Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ

ಸಾಂಡ್ಯಲ್​ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ.

Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
ಶಿವಣ್ಣ ಮತ್ತು ಕುಟುಂಬ ಕುತರುಗೆ ಭೇಟಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 10, 2022 | 12:59 PM

ಮಂಗಳೂರು: ಸಾಂಡ್ಯಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವಣ್ಣ (Hattrick Hero Shivaraj Kumar ) ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜನಿಗೆ ಪ್ರಿಯವಾದ ಮತ್ತು ಭಕ್ತರು ಅಂದುಕೊಂಡದನ್ನು ಹರಕೆಯ ಮೂಲಕ ನೀಡಲು ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಮಾಡುತ್ತಾರೆ. ಈ ಸಾನಿಧ್ಯಕ್ಕೆ ಭೇಟಿ ನೀಡಿದ ಶಿವಣ್ಣ ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟ ಪ್ರಾರ್ಥನೆ ಮಾಡಿದ್ದಾರೆ. ವೇದ (Veda) ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಭೇಟಿ ನೀಡಿದ್ದ ಶಿವಣ್ಣ ಈ ಕ್ಷೇತ್ರಕ್ಕೂ ಭೇಟಿ ನೀಡಿದ್ದಾರೆ. ಮಂಗಳೂರಿನ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ.

ಶಿವರಾಜ್ ಕುಮಾರ್ ಜೊತೆಗೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವಣ್ಣ ಮಗಳು ಕೂಡ ತಂದೆ ಜೊತೆಗೆ ಭೇಟಿ ನೀಡಿದ್ದಾರೆ. ವೇದ ಚಿತ್ರ ತಂಡವು ಕೂಡ ಶಿವಣ್ಣನಿಗೆ ಸಾಥ್ ನೀಡಿದೆ. ವೇದ ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವಣ್ಣ. ಸಂಜೆ ಪಣಂಬೂರು ಕಡಲ ಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ನಡೆಯಲಿದೆ. ವೇದ ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.

ತಮಿಳು ನಟ ಧನುಷ್ ಜತೆ ಸ್ಕ್ರೀನ್ ಶೇರ್ ಮಾಡಲಿರುವ ಶಿವಣ್ಣ

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ ವುಡ್ ಶಿವಣ್ಣನ ಆಗಮನವಾಗಿದೆ.

ಇದನ್ನು ಓದಿ:ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ

ಸ್ಯಾಂಡಲ್ ವುಡ್ ಶಿವಣ್ಣ ಈಗ ಅರುಣ್ ಮಾಥೇಶ್ವರನ್ ನಿರ್ದೇಶನದ ತಮಿಳು ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದು, ಧನುಷ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 10 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ