AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಅಮೆರಿಕ ಹೋಗೋದು ಎಂದು? ಸರ್ಜರಿ ಯಾವಾಗ?; ಮಾಹಿತಿ ನೀಡಿದ ಗೀತಕ್ಕ

ಶಿವರಾಜ್ ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಇದಕ್ಕಾಗಿ ಅವರು ಅಮೆರಿಕಕ್ಕೆ ಹೋಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ‘ಭೈರತಿ ರಣಗಲ್’ಸಿನಿಮಾ ಪ್ರಚಾರದ ವೇಳೆ ಅವರು ತಮ್ಮ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಶಸ್ತ್ರಚಿಕಿತ್ಸೆಯ ನಂತರ ಕೆಲವು ತಿಂಗಳು ವಿಶ್ರಾಂತಿ ಪಡೆಯುವ ಯೋಜನೆಯಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

ಶಿವರಾಜ್​ಕುಮಾರ್ ಅಮೆರಿಕ ಹೋಗೋದು ಎಂದು? ಸರ್ಜರಿ ಯಾವಾಗ?; ಮಾಹಿತಿ ನೀಡಿದ ಗೀತಕ್ಕ
ಶಿವಣ್ಣ-ಗೀತಕ್ಕ
ರಾಜೇಶ್ ದುಗ್ಗುಮನೆ
| Edited By: |

Updated on:Dec 10, 2024 | 1:06 PM

Share

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೋಗುವ ದಿನ ಹತ್ತಿರ ಬಂದೇ ಬಿಟ್ಟಿದೆ. ಅಲ್ಲಿ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ. ಇದಕ್ಕೆ ದಿನಾಂಕ ಕೂಡ ನಿಗದಿ ಆಗಿದೆ.

ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್​ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ ತೊಂದರೆ ಆಗಿದೆ. ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆರಂಭದಲ್ಲಿ ಭಯ ಆಯ್ತು. ಈಗ ಧೈರ್ಯ ತೆಗೆದುಕೊಂಡಿದ್ದೇನೆ. ಚಿಕಿತ್ಸೆಗೆ ಅಮೆರಿಕಕ್ಕೆ ಹೋಗಬೇಕು’ ಎಂದು ಶಿವಣ್ಣ ಹೇಳಿದ್ದರು.

ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವ ದಿನಾಂಕ ಹತ್ತಿರ ಆಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಶಿವರಾಜ್​ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಡಿಸೆಂಬರ್ 18ಕ್ಕೆ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 24ರಂದು ಸರ್ಜರಿ ನಡೆಯಲಿದೆ.

ಶಿವರಾಜ್​ಕುಮಾರ್ ಅವರೇ ಹೇಳಿರುವ ಪ್ರಕಾರ ಶಸ್ತ್ರಚಿಕಿತ್ಸೆ ಬಳಿಕ ಕೆಲ ತಿಂಗಳು ವಿಶ್ರಾಂತಿ ಪಡೆಯಲಿದ್ದಾರಂತೆ. ಅವರು ತಮ್ಮ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ನಿರಂತರವಾಗಿ ಶೂಟಿಂಗ್​ನಲ್ಲಿ ತೊಡಗಿಕೊಳ್ಳುತ್ತಾ ಬಂದಿದ್ದಾರೆ. ಅಪ್ಪು ನಿಧನ ಹೊಂದಿದಾಗಲೂ ಸಣ್ಣ ಗ್ಯಾಪ್ ಪಡೆದು ಅವರು ನಟನೆಗೆ ಮರಳಿದರು. ಆದರೆ, ಈ ಬಾರಿ ಆರೋಗ್ಯದ ವಿಚಾರ ಆಗಿರುವುದರಿಂದ ಅವರು ಕೊಂಚ ದೀರ್ಘ ಬ್ರೇಕ್ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಸಿನಿಮಾ ‘ಮಫ್ತಿ’ ಚಿತ್ರದ ಪ್ರೀಕ್ವೆಲ್. ಇದಲ್ಲದೆ, ಅವರ ನಟನೆಯ ‘45’ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜೊತೆ ಉಪೇಂದ್ರ, ರಾಜ್ ಬಿ ಶೆಟ್ಟಿ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ನಿರ್ದೇಶನ ಇದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Tue, 10 December 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ