗುತ್ತಿರಲಿಲ್ಲ ಅಂತ ಕೆಲವರು ಹೇಳ್ತಾರೆ. ಹಾಗೇನೂ ಇಲ್ಲ. ಯಾವುದೇ ಸಮಾರಂಭ ಆಗಲಿ, ಯಾವುದೇ ಮುಖ್ಯಮಂತ್ರಿ ಆಗಲಿ, ಮೊದಲು ದೊಡ್ಮನೆಗೆ ಬಂದು ಅಪ್ಪಾಜಿ ಜೊತೆ ಮಾತಾಡುತ್ತಿದ್ದರು. ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ರಾಜಕೀಯದ ವ್ಯಕ್ತಿಗಳು ಬೇಕು. ಇಲ್ಲಾಂದ್ರೆ ನನಗೆ ಯಾಕೆ ಬಂಗಾರಪ್ಪನ ಮಗಳು ತರಬೇಕು ಹೇಳಿ? ಅವರು ರಾಜಕೀಯವನ್ನು ಯಾವಾಗಲೂ ತಪ್ಪು ಅಂತ ಹೇಳಿಲ್ಲ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಗೆದ್ದೇ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್

‘ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಆಗುತ್ತಿರಲಿಲ್ಲ ಅಷ್ಟೇ. ತಮ್ಮ ಕೆಲಸ ನಟನೆ ಅಂತ ಹೇಳಿದ್ದರು. ನನಗೂ ರಾಜಕೀಯಕ್ಕೆ ಬನ್ನಿ ಅಂತ ಕೆಲವರು ಕರೆದಿದ್ದರು. ನನಗೆ ಬೇಡ ಅಂದೆ. ಅಪ್ಪಾಜಿ ನನಗೆ ಕೊಟ್ಟ ಬಳುವಳಿ ಸಿನಿಮಾ. ಆದರೆ ಗೀತಾಗೆ ಹಾಗಲ್ಲ. ಅವರ ತಂದೆಯ ರಕ್ತನೂ ಇದೆ. ಅದೊಂದು ಜವಾಬ್ದಾರಿ ಅವರಿಗೆ ಇದೆ. ಬರೀ ಗಂಡಸರಿಗೆ ಮಾತ್ರ ಜವಾಬ್ದಾರಿ ಇರಬೇಕಾ? ಹೆಣ್ಮಕ್ಕಳಿಗೆ ಇರಬಾರದಾ? ಕರ್ನಾಟಕದ ಮಹಿಳೆಯರು ರಾಜಕೀಯದಲ್ಲಿ ಕಡಿಮೆ ಜನ ಇದ್ದಾರೆ. ಈಗ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ