Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​

Rajinikanth | Shivarajkumar: ರಜನಿಕಾಂತ್​ ನಟನೆಯ 169ನೇ ಸಿನಿಮಾಗೆ ಶೀರ್ಷಿಕೆ ಅನೌನ್ಸ್​ ಆಗಿದೆ. ಈ ಚಿತ್ರಕ್ಕೆ ‘ಜೈಲರ್​’ ಎಂದು ಹೆಸರು ಇಡಲಾಗಿದ್ದು, ಫಸ್ಟ್​​ ಲುಕ್ ಪೋಸ್ಟರ್​ನಿಂದ​ ನಿರೀಕ್ಷೆ ಹೆಚ್ಚಿದೆ.

Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
ರಜನಿಕಾಂತ್​. ಶಿವರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jun 17, 2022 | 11:56 AM

‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಮತ್ತು ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ (Shivarajkumar) ಜೊತೆಯಾಗಿ ನಟಿಸಲಿರುವ ಹೊಸ ಚಿತ್ರಕ್ಕೆ ಶೀರ್ಷಿಕೆ ಅನೌನ್ಸ್​ ಆಗಿದೆ. ಈ ಚಿತ್ರಕ್ಕೆ ನೆಲ್ಸನ್​ ದಿಲೀಪ್​​ ಕುಮಾರ್ ನಿರ್ದೇಶನ ಮಾಡಲಿದ್ದು, ‘ಜೈಲರ್​’ ಎಂದು ಟೈಟಲ್​ ಇಡಲಾಗಿದೆ. ನಿರ್ಮಾಣ ಸಂಸ್ಥೆ ‘ಸನ್​ ಪಿಕ್ಚರ್ಸ್​’ ಮೂಲಕ ಈ ಸುದ್ದಿ ಅಧಿಕೃತವಾಗಿ ಹೊರಬಿದ್ದಿದೆ. ‘ಜೈಲರ್​’ (Jailer) ಸಿನಿಮಾದ ಟೈಟಲ್​ ಪೋಸ್ಟರ್​ ಕೌತುಕ ಮೂಡಿಸುವಂತಿದೆ.​ ಘಟಾನುಘಟಿ ಕಲಾವಿದರು ಮತ್ತು ತಂತ್ರಜ್ಞರು ಈ ಸಿನಿಮಾಗಾಗಿ ಒಂದಾಗುತ್ತಿರುವುದರಿಂದ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ. ಈಗ ಟೈಟಲ್​ ಪೋಸ್ಟರ್​ ಕಂಡು ರಜನಿಕಾಂತ್​ ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ.

ರಜನಿಕಾಂತ್​ ಜೊತೆ ಶಿವರಾಜ್​ಕುಮಾರ್​ ನಟಿಸುವ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿಬಂದಿತ್ತು. ಅದನ್ನು ಶಿವಣ್ಣ ಕೂಡ ಖಚಿತ ಪಡಿಸಿದ್ದಾಗಿದೆ. ‘ರಜನಿಕಾಂತ್ ಜತೆ ನಟಿಸುವುದು ನಿಜಕ್ಕೂ ಉತ್ತಮ ಅವಕಾಶ. ಈ ಚಿತ್ರದಲ್ಲಿ ಅವರ ಜತೆ ತೆರೆ ಹಂಚಿಕೊಳ್ಳುತ್ತಿರುವುದು ಖುಷಿ ನೀಡಿದೆ. ಅವರು ನನ್ನನ್ನು ಬಾಲ್ಯದಿಂದಲೂ ನೋಡಿದ್ದಾರೆ. ಅವರ ಜತೆ ನನಗೆ ವಿಶೇಷ ಬಾಂಧವ್ಯ ಇದೆ. ಸಿನಿಮಾದಲ್ಲಿ ಪಾತ್ರ ಹೇಗೇ ಇರಲಿ, ಈ ಪ್ರಾಜೆಕ್ಟ್​ನ ಭಾಗವಾಗಲು ನನಗೆ ಖುಷಿ ಇದೆ. ಬೆಳ್ಳಿ ಪರದೆಮೇಲೆ ರಜನಿಕಾಂತ್ ಮತ್ತು ನನ್ನನ್ನು ಒಟ್ಟಿಗೆ ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿ ಇದೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದರು.

ಇದನ್ನೂ ಓದಿ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
ರಜನಿಕಾಂತ್​ 169ನೇ ಸಿನಿಮಾಗೆ ನಿರ್ದೇಶಕ ಫಿಕ್ಸ್​; ‘ಬೀಸ್ಟ್’ ಡೈರೆಕ್ಟರ್​ ಜತೆ ಕೈ ಜೋಡಿಸಿದ ಸೂಪರ್​ ಸ್ಟಾರ್​
Image
‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

‘ಜೈಲರ್’​ ಸಿನಿಮಾ ಸಖತ್​ ಮಾಸ್​ ಆಗಿ ಮೂಡಿಬರಲಿದೆ ಎಂಬುದಕ್ಕೆ ಈ ಪೋಸ್ಟರ್​ ಸುಳಿವು ನೀಡುತ್ತಿದೆ. ರಕ್ತಸಿಕ್ತವಾಗಿರುವ ಮಚ್ಚನ್ನು ನೇತು ಹಾಕಲಾಗಿರುವ ಡೆಡ್ಲಿ ಪೋಸ್ಟರ್​ ಇದಾಗಿದ್ದು, ಅಭಿಮಾನಿಗಳ ವಲಯದಲ್ಲಿ ಸಖತ್​ ವೈರಲ್​ ಆಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾಗೆ ಶೂಟಿಂಗ್​ ಆರಂಭ ಆಗಲಿದೆ. ನಾಯಕಿಯಾಗಿ ಯಾರು ನಟಿಸಲಿದ್ದಾರೆ? ಬೇರೆ ಕಲಾವಿದರು ಯಾರೆಲ್ಲ ಇರಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Fri, 17 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ