ಶಿವರಾಜ್​ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ; ವಿಶೇಷವಾಗಿ ಧನ್ಯವಾದ ಹೇಳಿದ ಶಿವಣ್ಣ

ಶಿವರಾಜ್​ಕುಮಾರ್ ಅವರು ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’. ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ್ದು ಈ ದಿನಾಂಕದಂದು.

ಶಿವರಾಜ್​ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ; ವಿಶೇಷವಾಗಿ ಧನ್ಯವಾದ ಹೇಳಿದ ಶಿವಣ್ಣ
ಶಿವರಾಜ್​ಕುಮಾರ್

Updated on: Feb 21, 2023 | 11:01 AM

ಶಿವರಾಜ್​ಕುಮಾರ್ (Shivarajkumar) ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ ಕಳೆದಿದೆ. ಸುದೀರ್ಘ ಪಯಣದಲ್ಲಿ ಅವರ ಬತ್ತಳಿಕೆಯಿಂದ 125 ಚಿತ್ರಗಳು ತೆರೆಗೆ ಬಂದಿವೆ. ಈ ಪಯಣದಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಅನೇಕರನ್ನು ಗಳಿಸಿದ್ದಾರೆ, ಅನೇಕ ಆಪ್ತರನ್ನು ಕಳೆದುಕೊಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಶಿವಣ್ಣ (Shivanna) ಅವರು ನಟನೆಯ ಜೊತೆಗೆ ಸಿಂಪ್ಲಿಸಿಟಿಯಿಂದ ಹೆಚ್ಚು ಇಷ್ಟವಾಗುತ್ತಾರೆ. ಈಗ ಶಿವರಾಜ್​ಕುಮಾರ್ ಅವರು ಸುದೀರ್ಘ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಶಿವರಾಜ್​ಕುಮಾರ್ ಅವರು ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’. ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ್ದು ಈ ದಿನಾಂಕದಂದು. ಈ ದಿನವನ್ನು ಶಿವಣ್ಣ ಸೋಶಿಯಲ್ ಮೀಡಿಯಾದಲ್ಲಿ ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

‘ಕನ್ನಡ ಚಿತ್ರರಂಗಕ್ಕೆ ನಾನು ಪಾದಾರ್ಪಣೆ ಮಾಡಿ ಇಂದಿಗೆ 37 ವರ್ಷಗಳು. ಆನಂದ್ ಚಿತ್ರದ ಮೊದಲ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಆನಂದ್ ಇಂದ ವೇದವರೆಗೂ ನೀವು ಕೊಟ್ಟ ಪ್ರೀತಿ ಬೆಲೆಕಟ್ಟಲಾಗದ್ದು. ನನ್ನನ್ನು ನೀವು ಕೇವಲ ಒಬ್ಬ ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮನೆಮಗನಾಗಿ ಬೆಳೆಸಿದ್ದೀರಿ. ದೇವರ ಸ್ವರೂಪವಾಗಿರುವ ಅಭಿಮಾನಿಗಳಿಗೆ, ಮಾಧ್ಯಮ ಮಿತ್ರರಿಗೆ, ಹಿರಿಯರಿಗೆ, ಕಿರಿಯರಿಗೆ, ಸಹದ್ಯೋಗಿಗಳಿಗೆ ಹಾಗು ನನ್ನ ಇಡೀ ಕುಟುಂಬಕ್ಕೆ ಅನಂತ ವಂದನೆಗಳು’ ಎಂದು ಶಿವಣ್ಣ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರ ಮೊದಲ ಸಿನಿಮಾ ‘ಆನಂದ್’ ಯಶಸ್ಸು ಕಂಡಿತು. ಈ ಚಿತ್ರದಿಂದ ಶಿವರಾಜ್​ಕುಮಾರ್ ವೃತ್ತಿಜೀವನಕ್ಕೆ ಭದ್ರಬುನಾದಿ ಸಿಕ್ಕಿತು. ಅವರ ನಟನೆಯ 125ನೇ ಚಿತ್ರ ‘ವೇದ’ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಲಾಯಿತು.

ಶಿವರಾಜ್​ಕುಮಾರ್ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಪ್ರತಿ ವರ್ಷ ಅವರ ನಟನೆಯ ಸರಾಸರಿ ಮೂರು ಚಿತ್ರಗಳು ರಿಲೀಸ್ ಆಗುತ್ತವೆ. ಹಲವು ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಇದ್ದಾರೆ. ‘ಭೈರತಿ ರಣಗಲ್​’ ಚಿತ್ರಕ್ಕಾಗಿ ನರ್ತನ್ ಜೊತೆ ಅವರು ಕೈ ಜೋಡಿಸಿದ್ದಾರೆ. ‘45’, ನೀ ಸಿಗೋವರೆಗೂ’, ಶ್ರೀನಿ ನಿರ್ದೇಶನದ ‘ಘೋಸ್ಟ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ನಟಿಸುತ್ತಿದ್ದಾರೆ. ರಜನಿಕಾಂತ್​ ನಟನೆಯ ‘ಜೈಲರ್​, ಧನುಷ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲಿ ಶಿವಣ್ಣ ಬಣ್ಣಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ
https://tv9kannada.com/entertainment

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us